LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಹು ನಿರೀಕ್ಷಿತ "ಅನಿಮಲ್" ಚಿತ್ರ ನಾಳೆ ಬಿಡುಗಡೆ

ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಹಾಗೂ ರಣ್ ಬೀರ್ ಕಪೂರ್ , ಕನ್ನಡತಿ ರಶ್ಮಿಕಾ ಮಂದಣ್ಣ, ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಅನಿಮಲ್" ಡಿಸೆಂಬರ್ 1 ರಂದು ತೆರೆಗೆ ಬರುತ್ತಿದೆ. ಹೆಸರಾಂತ ಕೆ.ವಿ.ಎನ್ ಸಂಸ್ಥೆ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ.

ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿತ್ತು. ಈ ವೇಳೆ ಮಾದ್ಯಮದೊಂದಿಗೆ ತಂಡದ ಸದಸ್ಯರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.ನಟ ರಣಬೀರ್ ಕಪೂರ್ ಮಾತನಾಡಿ, ಇದು ವಿಭಿನ್ನವಾದ ಸಿನಿಮಾ. ತಂದೆ - ಮಗನ ಬಾಂಧವ್ಯದ ಜೊತೆ ಜೊತೆಗೆ ಹಿಂಸೆ ಮತ್ತು ಕ್ರೌರ್ಯಕ್ಕೆ ಒತ್ತು ನೀಡಿದ್ದಾರೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ. ಸೆಂಟೆಮೆಂಟ್ ಅಥವಾ ಹಿಂಸೆಗೆ ಎಷ್ಟು ಪ್ರಾಧಾನ್ಯತೆ ನೀಡಲಾಗಿದೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು. ಹಿರಿಯ ನಟರಾದ ಅನಿಲ್ ಕಪೂರ್ ಮತ್ತು ಬಾಬಿ ಡಿಯೋಲ್ ಅವರ ಜೊತೆ ನಟನೆ ಮಾಡಿದ್ದು ಒಳ್ಳೆಯ ಅನುಭವ. ಜೊತೆಗೆ ರಶ್ಮಿಕಾ ಮಂದಣ್ಣ ಪಾತ್ರಕ್ಕೆ ಜೀವ ತುಂಬಿದ್ದಾರೆ ಎಂದು ಹೇಳಿಕೊಂಡರು.

ನಟಿ ರಶ್ಮಿಕಾ ಮಂದಣ್ಣ ಮಾತನಾಡಿ, ಚಿತ್ರದಲ್ಲಿ ರಣಬೀರ್ ಕಪೂರ್ ಹೆಂಡತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ವಿಭಿನ್ನವಾದ ಪಾತ್ರ. ನಿರ್ದೇಶಕರ ಕಲ್ಪನೆಗೆ ತಕ್ಕಂತೆ, ಅವರು ಹೇಳಿದಂತೆ ಕೆಲಸ ಮಾಡಿದ್ದೇನೆ ಎಂದರು.ಹಿರಿಯ ನಟ ಬಾಬಿ ಡಿಯೋಲ್ ಮಾತನಾಡಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರಕ್ಕಾಗಿ ಸಾಕಷ್ಟು ಪ್ರಯತ್ನ ಮತ್ತು ಎಫರ್ಟ್ ಹಾಕಿದ್ದೇನೆ ಎಂದು ತಿಳಿಸಿದರು.

ವಿತರಕ ಕೆ.ವಿ.ಎನ್ ಸಂಸ್ಥೆಯ ವೆಂಕಟ್ ಮಾತನಾಡಿ ಇದೇ ಶುಕ್ರವಾರ ರಾಜ್ಯಾದ್ಯಂತ ಚಿತ್ರವನ್ನು ತೆರೆಗೆ ತರಲಾಗುವುದು. ಬೆಳಗ್ಗೆ ಏಳು ಗಂಟೆಗೆ ಪ್ರದರ್ಶನ ಆರಂಭವಾಗಲಿದೆ ಎಂದು ಹೇಳಿದರು.ನಿರ್ಮಾಪಕ ಭೂಷಣ್ ಕುಮಾರ್ ಸೇರಿದಂತೆ ಅನೇಕ ಸದಸ್ಯರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು