LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಹು ನಿರೀಕ್ಷಿತ "ಛೂ ಮಂತರ್" ಮೇ 10ಕ್ಕೆ ಬಿಡುಗಡೆ

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, "ಕರ್ವ" ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಛೂ ಮಂತರ್" ಚಿತ್ರ ಇದೇ ಮೇ 10 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ.

ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಗಳ ಮೂಲಕ "ಛೂ ಮಂತರ್" ಚಿತ್ರ ಜನರ ಮನ ತಲುಪಿದೆ. ಏಪ್ರಿಲ್ 19(ಶುಕ್ರವಾರ) ರಂದು ಟ್ರೇಲರ್ ಬರಲಿದ್ದು, ಚಿತ್ರ ಮೇ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.ಇದೊಂದು ಹಾರಾರ್ ಚಿತ್ರ. ಕನ್ನಡದಲ್ಲಿ ಸಾಕಷ್ಟು ಹಾರಾರ್ ಚಿತ್ರಗಳು ಬಂದಿದೆಯಾದರೂ ಇದು ಸ್ವಲ್ಪ ವಿಭಿನ್ನವಾಗಿದೆ. ಚಿತ್ರದ ಮೇಕಿಂಗ್ ನೋಡಿದಾಗ ಹಾಲಿವುಡ್ ಚಿತ್ರಗಳನ್ನು ನೋಡಿದ ಹಾಗೆ ಭಾಸವಾಗುತ್ತದೆ.

ಶರಣ್ ಅವರ ಪಾತ್ರ ಕೂಡ ಈ ಹಿಂದಿನ ಚಿತ್ರಗಳಿಗಿಂತ ಬೇರೆ ರೀತಿಯಲ್ಲಿಯೇ ಇದೆ. "ಉಪಾಧ್ಯಕ್ಷ"ನಾಗಿ ಯಶಸ್ಸು ಕಂಡಿರುವ ಚಿಕ್ಕಣ್ಣ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಮತ್ತೊಮ್ಮೆ " ಅಧ್ಯಕ್ಷ" ಹಾಗೂ "ಉಪಾಧ್ಯಕ್ಷ"ರನ್ನು ಈ ಚಿತ್ರದಲ್ಲಿ ಒಟ್ಟಾಗಿ ನೋಡಬಹುದು. ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಖ್ಯಭೂಮಿಕೆಯಲ್ಲಿದ್ದಾರೆ.

" ಕರ್ವ " ಚಿತ್ರದ ಮೂಲಕ ಭರವಸೆ ಮೂಡಿಸಿದ್ದ ನಿರ್ದೇಶಕ ನವನೀತ್ ಅವರಿಂದ ಮತ್ತೊಂದು ಸದಭಿರುಚಿಯ ಚಿತ್ರ ಬರುತ್ತಿದೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ "ಛೂ ಮಂತರ್" ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು