LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬಾಂಬ್ ಬೆದರಿಕೆಯೊಡ್ಡಿದ ಕಿಡಿಗೇಡಿ ಪೊಲೀಸ್ ವಶಕ್ಕೆ

ಬೆಂಗಳೂರು: ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ವಿಮಾನ ಹೊರಡುವುದಕ್ಕೂ ಮುನ್ನ ಕೆಲವೇ ಕ್ಷಣಗಳ ಮುನ್ನ ಹೇಳಿ ಆತಂಕ ಸೃಷ್ಟಿಸಿದ ಕಿಡಿಗೇಡಿಯನ್ನು ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.ಕಳೆದ ಜ.28 ರಂದು ಸಂಜೆ ಬಾಂಬ್ ಇದೆ ಎಂದು ವಿಮಾನ ಹೊರಡುವುದಕ್ಕೂ ಮುನ್ನ ಕೆಲವೇ ಕ್ಷಣಗಳ ಮುನ್ನ ಹೇಳಿ ಆತಂಕ ಸೃಷ್ಟಿಸಿದ ಆರೋಪಿಯನ್ನು ಖಾಸಗಿ ಕಂಪನಿ ಉದ್ಯೋಗಿ ಸಜು ಕೆ ಕುಮಾರನ್ ಎಂದು ಗುರುತಿಸಲಾಗಿದೆ.

ಕೇರಳದ ಕೊಚ್ಚಿಗೆ ತೆರಳಲು ಏರ್ ಇಂಡಿಯಾ ವಿಮಾನದಲ್ಲಿ ಕುಳಿತಿದ್ದಾಗ ಸಜು ಕುಮಾರ್ ವಿಕೃತಿ ಮೆರೆದಿದ್ದರು. ಇದರಿಂದಾಗಿ ಭದ್ರತಾ ಸಿಬ್ಬಂದಿ ಬೆಸ್ತು ಬೀಳುವಂತಾಗಿತ್ತು.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಬೆಂಗಳೂರಿನಿಂದ ಕೊಚ್ಚಿಗೆ ತೆರಳುವ ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನದಲ್ಲಿದ್ದ ಸಜು ಕುಮಾರ್ (48) ಇನ್ನೇನು ವಿಮಾನ ಟೇಕಾಫ್ ಆಗಬೇಕು ಎನ್ನುವಷ್ಟರಲ್ಲಿ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದ.

ವಿಮಾನ ನಿಲ್ದಾಣ ಪೊಲೀಸರ ಪ್ರಕಾರ, ಈ ಘಟನೆಯು ಭಾನುವಾರ ಸಂಜೆ 5.25 ಕ್ಕೆ ಸಂಭವಿಸಿದೆ. ವಿಮಾನ ಸಂಖ್ಯೆ `I5 990' ರ ನಿರ್ಗಮನಕ್ಕೆ ಕೇವಲ ಐದು ನಿಮಿಷಗಳ ಮೊದಲು ಆರೋಪಿಯು ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಾನೆ. ಏರ್‍ಲೈನ್ ಸಿಬ್ಬಂದಿಗೆ ಬ್ಯಾಗ್ ಪರಿಶೀಲಿಸಲೂ ಅನುವು ಮಾಡಿಕೊಡಲಿಲ್ಲ. ಪರಿಣಾಮವಾಗಿ ತಕ್ಷಣವೇ ಆತನನ್ನು ವಿಮಾನದಿಂದ ಇಳಿಸಲಾಯಿತು. ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದರು.

ಆರೋಪಿ ವಿರುದ್ಧ ಎಫ್‍ಐಆರ್ ಬಳಿಕ ಆರೋಪಿಯನ್ನು ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಆತನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಹೇಳಿಕೆಗಳಿಗೆ ಸಂಬಂಧಿಸಿದ್ದಾಗಿದ್ದು, ಆರೋಪ ಸಾಬೀತಾದರೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು