LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೇಂದ್ರಕ್ಕೆ ತರಾಟೆ: ವಿಪಕ್ಷಗಳ ಗದ್ದಲ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ಕೇಂದ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.
ತೆರಿಗೆ ಹಂಚಿಕೆಯಲ್ಲಿ ರಾಜ್ಯ ಸರ್ಕಾರಕ್ಕೆ ಅನ್ಯಾಯವಾಗಿದೆ ಎಂದು ಪುನರುಚ್ಚರಿಸಿದರು. ಈ ವೇಳೆ ವಿಪಕ್ಷ ಬಿಜೆಪಿಯ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸುಳ್ಳು ಹೇಳಬೇಡಿ ಎಂದು ವಿಪಕ್ಷಗಳ ನಾಯಕರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಸಿಎಂ ಬಜೆಟ್ ಮಂಡನೆ ನಡೆಯುತ್ತಿರುವಂತೆಯೇ ಬಿಜೆಪಿ ಶಾಸಕರು ಸದನದಲ್ಲಿ ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ಹೊರಹಾಕಿದರು.
ಸಿದ್ದರಾಮಯ್ಯ ಪ್ರಸಕ್ತ 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗಿದೆ.

14ನೇ ಹಣಕಾಸು ಆಯೋಗದ ಶಿಫಾರಸುಗಳು ಜಾರಿಯಲ್ಲಿದ್ದಿದ್ದರೆ ರಾಜ್ಯಕ್ಕೆ ಹೆಚ್ಚು ಪಾಲು ಸಿಗುತ್ತಿತ್ತು ಎಂದು ಅಂಕಿ ಅಂಶಗಳ ಸಮೇತ ವಿವರಣೆ ನೀಡಿದರು.ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಸಾಕಷ್ಟು ಅನುದಾನಗಳು ಸಿಕ್ಕಿದ್ದವು. ರಾಜ್ಯದ ಅಭಿವೃದ್ಧಿಗೆ ಅನುಕೂಲವಾಗಿತ್ತು. ಕಳೆದ 10 ವರ್ಷಗಳಿಂದ ಎನ್‍ಡಿಎ ಸರ್ಕಾರದಿಂದ ಜನವಿರೋಧಿ ಆಡಳಿತ ಇದೆ.

ಸಂಪನ್ಮೂಲ ಶೇಖರಣೆ ಕೆಲವೆಡೆ ಮಾತ್ರ ಕೇಂದ್ರೀಕೃತವಾಗಿದೆ ಎಂದು ಮುಖ್ಯಮಂತ್ರಿ ಭಾಷಣದ ವೇಳೆ ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ ಹೊರ ಹಾಕಿದರು.ತಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ತಮ್ಮ ಗ್ಯಾರಂಟಿಯನ್ನು ಕದ್ದಿದೆ ಎಂದೂ ಲೇವಡಿ ಮಾಡಿದರು.

ನಾವು ಐದು ಗ್ಯಾರಂಟಿಗಳನ್ನು ಬಹಳ ಕಡಿಮೆ ಅವಧಿಯಲ್ಲಿ ಜಾರಿ ಮಾಡಿದ್ದೇವೆ. ಈ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಆಗಿರಲಿಲ್ಲ. ವಿಪಕ್ಷಗಳು ಈ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಹಂಗಿಸಿದವು. ಸರ್ಕಾರದ ಬೊಕ್ಕಸ ಖಾಲಿ ಆಗಿದೆ ಎಂದು ಸುಳ್ಳುಗಳನ್ನು ಹೇಳಿ ಸರ್ಕಾರದ ನೈತಿಕ ಸ್ಥೈರ್ಯ ಕುಸಿಯಲು ಪ್ರಯತ್ನಿಸಿದವು ಎಂದು ಆರೋಪಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು