LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಅದ್ದೂರಿಯಾಗಿ ನಡೆದ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣದ ಸಮ್ಮುಖದಲ್ಲಿ ಮಂಗಳವಾರ ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು.

ಮುಜರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ರಥೋತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತಗಣ ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದು, ರಥವನ್ನ ಎಳೆದು, ರಥಕ್ಕೆ ಬಾಳೆಹಣ್ಣು, ದವನ ಎಸೆದು ತಮ್ಮ ಭಕ್ತಿ ಇಚ್ಚಾನುಸಾರ ಸಮರ್ಪಿಸಿ ಪುನೀತರಾದರು.

ಷಷ್ಠಿಯ ದಿನದಂದು ಮುಂಜಾನೆ 3ರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾಗಲಿವೆ. ಅಭಿಷೇಕ ಕಾರ್ಯಗಳು ಪ್ರಾರಂಭ ಗೊಂಡು, 5:30ಕ್ಕೆ ಮಹಾಮಂಗಳಾರತಿ ನೆರವೇರಿತು.ಗರ್ಭಗುಡಿಯಲ್ಲಿನ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳಿಗೆ ಪ್ರಾತಃ ಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂದಾಭಿಷೇಕ, ಭಸ್ಮದಭಿಷೇಕ
ದೊಂದಿಗೆ ಹೂವಿನ ಅಲಂಕಾರ ನೆರವೇರಿಸಲಾ ಯಿತು.

ರಾತ್ರಿ 8:30ರವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ದೊರೆಯಲಿದೆ. ಭಕ್ತರಿಗೆ ಅನ್ನ ದಾಸೋಹ, ಮಜ್ಜಿಗೆ, ಪಾನಕದ ವ್ಯವಸ್ಥೆ ಮಾಡಲಾಗಿತ್ತು. ಜಾತ್ರೆಗೆ ಆಗಮಿಸುವ ಭಕ್ತರಿಗೆ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿ
ಗಳಿಗೆ ಮೊಬೈಲ್ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಚಿನ್ನಾಭರಣ ಕಳವು ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.ಪಾರ್ಕಿಂಗ್ ವ್ಯವಸ್ಥೆ: ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ 1 ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್ ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಪೊಲೀಸ್ ಭದ್ರತೆ: ಘಾಟಿ ಬ್ರಹ್ಮರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು, ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹ ವ್ಯವಸ್ಥೆ ಮಾಡಲಾಗಿತ್ತು.

ಸಾರಿಗೆ ವ್ಯವಸ್ಥೆ: ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಅದೇರೀತಿ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವನ್ನ ಸಹ ಕಲ್ಪಿಸಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು