LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

"ಇಕೋಸ್ಪೋರ್ಟ್ ಕಾರ ಪತ್ತೆಗೆ ಮುಂದಾದ ಪೊಲೀಸರು"

ನವದೆಹಲಿ: ರಾಜಧಾನಿ ದೆಹಲಿಗೆ ಉಗ್ರರು ಎರಡು ಕಾರಿನಲ್ಲಿ ಬಂದಿರುವ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ಐ೨೦ ಕಾರು ಕೆಂಪುಕೋಟೆಯ ಬಳಿ ಸ್ಫೋಟಗೊಂಡರೆ ಮತ್ತೊಂದು ಕಾರು ಈಗಲೂ ನಗರದಲ್ಲಿ ಸಂಚರಿಸುತ್ತಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಹೈ ಅಲರ್ಟ್ ಘೋಷಣೆ ಮಾಡಿ ಪೊಲೀಸರು ಮತ್ತೊಂದು ಕಾರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸ್ಫೋಟಗೊಂಡ ಐ೨೦ ಕಾರು ಮತ್ತು ಆಐ-೧೦ ಅಏ ೦೪೫ ನಂಬರಿನ ಕೆಂಪು ಬಣ್ಣದ ಇಕೋಸ್ಪೋರ್ಟ್ ಕಾರು ಒಟ್ಟಿಗೆ ದೆಹಲಿಗೆ ಆಗಮಿಸಿದ್ದವು. ಎರಡೂ ಕಾರುಗಳು ಚಾಂದನಿ ಚೌಕ್ ಪಾರ್ಕಿಂಗ್ ಸ್ಥಳದಲ್ಲಿ ಒಟ್ಟಿಗೆ ಇದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಕೋಸ್ಪೋರ್ಟ್ ಕಾರಿನಲ್ಲಿ ಒಬ್ಬನಿದ್ದ. ಆತ ಐ೨೦ ಕಾರಿನಲ್ಲಿದ್ದ ಉಮರ್ ಜೊತೆ ಮಾತನಾಡುತ್ತಿದ್ದ. ಪಾರ್ಕಿಂಗ್ ಸ್ಥಳದಲ್ಲಿ ಮತ್ತು ದಾಳಿ ನಡೆದ ಸ್ಥಳದ ಬಳಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಿಂದ ಈ ಮಾಹಿತಿಯನ್ನು ಪಡೆಯಲಾಗಿದೆ. ಈ ಎರಡೂ ಕಾರುಗಳು ಬದರ್ಪುರ್ ಗಡಿಯಿಂದ ಏಕಕಾಲದಲ್ಲಿ ದೆಹಲಿಯನ್ನು ಪ್ರವೇಶಿಸಿ ಚಾಂದನಿ ಚೌಕ್ ಮತ್ತು ಕೆಂಪು ಕೋಟೆಯ ಸುತ್ತಲೂ ಚಲಿಸುತ್ತಿದ್ದವು ಎಂದು ವಿಶೇಷ ಘಟಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ನೋಂದಣಿ ಸಂಖ್ಯೆ ಇರುವ ಕಾರು ಈಗಲೂ ದೆಹಲಿಯಲ್ಲಿ ಸಂಚರಿಸುತ್ತಿರಬಹುದು ಎನ್ನಲಾಗುತ್ತಿದೆ. ಈ ಕಾರಣಕ್ಕೆ ಪೊಲೀಸರು ಹೈ ಅಲರ್ಟ್ ಘೋಷಣೆ ಮಾಡಿ ತಪಾಸಣೆ ಮಾಡುತ್ತಿದ್ದಾರೆ. ಅದರಲ್ಲೂ ಎಲ್ಲಾ ವಿವಿಐಪಿ, ಐತಿಹಾಸಿಕ ಮತ್ತು ಮಾರುಕಟ್ಟೆ ಸ್ಥಳಗಳಲ್ಲಿ, ವಿಶೇಷವಾಗಿ ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಮಂಗಳವಾರ ತಡರಾತ್ರಿಯವರೆಗೆ ಕಾರು ಅಥವಾ ಶಂಕಿತ ವ್ಯಕ್ತಿಯ ಬಗ್ಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ ಎಂದು ವರದಿಯಾಗಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು