LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವಿಜಯ ರಾಘವೇಂದ್ರ ಅಭಿನಯದ "ಜೋಗ್ 101" ಚಿತ್ರದ ಮೊದಲ ಹಾಡು ಬಿಡುಗಡೆ

ನಿರ್ಮಾಪಕ & ಕ್ರಿಯೇಟಿವ್ ಡೈರೆಕ್ಟರ್ ರಾಘು ರವರ ಸೆವೆನ್ ಸ್ಟಾರ್ ಪಿಕ್ಚರ್ಸ್ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಹಾಗೂ ಕರ್ನಾಟಕದ ಚಿನ್ನಾರಿಮುತ್ತ ವಿಜಯ್ ರಾಘವೇಂದ್ರ ಅಭಿನಯಯದ, ವಿಜಯ್ ಕನ್ನಡಿಗ ನಿರ್ದೇಶನದ, "ಜೋಗ್ 101" ಚಿತ್ರದ ಮೊದಲನೆಯ ಹಾಡು "ಮುಂಜಾನೆ ಮಂಜನ್ನು " ಹಾಡಿನ ಲಿರಿಕಲ್ ವಿಡಿಯೋ ಸೆವೆನ್ ಸ್ಟಾರ್ ಪಿಕ್ಚರ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಹಾಡಿಗೆ ಡಾ.ವಿ.ನಾಗೇಂದ್ರಪ್ರಸಾದ್ ರವರ ಸಾಹಿತ್ಯವಿದ್ದು,
ಭಾರತದ ಸುಪ್ರಸಿದ್ಧ ಗಾಯಕ ರಘುದೀಕ್ಷಿತ್ ಹಾಡಿದ್ದಾರೆ ಹಾಗು ಈ ಹಾಡಿನ ಇಂಗ್ಲೀಷ್ ಭಾಷಾಂತರವನ್ನು ಸುಮನ್ ಜಾದೂಗಾರ್ ಮಾಡಿದ್ದಾರೆ.

ಈ ಹಾಡಿನ ಬಿಡುಗಡೆಯ ವಿಚಾರವನ್ನು ತಾವುಗಳು ದೃಶ್ಯ ಮಾಧ್ಯಮದಲ್ಲಿ ಅಥವಾ ಪತ್ರಿಕೆ ಮಾಧ್ಯಮದಲ್ಲಿ ಪ್ರಕಟಿಸಿ ನಮ್ಮನ್ನು        ಪ್ರೋತ್ಸಾಹಿಸಬೇಕೆಂದು ಕೋರಿಕೊಳ್ಳುತ್ತೇವೆ. ತಾವುಎಂದಿನಂತೆ ನಮ್ಮ ಜೊತೆಯಲ್ಲಿದ್ದು, ಈ ಹಾಡನ್ನಾ ಜನಸಾಮಾನ್ಯರಿಗೆ ಮುಟಿಸುವಲ್ಲಿ ಸಹಕರಿಸಿಬೇಕೆಂದು ಸೆವೆನ್ ಸ್ಟಾರ್ ಪಿಕ್ಚರ್ಸ್ ಸಂಸ್ಥೆಯವರು ವಿನಂತಿ ಮಾಡಿಕೊಂಡಿದ್ದಾರೆ.

ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ "ಜೋಗ್ 101" ಚಿತ್ರದ ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು