LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಜೋಡೆತ್ತು' ಚಿತ್ರ ತಂಡದಿಂದ ೨ನೇ ಹಂತದ ಚಿತ್ರೀಕರಣ ಪೂರ್ಣ

ಛಾಯಾಗ್ರಾಹಕ ಸುಧಾಕರ್ ರಾಜ್ ಈಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಚಿಕ್ಕಣ್ಣ ಹಾಗೂ ಸುನಿಲ್ ನಟನೆಯ 'ಜೋಡೆತ್ತು' ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಶೇ.೫೦ ರಷ್ಟು ಸಿನಿಮಾ ಚಿತ್ರೀಕರಣ ಮುಗಿದಿದೆ. ಇತ್ತೀಚೆಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾರೇಕಟ್ಟೆ ಎಂಬ ಹಳ್ಳಿಯಲ್ಲಿ ೨ನೇ ಹಂತದ ಚಿತ್ರೀಕರಣ ಮುಗಿಸಲಾಗಿದೆ. ೨ನೇ ಹಂತದ ಚಿತ್ರೀಕರಣದ ಕೊನೆ ದಿನ ರಂಗಾಯಣ ರಘು, ರಮೇಶ್ ಭಟ್ ನಟನೆಯ ಕೆಲ ದೃಶ್ಯಗಳನ್ನು ಸೆರೆ ಹಿಡಿದರು.
'ಜೋಡೆತ್ತು' ಚಿತ್ರದ ಮೊದಲ ಷೆಡ್ಯೂಲ್ ಚಿಕ್ಕಮಂಗಳೂರಿನಲ್ಲಿ ಆರಂಭವಾಗಿತ್ತು. ಬಳಿಕ ಕನಕಪುರದ ಬಳಿ ಒಂದು ಫೈಟ್ ಚಿತ್ರೀಕರಣ ಮಾಡಲಾಗಿತ್ತು. ೨೫ ದಿನಗಳ ಕಾಲ ಒಂದೇ ಷೆಡ್ಯೂಲ್ ಪ್ಲಾನ್ ಮಾಡಿ ಎಲ್ಲಾ ಕಲಾವಿದರ ಡೇಟ್ಸ್ ಪಡೆದು ಅದ್ದೂರಿಯಾಗಿ ಚಿತ್ರೀಕರಣ ನಡೆಸಿದೆವು. ೧೮೦ ಜನ ಪ್ರತಿದಿನ ಸೆಟ್‌ನಲ್ಲಿದ್ದರು. ೧೦೦೦ ಜನ ಜ್ಯೂನಿರ‍್ರ್÷್ಸ ಇಟ್ಟು ಕೊಂಡು ೫ ದಿನಗಳ ಕಾಲ ಶೂಟಿಂಗ್ ಮಾಡಿದ್ದೇವೆ . ನನಗಾಗಿ ಎಲ್ಲಾ ಕಲಾವಿದರು ತಂತ್ರಜ್ಞರು ಎಲ್ಲರೂ ಒಂದೇ ಫ್ಯಾಮಿಲಿಯಂತೆ ಸಹಕರಿಸಿದರು ಎಂದು ನಿರ್ದೇಶಕ ಸುಧಾಕರ್ ರಾಜ್ ಮಾಹಿತಿ ನೀಡಿದ್ದಾರೆ.
ಇದೊಂದು ಹಳ್ಳಿಸೊಗಡಿನ ಫ್ಯಾಮಿಲಿ ಡ್ರಾಮಾ ಸಿನಿಮಾ. ಮಹೇಶ್ ದೇವ್ ಡಿ. ಎನ್. ಪುರ ಅವರ ಕಥೆಗೆ ಸುಧಾಕರ್. ಎಸ್. ರಾಜ್ ತಮ್ಮ ತಂಡದೊAದಿಗೆ ಚಿತ್ರಕಥೆ ಬರೆಸಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿಕ್ಕಣ್ಣ ಹೀರೊ ಆಗಿ ನಟಿಸುತ್ತಿರುವ ೩ನೇ ಸಿನಿಮಾ ಇದು. ತೆಲುಗು ನಟ ಸುನಿಲ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಆಕಾಶ್ ಎಂಟರ್ಟೆÊನ್ಮೆAಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ಕೆ.ಸೋಮಶೇಖರ್ (ಕಟ್ಟಿಗೇನಹಳ್ಳಿ ) ಅಂದಾಜು ೧೦ ಕೋಟಿ ಬಜೆಟ್‌ನಲ್ಲಿ 'ಜೋಡೆತ್ತು' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
'ಜೋಡೆತ್ತು' ಚಿತ್ರದಲ್ಲಿ ಒಟ್ಟು ೫ ಹಾಡುಗಳಿದ್ದು ವಿ. ಹರಿಕೃಷ್ಣ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಕೆ.ಎಂ. ಪ್ರಕಾಶ್ ಸಂಕಲನ, ಕೆ.ಎಲ್. ರಾಜಶೇಖರ್ ಹಾಗೂ ರಘು ನೀಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ದರ್ಶಿನಿ ಡ್ಯಾನ್ಸ್ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಜಾಕಿ (ಬಿ. ತಿಮ್ಮೇಗೌಡ ) ಸಹ -ನಿರ್ದೇಶಕರಾಗಿ ಸುಧಾಕರ್ ರಾಜ್ ಅವರಿಗೆ ಸಾಥ್ ಕೊಟ್ಟಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು