LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ದಿ ರೈಸ್ ಆಫ್ ಅಶೋಕ' ಸಿನಿಮಾದ ಸಾಂಗ್ ಅನಾವರಣ

ಸತೀಶ್ ನೀನಾಸಂ ಅವರ ದಿ ರೈಸ್ ಆಫ್ ಅಶೋಕ. ಚಿತ್ರದ ಮೊದಲ ಹಾಡು ಅನಾವರಣಗೊಂಡಿದೆ. ಸ್ವತಃ ಸತೀಶ್ ಏಳೋ ಏಳೋ ಮಹಾದೇವ ಗೀತೆ ಕ್ಯಾಚಿಮ್ಯಾಚಿ ಪದ ಪೊಣಿಸಿ ಸಾಹಿತ್ಯ ಬರೆದಿದ್ದಾರೆ. ಸತೀಶ್ ನೀನಾಸಂ ಮಾತನಾಡಿ, ಅಯೋಗ್ಯ ಲೆಕ್ಕ ಅಲ್ಲಾ ನನಗೆ ಮನೇಲಿ ಮಲಗಿದ್ದರು ಜನ ಆ ಸಿನಿಮಾ ನೋಡ್ತಾರೆ. ಅಯೋಗ್ಯ ಬ್ರಾಂಡ್ ಕ್ರಿಯೇಟ್ ಮಾಡಿದೆ. ಪ್ಯಾನ್ ಇಂಡಿಯಾ ಮಾಡೋ ಹುಚ್ಚ ಅಂತಾರೆ' ಒಂದು ಕೆಜಿಎಫ್, ಒಂದು ಕಾಂತಾರ ಮಾಡಬೇಕು ಅನ್ನೋ ಆಸೆ ನನಗಿದೆ. ಒಂದು ರೂಪಾಯಿ ನಾನು ಸೈನಿಂಗ್ ದುಡ್ಡು ತಗೊಂಡಿಲ್ಲ. ನಾಳೆ ಶೂಟಿಂಗ್ ಮಾಡಬೇಕು ಅಂತ ಹೋದ್ರೆ ನಿರ್ದೇಶಕ ಆತ್ಮಹತ್ಯೆ ಮಾಡ್ಕೊಂಡಿದ್ರು. ಅಲ್ಲಿಂದ ಜವಾಬ್ದಾರಿ ಜಾಸ್ತಿ ಆಯ್ತು. ಇಷ್ಟೆಲ್ಲ ಮಾಡಿ ಈ ಸಿನಿಮಾ ಶೂಟಿಂಗ್ ಶುರು ಆದಮೇಲೆ ನನ್ನ ಅಣ್ಣಗೆ ಆಕ್ಸಿಡೆಂಟ್ ಆಗುತ್ತೆ.

ಮೂರು ವರ್ಷ ರಾತ್ರಿ ಕಣ್ಣೀರು ಹಾಕಿ ಸಿನಿಮಾ ಕಂಪ್ಲೀಟ್ ಮಾಡಿದ್ದೇವೆ. ನನ್ನ ಶತ್ರುಗಳು ಈ ಸಿನಿಮಾ ನೋಡಿ ಹೆಮ್ಮೆ ಪಡ್ತಾರೆ. ಒಂದು ಸಿನಿಮಾಗೆ ೫೦ ಲಕ್ಷ ರೂ. ತಗೊಂಡು ೬ ಸಿನಿಮಾ ಮಾಡಬೋದಿತ್ತು ಮೂರು ವರ್ಷದಲ್ಲಿ, ಆದ್ರೆ ಮಾಡ್ಲಿಲ್ಲ ಸರ್ವಸ್ವವು ನಮಗೆ ರೈಸ್ ಆಫ್ ಅಶೋಕ ಆಗಿತ್ತು ಎಂದಿದ್ದಾರೆ. ನಟಿ ಸಪ್ತಮಿ ಗೌಡ ಮಾತನಾಡಿ, ಬಹಳ ಖುಷಿಯಾಗ್ತಿದೆ. ನಾನು ಸಿನಿಮಾ ತಂಡಕ್ಕೆ ಲಾಸ್ಟ್ ಆರ್ಟಿಸ್ಟ್ ಆಗಿ ಸೇರ್ಪಡೆಯಾಗಿದ್ದು. ನಾನು ಈ ಚಿತ್ರ ಭಾಗವಾಗಿದ್ದೇನೋ ಅಂದಿನಿAದ ಇಂದಿನವರೆಗೂ ಯಾವುದೇ ಸಾಂಗ್, ಡೈಲಾಗ್ , ಸೀನ್, ಕಾಸ್ಟೂ÷್ಯಮ್ ಎಲ್ಲರ ಬಗ್ಗೆಯೂ ಚರ್ಚೆ ನಡೆಸುತ್ತಾರೆ. ನಮ್ಮ ಅಭಿಪ್ರಾಯ ಕೇಳುತ್ತಾರೆ. ಸತೀಶ್ ಸರ್ ತುಂಬಾ ಸಪೋರ್ಟ್ ಮಾಡಿದ್ದಾರೆ. ಹೂ ಮಾರುವ ಹುಡುಗಿ ಅಂಬಿಕಾ ಎಂಬ
ಪಾತ್ರ ಮಾಡಿದ್ದೇನೆ.

ಇಡೀ ತಂಡಕ್ಕೆ ಸಾಕಷ್ಟು ಜನ ಕೆಲಸ ಮಾಡಿದ್ದಾರೆ. ಎಲ್ಲರೂ ಅವರ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದರು. ಶಿವನ ಕುರಿತಾದ ಈ ಹಾಡಿಗೆ ಕೈಲಾಶ್ ಕೇರ್ ಸಾಧ್ವಿನಿ ಕೊಪ್ಪ
ಹಾಗೂ ಸಿದ್ದು ಧ್ವನಿಯಾಗಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಮಾದೇವಗೀತೆಯ ತೂಕ ಹೆಚ್ಚಿಸಿದೆ. ಬೀಸುವ ಕಲ್ಲು, ಗಾಳಿಯಲ್ಲಿಯೂ ಶಿವನ್ನು ವರ್ಣಿಸಿರುವ ಸತೀಶ್ ನೀನಾಸಂ, ಶಿವನ ಭಕ್ತಿ ಭಾವದಲ್ಲಿ ತೇಲುವಂತೆ ಮಾಡಿದ್ದಾರೆ. ದಿ ರೈಸ್ ಆಫ್ ಅಶೋಕ ೭೦ರ ದಶಕದಲ್ಲಿ ನಡೆಯುವ ಸಿನಿಮಾ. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆಯೇ ದಿ ರೈಸ್ ಆಫ್ ಅಶೋಕ.

ಚಿತ್ರದಲ್ಲಿ ಸತೀಶ್‌ಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಬಿ.ಸುರೇಶ್, ರವಿಶಂಕರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ಡ್ರಾಗನ್ ಮಂಜು, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ, ಜಗಪ್ಪ ತಾರಾಬಳಗದಲ್ಲಿದ್ದಾರೆ. ಇದು ಸತೀಶ್ ಅವರ ವೃತ್ತಿಜೀವನದಲ್ಲೇ ಬಿಗ್' ಬಜೆಟ್ ಚಿತ್ರವಾಗಿದ್ದು, ದೊಡ್ಡ ಯಶಸ್ಸು ತಂದುಕೊಡುವ ನಿರೀಕ್ಷೆ ಕೂಡ ಇದೆ.ಸಿನಿಮಾ ಕನ್ನಡದ ಜೊತೆ ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ಸತೀಶ್ ನೀನಾಸಂ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ. ದಿ ರೈಸ್ ಆಫ್ ಆಫ್ ಅಶೋಕನಿಗೆ ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು