LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Gadag | Politics News

ಅಧಿಕಾರಿ ನಾಪತ್ತೆ

ಅನುದಾನ ಬಾರದೆ ಗುತ್ತಿಗೆದಾರರ ಕಿರುಕುಳಕ್ಕೆ ನೊಂದು ಕಣ್ಮರೆ


ಗದಗ: ತಾನು ಕಾರ್ಯ ನಿರ್ವಹಿಸುವ ಇಲಾಖೆಗೆ ಸರ್ಕಾರದಿಂದ ಅನುದಾನದ ಬಾರದೆ ಮಾಡಿದ ಕೆಲಸಕ್ಕೆ ಗುತ್ತಿಗೆದಾರರ ಹಣ ಪಾವತಿಸುವಂತೆ ನೀಡುತ್ತಿದ್ದ ಕಿರುಕುಳದಿಂದ ನೊಂದು ಅಧಿಕಾರಿಯೋರ್ವರು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದಾರೆ.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ ಸಹಾಯಕ ಕಾರ್ಯಪಾಲಕ ಎಂಜಿನಿಯರ್  ಫರ್ವೀಜ್ ಎಂಬುವರು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಗದಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮೇಲಾಧಿಕಾರಿಗಳಿಗೆ ಕಾರುಣಿಕ ಪತ್ರ ಬರೆದಿಟ್ಟು ಅವರು ದಿಢೀರ್ ನಾಪತ್ತೆಯಾಗಿದ್ದು, ಇಡೀ ಸರ್ಕಾರಿ ವಲಯ ಹಾಗೂ ಅವರ ಕುಟುಂಬಸ್ಥರಲ್ಲಿ ತೀವ್ರ ಆತಂಕ ವಾತಾವರಣ ನಿರ್ಮಾಣವಾಗಿದೆ.ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗದೇ ಉಂಟಾದ ಆರ್ಥಿಕ ಸಂಕಷ್ಟವೇ ಅಧಿಕಾರಿಯ ನಾಪತ್ತೆಗೆ ಕಾರಣ ಎನ್ನುವ ಪ್ರಶ್ನೆ ಇದೀಗ ಕಾಡುತ್ತಿದೆ.ಬೆಂಗಳೂರಿನ ಕೆಆರ್‌ಐಡಿಎಲ್‌ನ ಇಇ ಅವರಿಗೆ ಪತ್ರ ಬರೆದು ಫರ್ವೀಜ್ ನಾಪತ್ತೆಯಾಗಿದ್ದಾರೆ. ಪತ್ರದಲ್ಲಿ ಅನುದಾನ ಬಿಡುಗಡೆಯಾಗದಿರುವ ಕುರಿತು ಉಲ್ಲೇಖಿಸಲಾಗಿದೆ. ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗದ ಕಾರಣ ತಾವು ತೀವ್ರವಾಗಿ ನೊಂದಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅನುದಾನ ಬಿಡುಗಡೆಯಾಗದ ಹಿನ್ನೆಲೆ ಮನೆಯ ಮುಂದೆ ಸಬ್-ಗುತ್ತಿಗೆದಾರರು ಬಂದು ಗಲಾಟೆ ಮಾಡುತ್ತಿದ್ದರು. ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ ಪ್ರತಿದಿನ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರು. ಇದರಿಂದ ತಮ್ಮ ಮಾನಸಿಕ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರಿದೆ ಎಂದು ಪತ್ರದಲ್ಲಿ ಫರ್ವೀಜ್ ಉಲ್ಲೇಖಿಸಿದ್ದಾರೆ.ನನ್ನ ಜೀವನವನ್ನೇ ಕೊನೆಗಾಣಿಸುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ. ಪರಿಸ್ಥಿತಿಯನ್ನ ನಿಭಾಯಿಸುವಲ್ಲಿ ನಾನು ಸೋತಿದ್ದೇನೆ. ಸದರಿ ಉಪವಿಭಾಗಕ್ಕೆ ಅನುದಾನ ನೀಡಿ ಸಮಸ್ಯೆ ಬಗೆಹರಿಸಿ. ಬೇರೆ ಎಇಇಯನ್ನ ನಿಯೋಜಿಸಿ. ದಯವಿಟ್ಟು ನನ್ನ ಕುಟುಂಬದವರಿಗೆ ಕಿರುಕುಳ ನೀಡಬೇಡಿ ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.2026ರ ಸೆಪ್ಟೆಂಬರ್ 12ರಂದು ಇಇ ಅವರಿಗೆ ಪತ್ರ ಬರೆದಿದ್ದ ಫರ್ವೀಜ್, ಮರುದಿನ ಅಂದರೆ ಸೆಪ್ಟೆಂಬರ್ 13ರಂದು ಬೆಂಗಳೂರಿನಲ್ಲಿ ಸಭೆ ಇದೆ ಎಂದು ಹೇಳಿ ತೆರಳಿದ್ದರು. ಬಳಿಕ ಸೆಪ್ಟೆಂಬರ್ 16ರಂದು ಅವರು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ. ಪತ್ನಿ, ಓರ್ವ ಮಗಳು, ತಂದೆ-ತಾಯಿ ಹಾಗೂ ಸಹೋದರರನ್ನ ಬಿಟ್ಟು ಫರ್ವೀಜ್ ನಾಪತ್ತೆಯಾಗಿದ್ದಾರೆ. ಎಇಇ ನಾಪತ್ತೆಯಾಗಿರುವುದರಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಅವರನ್ನು ಆದಷ್ಟು ಬೇಗ ಪತ್ತೆಹಚ್ಚುವಂತೆ ಪೊಲೀಸ್ ಇಲಾಖೆಗೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.ಈ ಕುರಿತು ಗದಗದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಫರ್ವೀಜ್ ಅವರನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆ ತಂಡಗಳನ್ನು ರಚಿಸಿರುವುದಾಗಿ ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST