LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

`ಮಾನವ ಜೀವನದಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದೆ'

ಮಧುಗಿರಿ: ಮಾನವ ಜೀವನದಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ರೋಗದಿಂದ ಬಳಲುತ್ತಿರುವ ಜನರನ್ನು ಗುಣಪಡಿಸುವ ಮೂಲಕ ಅವರ ಜೀವನಕ್ಕೆ ಹೊಸ ವಿಶ್ವಾಸ ನೀಡುತ್ತಿದ್ದಾರೆ ಎಂದು ಪಾವಗಡದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಅಧ್ಯಕ್ಷ ಜಪಾನಂದಾ ಮಹರಾಜ್ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರಸ್ತೆಯಲ್ಲಿ ರುವ ಶ್ರೀ ಸಿದ್ಧಗಂಗಾ ಹಾಸ್ಪಿಟಲ್ ಡಯಾಲಿಸಿಸ್ ಸೆಂಟರ್, ಪಾವಗಡದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರಿನ ಡಾ.ಎಸ್.ಆರ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಬೃಹತ್ ಆರೋಗ್ಯ ತಪಾಸಣಾ ಶಿಬಿರ, ಹೃದ್ರೋಗ ತಪಾಸಣಾ ಶಿಬಿರ ಹಾಗೂ ಶ್ರವಣ ದೋಷವುಳ್ಳ ಬಡವರಿಗೆ ಉಚಿತವಾಗಿ ಶ್ರವಣ ಸಾಧನವನ್ನು ವಿತರಣೆ ಮಾಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಆರೋಗ್ಯಕರ ಜೀವನ ನಿರ್ಮಾಣವಾಗಲು ವೈದ್ಯರ ಸೇವೆ ಅತ್ಯಗತ್ಯ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೇ ಗ್ರಾಮೀಣ ಪ್ರದೇಶಗಳಲ್ಲಿಯೂ ವೈದ್ಯರು ಜನರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ನಡೆಯುವ ಆರೋಗ್ಯ ಶಿಬಿರಗಳಿಂದ ಬಡವರು ಹಾಗೂ ರೋಗಿಗಳಿಗೆ ಸಾಕಷ್ಟು ಅನುಕೂಲವಾಗುತ್ತದೆ.
ಗ್ರಾಮೀಣ ಭಾಗದ ಆರೋಗ್ಯ ಶಿಬಿರದಲ್ಲಿ ಉತ್ತಮವಾದ ವೈದ್ಯರುಗಳು ಆಗಮಿಸುತ್ತಾರೆ. ಅವರಿಂದಲೇ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಂಡು ಸಲಹೆ ಪಡೆಯಬೇಕೆಂದು ತಿಳಿಸಿದರು. ಪಟ್ಟಣದ ಸಿದ್ದಗಂಗಾ ಡಯಾಲಿಸಿಸ್ ಕೇಂದ್ರದಲ್ಲಿ ೧೫೦೦ ಡಯಾಲಿಸಿಸ್ ಪೂರ್ಣಗೊಂಡಿರುವುದು ತಂದಿದೆ. ಈ ಕೇಂದ್ರದಲ್ಲಿ ಕಣ್ಣಿನ ತಪಾಸಣೆ ಚರ್ಮರೋಗ ತಪಾಸಣೆ ಹಾಗೂ ಸಂತಸ ಡಯಾಲಿಸಿಸ್ ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿ, ಮತ್ತಷ್ಟು ಸ್ಥಳ ದೊರೆತರೆ ಉಚಿತವಾಗಿ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ನಾನು ಬದ್ದನಾಗಿದ್ದೇನೆ ಈ ದಿನ ಶ್ರವಣ ದೋಷವುಳ್ಳ ೩೫ ಮಂದಿಗೆ ಶರಣ ಸಾಧನೆಗಳನ್ನು ನೀಡಲಾಗುತ್ತಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸಹನಾ, ಸಿದ್ದಗಂಗಾ ಹಾಸ್ಪಿಟಲ್ ಡಯಾಲಿಸಿಸ್ ಸೆಂಟರ್ ಕೇಂದ್ರದ ಅನುರಾಧ, ಅಕ್ಷಯ್ ಮಹಿಳಾ ಸಮಾಜದ ಗೌರವಾಧ್ಯಕ್ಷೆ ಪುಷ್ಪಾವತಮ್ಮ, ವೈದ್ಯರಾದ ಅರುಣ್, ಶರತ್, ನಟರಾಜ್, ಶ್ರೀನಿವಾಸ್, ಸ್ವಾತಿ, ಅಭಿಷೇಕ, ಸಿದ್ದಗಂಗಾ ಮೆಡಿಕಲ್ ಕಾಲೇಜಿನ ಎಂ.ಎನ್.ಸAಜೀವ್ ಕುಮಾರ್ , ಇನ್ಫೋಸಿಸ್ ಸಮರ್ಪಣ ತಂಡದ ಮಹೇಶ್, ಶಿಕ್ಷಕ ಶಶಿಕುಮಾರ್ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು