LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಲವ್ ಮಾಕ್ಟೇಲ್ 3' ವಿವಾದ: ಮುಗಿದಿದೆ

`ಲವ್ ಮಾಕ್ಟೇಲ್ 3' ಚಿತ್ರದ ಕಥೆಗೆ ಸಂಬಂಧಿಸಿದAತೆ ಮೂಡಿದ್ದ ವಿರಸ ಈಗ ಸುಖಾಂತ್ಯ ಕಂಡಿದೆ. ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಮತ್ತು ನಿರ್ಮಾಪಕ ಗುರು ದೇಶಪಾಂಡೆ ಅವರ ನಡುವೆ ಉಂಟಾಗಿದ್ದ ವಿವಾದಕ್ಕೆ ತೆರೆ ಬಿದ್ದಿದೆ.ಚಿತ್ರದ ಕಥೆಯ ಹಕ್ಕು ಮತ್ತು ಕ್ರಿಯೇಟಿವ್ ವಿಚಾರಗಳಲ್ಲಿನ ಭಿನ್ನಾಭಿಪ್ರಾಯಗಳ ಬಗ್ಗೆ ವರದಿ ಆದ ನಂತರ ಚರ್ಚೆಗೆ ಕಾರಣವಾಗಿತ್ತು. 2023ರ ಸಮಯದಲ್ಲಿ ನಡೆದ ಕಥಾ ಚರ್ಚೆಗಳಿಗೂ ಮತ್ತು ಈಗ ತೆರೆಯ ಮೇಲೆ ಬಂದಿರುವ ಚಿತ್ರಕ್ಕೂ ಸಾಮ್ಯತೆ ಇದೆ ಎಂಬ ವಿಚಾರವು ಉಭಯ ತಂಡಗಳ ನಡುವೆ ಮಾತಿನ ಚಕಮಕಿಗೆ ದಾರಿ ಮಾಡಿಕೊಟ್ಟಿತ್ತು.
ವಿವಾದವು ವೈಯಕ್ತಿಕ ಘರ್ಷಣೆಯತ್ತ ತಿರುಗುವ ಮುನ್ನವೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಧ್ಯಪ್ರವೇಶಿಸಿತು. ಮಂಡಳಿಯ ಅಧ್ಯಕ್ಷೆ ಜಯಮಾಲಾ, ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ ವಿಶ್ವನಾಥ್, ಮತ್ತು ಹಿರಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಉಭಯ ಕಡೆಯವರೂ ಮುಕ್ತವಾಗಿ ಮಾತನಾಡಿದರು. ಕಥೆಯ ಎಳೆಗಳಲ್ಲಿ ಕಂಡುಬAದ ಸಾಮ್ಯತೆಯು ಉದ್ದೇಶಪೂರ್ವಕವಲ್ಲದ ಕೇವಲ ಕಾಕತಾಳೀಯ ಮತ್ತು ತಪ್ಪು ಗ್ರಹಿಕೆಗಳಿಂದ ಕೂಡಿದೆ ಎಂದು ಪರಸ್ಪರ ಒಪ್ಪಿಕೊಂಡಿದ್ದಾರೆ. ಚಿತ್ರರಂಗ ಎಂಬುದು ಒಂದು ಕುಟುಂಬದಂತಿದ್ದು, ಇಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಸಹಜ ಎಂಬ ಹಿರಿಯರ ಮಾತಿಗೆ ಗೌರವ ನೀಡಿ, ಪ್ರಕರಣವನ್ನು ಸೌಹಾರ್ದಯುತವಾಗಿ ಮುಕ್ತಾಯಗೊಳಿಸಲು ಇಬ್ಬರೂ ಒಮ್ಮತ ವ್ಯಕ್ತಪಡಿಸಿದ್ದಾರೆ.ಗುರು ದೇಶಪಾಂಡೆ ತಂಡವು ತಮ್ಮ ದೂರನ್ನು ಹಿಂಪಡೆದರೆ, ಡಾರ್ಲಿಂಗ್ ಕೃಷ್ಣ ಅವರು ಕೂಡ ಪ್ರಕರಣವನ್ನು ಕಾನೂನು ಮಟ್ಟಕ್ಕೆ ಕೊಂಡೊಯ್ಯುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು