LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ: ಆಕ್ರೋಶ

ರಾಮನಗರ: ಕೆಆರ್ ಎಸ್  ಜಲಾಶಯದಿಂದ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿನಿತ್ಯ 3500 ಕ್ಯುಸೆಕ್ ನೀರು ಹರಿಸಲು ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ಆದೇಶ ಹೊರಡಿಸಿರುವುದನ್ನು ವಿರೋಧಿಸಿ   ರೈತರು ನಗರದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಸೇರಿದ ರೈತರು, ರಕ್ತ ಕೊಟ್ಟರು ನೀರು ಕೊಡುವುದಿಲ್ಲ, ಬರಗಾಲದಲ್ಲಿ ರೈತರಿಗೆ ಬರೆ ಎಳೆದ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗುತ್ತಾ ಮಾನವ ಸರಪಳಿ ರಚಿಸಿದರು. ಇದರಿಂದ ಹಳೇ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತು.ಈ ವೇಳೆ ಮಾತನಾಡಿದ ರೈತಸಂಘ ರಾಜ್ಯ ಉಪಾಧ್ಯಕ್ಷ ಮಲ್ಲಯ್ಯ ಮಾತನಾಡಿ, ಸಿಡಬ್ಲುಆರ್ ಸಿ ಅವೈಜ್ಞಾನಿಕ ಆದೇಶ ವಿರೋಧಿಸಿ ಕರ್ನಾಟಕ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕು. ಯಾವುದೇ ಕಾರಣಕ್ಕೂ ಕೆಆರ್ ಎಸ್ ನಿಂದ ಒಂದು ಹನಿ ನೀರನ್ನು ತಮಿಳುನಾಡಿಗೆ ಬಿಡಬಾರದು. ಬರಗಾಲದ ಸಂದರ್ಭದಲ್ಲಿ ನೀರು ಬಿಟ್ಟದರೆ ಕರ್ನಾಟಕದ 40 ಲಕ್ಷ ರೈತರ ಬದುಕು ಬೀದಿಗೆ ಬೀಳುತ್ತದೆ ಎಂದರು.ಕರ್ನಾಟಕ ಸರ್ಕಾರ ತಕ್ಷಣವೇಎಲ್ಲಾ ರಾಜಕೀಯ ಪಕ್ಷಗಳ ಸಭೆ ಕರೆದು ಏಕಾಭಿ ಪ್ರಾಯದ ನಿರ್ಣಯ ಮಾಡಬೇಕು. ಅಗತ್ಯ ಬಿದ್ದರೆ ಕಾವೇರಿ ಉಳಿಸಿ, ಕರ್ನಾಟಕ ಉಳಿಸಿ ಚಳವಳಿ ಮೂಲಕ ಬೃಹತ್ ಹೋರಾಟಕ್ಕೆ ರೈತಸಂಘ ಸಿದ್ಧವಿದೆ.  ಸಿಡಬ್ಲು÷್ಯಆರ್ ಸಿ ಮತ್ತು ಕೇಂದ್ರ ಸರ್ಕಾರ ಕರ್ನಾಟಕದ ರೈತರ ಕಣ್ಣೀರಿಗೆ ಬೆಲೆ ಕೊಡದಿದ್ದರೆ ಅದರ ಪರಿಣಾಮ ಅನುಭವಿಸಬೇಕಾಗುತ್ತದೆ ಎದರು.ರೈತ ಮುಖಂಡ ಕುಮಾರಸ್ವಾಮಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ತಮಿಳುನಾಡಿಗೆ ಒಂದಿಂಚು ನೀರನ್ನು ಬಿಡಬಾರದು. ಒಂದು ವೇಳೆ ರಾಜ್ಯಸರ್ಕಾರ ನೀರು ಹರಿಸಿದರೆ ಆಗಸ್ಟ್ 3ರಂದು ಬೆಂಗಳೂರಿನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳ ಸಭೆ ನಡೆಯಲು ಬಿಡುವುದಿಲ್ಲ. ಅಲ್ಲಿ ಆಗುವ ಅನಾಹುತಕ್ಕೆ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಚ್ಚರಿಕೆ ನೀಡಿದರು.ಈಗಾಗಲೇ ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ. ಕೆರೆಗಳು, ಕೊಳವೆ ಬಾವಿಗಳು ಬತ್ತಿದ್ದು, ರೈತರ ಬೆಳೆಗಳು ಒಣಗುತ್ತಿವೆ. ಕೆಆರ್ ಎಸ್ ಜಲಾಶಯದ ಸಂಗ್ರಹವೂ ಅಪಾಯ ಮಟ್ಟದಲ್ಲಿದ್ದು, ಒಂದು ಬೆಳೆಗೂ ನೀರು ಸಾಕಾಗುವುದಿಲ್ಲ. ಇಂತಹ ಸಂದರ್ದಲ್ಲಿ 4 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶಿಸಿರುವುದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ ಎಂದು ಟೀಕಿಸಿದರು.ತಮಿಳುನಾಡು ಕಾವೇರಿ ನೀರನ್ನು ಕೇವಲ ಕೃಷಿಗಷ್ಟೇ ಅಲ್ಲ ಉದ್ಯಮಕ್ಕೂ ಬಳಸಿಕೊಂಡು ಕರ್ನಾಟಕದ ಪಾಲನ್ನು ಲೂಟಿ ಮಾಡುತ್ತಿದೆ. ಸಿಡಬ್ಲುಆರ್ ಸಿ ಆದೇಶದಲ್ಲಿ ಕರ್ನಾಟಕದ ಕುಡಿಯುವ ನೀರು, ಜಾನುವಾರುಗಲ ನೀರು, ಪರಿಸರದ ಅಗತ್ಯವನ್ನು ಪರಿಗಣಿಸಿಯೇ ಇಲ್ಲ. ನ್ಯಾಯಧೀಕರಣದ ತೀರ್ಪಿನಲ್ಲಿ ಕರ್ನಾಟಕದ ಮೊದಲು ಕುಡಿಯುವ ನೀರು ಎಂಬ ಸ್ಪಷ್ಟ ನಿಬಂಧನೆ ಇದ್ದರೂ ಅದನ್ನು ಗಾಳಿಗೆ ತೂರಲಾಗಿದೆ ಎಂದು ಕುಮಾರಸ್ವಾಮಿ ದೂರಿದರು. ಪ್ರತಿಭಟನೆಯಲ್ಲಿ ರೈತಸಂಘ ಸಂಚಾಲಕ ಚೀಲೂರು ಮುನಿರಾಜು, ಜಿಲ್ಲಾಧ್ಯಕ್ಷ ಕೃಷ್ಣಯ್ಯ, ಜಿಲ್ಲಾ ಗೌರವಾಧ್ಯಕ್ಷ ತಿಮ್ಮೇಗೌಡ, ಕಾರ್ಯದರ್ಶಿ ನಾಗರಾಜು, ಕಾರ್ಯಾಧ್ಯಕ್ಷ ಪುಟ್ಟಸ್ವಾಮಿ, ಮುಖಂಡರಾದ ಡಿ.ಕೆ.ಲೋಕೇಶ್, ಪ್ರಶಾಂತ್ ಕುಮಾರ್, ಮಾರುತಿ, ರಾಜೇಂದ್ರ, ಶಿವಲಿಂಗಯ್ಯ, ರಾಮಲಿಂಗಯ್ಯ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು