LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"ವಿಜ್ಞಾನ ಕ್ಷೇತ್ರದಲ್ಲಿ ಉಪಗ್ರಹಗಳ ಪಾತ್ರ ಪ್ರಮುಖ: ರಾಮನಗೌಡ ನಾಡಗೌಡ"

ಚಾಮರಾಜನಗರ: ಪ್ರತಿ ಬೂತ್‌ಗಳಲ್ಲಿ ಸ್ಥಳೀಯವಾಗಿ ಮುಖ ಪರಿಚಯವಿರುವ ಕಾಂಗ್ರೆಸ್ ಪಕ್ಷದ ನಿಷ್ಠಾವಂತರನ್ನು (ಬಿಎಲ್‌ಎ- ೨) ಗಳನ್ನಾಗಿ ನೇಮಕ ಮಾಡಿ ಎಂದು ಬ್ಲಾಕ್ ಅಧ್ಯಕ್ಷರುಗಳಿಗೆ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಸಲಹೆ ನೀಡಿದರು.ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಗ್ರಾಮಾಂತರ, ಟೌನ್ ಹಾಗೂ ಹಾರೋಹಳ್ಳಿ- ಮರಳ ವಾಡಿ ಬ್ಲಾಕ್‌ಗಳ ಎಲ್ಲ ಬೂತ್ ಗಳಲ್ಲಿ ಪಕ್ಷದ ಏಜೆಂಟ್ (ಬಿಎಲ್‌ಎ- ೨) ನೇಮಕ ಸಂಬAಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ವಹಿಸಬೇಕಾದ ಜವಾಬ್ದಾರಿಯ ಬಗ್ಗೆ ಚಿಂತನೆ ನಡೆಸುವ ಮಹತ್ವದ ಸಭೆ ಇದಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸದೃಡ ಸಂಘಟನೆ ಮಾಡಲು ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ರೂಪಿಸಿದ ಎಲ್ಲ ಯಶಸ್ವಿ ಹೋರಾಟಗಳು ಜನರು ಕಾಂಗ್ರೆಸ್ ಪಕ್ಷದ ಬೆಂಬಲಕ್ಕೆ ನಿಂತು, ಅಧಿಕಾರಕ್ಕೆ ಬಂದು ನಿಮ್ಮಗಳ ಸೇವೆ ಮಾಡಲು ಸಾಧ್ಯವಾಯಿತು. ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಗ್ರಾಪಂ ನಲ್ಲಿ ೮ ಕೋಟಿ ರೂ ವೆಚ್ಚದ ಅಭಿವೃದ್ದಿ ಕೆಲಸ ಮಾಡಲಾಗಿದೆ. ಡಿಸೆಂಬರ್‌ನಲ್ಲಿ ಗ್ರಾಪಂ ಚುನಾವಣೆ ಎದುರಾಗುವ ಸಾಧ್ಯತೆಯಿದೆ. ಆಗಾಗಿ ತಳ ಮಟ್ಟದಲ್ಲಿ ಮುಖಂಡರುಗಳು ಜವಬ್ದಾರಿ ತೆಗೆದು ಕೊಂಡು ಎಲ್ಲರ ವಿಶ್ವಾಸ ಪಡೆದು ಸಂಘಟನೆ ಮಾಡಿ, ನಿಮಗೆ ಶಕ್ತಿ ಕೊಡಲು ನಾವು ಸಿದ್ದರಿದ್ದೇವೆ ಎಂದರು.

ಕೆಪಿಸಿಸಿ ಅಧ್ಯಕ್ಷರು, ಜಿಲ್ಲಾಧ್ಯಕ್ಷರ ಸಲಹೆ, ಮಾರ್ಗ ದರ್ಶನದಂತೆ ಸಂಘಟನೆ ಮಾಡಲು ನಾವು ತಯಾರಿ ದ್ದೇವೆ. ಈ ಹಿಂದೆ ವಿಧಾನಸಭಾ ಚುನಾವಣೆಗೂ ಮುನ್ನಾ ಬೂತ್ ಮಟ್ಟದ ಏಜೆಂಟ್ ನೇಮಕ ಮಾಡಲಾಗಿತ್ತು. ಆದರೆ ಅವರಿಗೆ ಚುನಾವಣೆ ನಂತರ ಸಭೆ ನಡೆಸಿ ಅವರ ಮುಖಾಂತರ ಪಕ್ಷ ಸಂಘಟಿಸುವ ಕೆಲಸ ಮಾಡಿಲ್ಲ ಎಂದ ಅವರು ಮುಂದೆಯಾದರೂ ಅವರಿಗೆ ಸೂಕ್ತ ಸ್ಥಾನ ನೀಡಿ ಪಕ್ಷ ಸಂಘಟಿಸುವ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಮಾತನಾಡಿ ಗ್ರಾಪಂ ತಾಪಂ, ಜಿಪಂ ಗಳ ಚುನಾವಣೆಗಳು ಎದುರಾಗುವ ಸಾಧ್ಯತೆಯಿದೆ. ಪ್ರತಿ ಗ್ರಾಪಂ ವ್ಯಾಪ್ತಿ ಯಲ್ಲಿ ಬರುವ ಬೂತ್ ಗಳಲ್ಲಿ ಏಜೆಂಟ್ ನೇಮಕ ಮಾಡಲು ಜವಬ್ದಾರಿ ವಹಿಸಿ, ಈಗಾಗಲೇ ನೇಮಕ ಮಾಡಿದ್ದರೆ ಅಥವಾ ಪುನರ್ ನೇಮಕ ಮಾಡಿ ಚುನಾವಣೆಗಳನ್ನು ಎದುರಿಸಲು ಬೇರು ಮಟ್ಟದಿಂದ ಕಾರ್ಯಕರ್ತರು, ಮುಖಂಡರನ್ನು ಅಣಿಗೊಳಿಸಿ ಎಂದು ಬ್ಲಾಕ್ ಅಧ್ಯಕ್ಷರುಗಳಿಗೆ ಸೂಚನೆ ನೀಡಿದರು.

ಮತಚೋರಿ ಸಹಿ ಅಭಿಯಾನ : ರಾಷ್ಟಿçÃಯ ನಾಯಕರಾದ ರಾಹುಲ್ ಗಾಂಧಿ ಅವರು ಎನ್ ಡಿಎ ನಾಯಕರುಗಳ ಕುತಂತ್ರದಿAದ ಮತಗಳ್ಳತನ (ಮತಚೋರಿ) ನಡೆದಿರುವುದರ ವಿರುದ್ದ ಧ್ವನಿ ಎತ್ತಿದ್ದು, ಅದನ್ನು ಬೆಂಬಲಿಸಿ ಪಕ್ಷದ ವತಿಯಿಂದ ರಾಜ್ಯಾಧ್ಯಂತ ಸಹಿ ಅಭಿಯಾನ ನಡೆಯುತ್ತಿದೆ. ನಮ್ಮ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಕನಕಪುರ ತಾಲೂಕು ಹೊರತು ಪಡಿಸಿ ಮತ್ಯಾವ ತಾಲೂಕುಗಳಲ್ಲಿಯೂ ಸಹಿ ಅಭಿಯಾನ ನಡೆದಿಲ್ಲ. ಕೂಡಲೇ ಉಳಿದ ತಾಲೂಕು ಗಳಲ್ಲಿ ಶೀಘ್ರವಾಗಿ ಸಹಿ ಅಭಿಯಾನ ನಡೆಸಿ ಈ ಬಗ್ಗೆ ಕೆಪಿಸಿಸಿ ಗೆ ವರದಿ ನೀಡಬೇಕಿದೆ ಎಂದು ಬ್ಲಾಕ್ ಅಧ್ಯಕ್ಷರುಗಳಿಗೆ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಸೂಚಿಸಿದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಮಾತನಾಡಿ ಬಿಎಲ್‌ಎ-೨ ಏಜೆಂಟ್‌ಗೆ ಚುನಾವಣೆ ಯಲ್ಲಿ ಅವರಿಗೆ ಹೆಚ್ಚಿನ ಜವಬ್ದಾರಿ ಇದೆ. ಅವರು ಮತ ಸೇರ್ಪಡೆ, ತಿದ್ದುಪಡಿ, ಮತದಾರರ ಲ್ಲದವರ ಹೆಸರು ಮತ ಪಟ್ಟಿಯಲ್ಲಿದ್ದರೆ ಎಲ್ಲವುದರ ಬಗ್ಗೆ ಅಧಿಕಾರಿಗಳ ಜೊತೆ ಸಂವಹನ ಮಾಡಬಹುದು. ಆಗಾಗು ಬೂತ್ ಮಟ್ಟದಲ್ಲಿ ನೇಮಕವಾದ ಬಿಎಲ್‌ಎ ೨ ಆದವರಿಗೆ ಪಕ್ಷದ ವತಿಯಿಂದ ತರಬೇತಿ ಕೊಡುವಂತೆ ಜಿಲ್ಲಾಧ್ಯಕ್ಷರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ವಿ.ಹೆಚ್.ರಾಜು, ಅಶೋಕ್ ಮಾತನಾಡಿ ಜಿಲ್ಲಾಧ್ಯಕ್ಷರ ಸಲಹೆಯನ್ನು ಸಾಕಾರ ಮಾಡಲು ಎಲ್ಲ ಮುಖಂಡರುಗಳ ಸಹಕಾರವನ್ನು ಕೋರಿದರು.

ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ದೇವು ಮಾತನಾಡಿದರು. ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿಎನ್‌ಆರ್ ವೆಂಕಟೇಶ್, ನಗರಸಭೆ ಸದಸ್ಯರಾದ ಬಿ.ಸಿ.ಪಾರ್ವ ತ್ತಮ್ಮ, ಅಸ್ಮದ್, ಬೈರೇಗೌಡ, ನಿಜಾಂ ಷರೀಪ್, ಅಣ್ಣು ಮುಖಂಡರಾದ ರೇವಣ್ಣ, ಅಜ್ಮದ್ ಸಾಹುಕಾರ್, ಗುರುಪ್ರಸಾದ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಇದ್ದರು.
ಡಿಸೆಂಬರ್‌ನಲ್ಲಿ ಗ್ರಾಪಂ ಚುನಾವಣೆ ಎದುರಾಗುವ ಸಾಧ್ಯತೆಯಿದೆ: ಶಾಸಕ ಇಕ್ಬಾಲ್ ಹುಸೇನ್ ವಿಜ್ಞಾನ ಕ್ಷೇತ್ರದಲ್ಲಿ ಉಪಗ್ರಹಗಳ ಪಾತ್ರ ಪ್ರಮುಖ: ರಾಮನಗೌಡ ನಾಡಗೌಡ

ಚಾಮರಾಜನಗರ: ಆಧುನಿಕ ವಿಜ್ಞಾನ ಕ್ಷೇತ್ರದಲ್ಲಿ ಉಪಗ್ರಹಗಳ ಪಾತ್ರ ಪ್ರಮುಖವಾಗಿದೆ ಎಂದು ಯು.ಆರ್.ರಾವ್ ಬಾಹ್ಯಾಕಾಶ ಕೇಂದ್ರದ ಸಹ ನಿರ್ದೇಶಕರಾದ ರಾಮನಗೌಡ ವಿ. ನಾಡಗೌಡ ಅವರು ತಿಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿAದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಯು.ಆರ್. ರಾವ್ ಉಪಗ್ರಹ ಕೇಂದ್ರ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾವಿಟಿ ಸೈನ್ಸ್ ಫೌಂಡೇಶನ್ (ರಿ), ಚಾಮರಾಜನಗರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಹ್ಯಾಕಾಶ ಸಪ್ತಾಹ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರಿನ ಯು.ಆರ್. ಉಪಗ್ರಹ ಕೇಂದ್ರವು ಇಸ್ರೋದ ಪ್ರಮುಖ ಅಂಗ ಸಂಸ್ಥೆಗಳಲ್ಲಿ ಒಂದಾಗಿದ್ದು ಅತೀ ಹೆಚ್ಚಿನ ಉಪಗ್ರಹಗಳನ್ನು ಉತ್ಪಾದಿಸುತ್ತದೆ. ಭೂ ವೀಕ್ಷಣೆ, ಸಂಪರ್ಕ ಸೇವೆ, ಬೆಳೆ ಸಮೀಕ್ಷೆ, ಪ್ರಕೃತಿ ವಿಕೋಪಗಳು, ದೇಶದ ಗಡಿಯಲ್ಲಿ ನಡೆಯುವ ಗೂಢಾಚಾರ ಮಾಹಿತಿಗಳನ್ನು ಪಡೆಯಲು, ಪ್ರಕೃತಿ ವಿಕೋಪಗಳ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು, ಭೂಮಿಯಲ್ಲಿ ನೀರು ಅರಣ್ಯ ಸಮೀಕ್ಷೆಗಳನ್ನು ಅಂದಾಜಿಸಲು ಉಪಗ್ರಹಗಳು ಪ್ರಮುಖವಾಗಿದೆ ಎಂದು ಹೇಳಿದರು.

ಮೊದಲ ಉಪಗ್ರಹ ಸ್ಪುತ್ನಿಕ್ ಉಡಾವಣಾ ಸ್ಮರಣಾರ್ಥ ಹಾಗೂ ವಿಶ್ವ ಅಂತರಿಕ್ಷ ಒಪ್ಪಂದದ ಸ್ಮರಣಾರ್ಥವಾಗಿ ವಿಶ್ವಸಂಸ್ಥೆಯು ವಿಜ್ಞಾನಿಗಳಿಗೆ, ಜನಸಾಮಾನ್ಯರಿಗೆ, ವಿಧ್ಯಾರ್ಥಿಗಳಿಗೆ ವಿಜ್ಞಾನದ ಮೇಲಿನ ಆಸಕ್ತಿಯ ಜೊತೆಗೆ ಅರಿವು ಮೂಡಿಸಲು ವಿಶ್ವ ಬಾಹ್ಯಾಕಾಶ ಸಪ್ತಾಹವನ್ನು ಆಯೋಜಿಸಲಾಗಿದೆ ಎಂದರು.

ಇಸ್ರೋ ಸಂಸ್ಥೆಯು ವಿಶ್ವದ ೫ ಬಲಿಷ್ಠವಾದ ಬಾಹ್ಯಾಕಾಶÀ ಸಂಸ್ಥೆಗಳಲ್ಲಿ ಒಂದಾಗಿದೆ. ವಿಕ್ರಂ ಸಾರಾಬಾಯಿ ಅವರು ವಿಜ್ಞಾನ ಕ್ಷೇತ್ರ ಹಾಗೂ ಬಾಹ್ಯಾಕಾಶ ಕ್ಷೇತ್ರಕ್ಕೆ ಹಾಕಿಕೊಟ್ಟ ಬುನಾದಿ ಅವೀಸ್ಮರ ಣೀಯವಾಗಿದೆ. ಯೋಜನೆ ಮತ್ತು ಯೋಚಿಸಿ ಯಾವುದೇ ಕೆಲಸವನ್ನು ಸಹನೆಯಿಂದ ಮಾಡಿದರೆ ಕಾರ್ಯವು ಯಶಸ್ವಿಯಾಗುತ್ತದೆ. ವಿದ್ಯಾರ್ಥಿಗಳು ಅವಕಾಶಗಳಿಂದ ವಂಚಿತರಾಗಬಾರದು. ಆಸಕ್ತ ವಿಷಯಗಳ ಬಗ್ಗೆ ಹೆಚ್ಚು ಗ್ರಹಿಸಿ, ಒಳ್ಳೆಯ ಒಡನಾಡಿಗಳ ಜೊತೆಗೆ ಬೆರೆತು ಸಾಮೂಹಿಕ ಚಿಂತನೆಗಳಿAದ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವಂತೆ ಸಲಹೆ ಮಾಡಿದರು.
ಬಾಹ್ಯಾಕಾಶ ಕ್ಷೇತ್ರಕ್ಕೆ ಯು.ಆರ್.ರಾವ್ ಅವರ ಕೊಡುಗೆ ಅಪಾರವಾಗಿದೆ. ಅಮೇರಿಕಾದ ಸ್ಪೇಸ್ ಎಕ್ಸ್ ನಲ್ಲಿ ರಾವ್ ಅವರ ಹೆಸರಿದ್ದು ಅವರು ಕನ್ನಡಿಗರಾಗಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಯು.ಆರ್. ರಾವ್ ಬಾಹ್ಯಾಕಾಶ ಕೇಂದ್ರದ ಸಹ ನಿರ್ದೇಶಕರಾದ ರಾಮನಗೌಡ ವಿ. ನಾಡಗೌಡ ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ವಿದ್ಯಾರ್ಥಿಗಳು ಯಾವುದೇ ವಿಷಯಗಳ ಬಗ್ಗೆ ಕಲಿಯಲು ಕುತೂಹಲಿಗಳಾಗಿರಬೇಕು. ವಿಜ್ಞಾನ ವಿಷಯಗಳ ಮೇಲಾಗುವ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ತಿಳಿಯಬೇಕು. ಒಂದು ವಿಷಯದ ಮೇಲೆ ಅಧ್ಯಯನ ಮಾಡಲು ಎಲ್ಲಿ, ಏನು, ಹೇಗೆ ಎಂಬುದರ ಬಗ್ಗೆ ಆಸಕ್ತಿ ಹೊಂದಬೇಕು ಎಂದು ಹೇಳಿದರು.
ಚಾಮರಾಜನಗರ ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳು ಮುಂದಿದ್ದಾರೆ. ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಕಡಿಮೆಯಾಗುತ್ತಿದೆ. ಯಾವುದೇ ಕ್ಷೇತ್ರವಿರಲಿ ಮಹಿಳೆ ಪುರುಷ ಸರಿಸಮಾನವಾಗಿ ಸಾಧನೆ ಮಾಡುವ ಎಲ್ಲಾ ಅವಕಾಶಗಳು ಇರುತ್ತವೆ. ಹೀಗಾಗಿ ಯಾವುದೇ ಹಿಂಜರಿಕೆ ಇಲ್ಲದೆ ಎಲ್ಲರು ಆಸಕ್ತ ಕ್ಷೇತ್ರಗಳಲ್ಲಿ ಬದ್ದತೆಯಿಂದ ತೊಡಗಿಕೊಂಡು ಸಾಧನೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಮಾತನಾಡಿ ವಿಜ್ಞಾನ ಮತ್ತು ಜೀವನ ಎರಡು ಒಂದಕ್ಕೂAದು ಹೊಂದಿಕೊAಡಿದ್ದು ಹಾಸುಹೊಕ್ಕಾಗಿದೆ. ವಿಜ್ಞಾನವು ಬದುಕಿನ ಗುಣಮಟ್ಟವನ್ನು ನಿರ್ಧರಿಸುತ್ತದೆ. ಉತ್ತಮ ಪ್ರತಿಭೆಗಳು ಬರಬೇಕಾದರೇ ಶಾಲಾ ಹಂತಗಳಲ್ಲಿ ಸ್ಪರ್ಧೆಗಳಾಗಬೇಕು. ಪ್ರತಿಭಾವಂತರಿಗೆ ವೇದಿಕೆ ದೊರೆಯಲು ಅನುಕೂಲವಾಗುತ್ತದೆೆ ಎಂದರು.

ಪ್ರತಿಭÉಗಳಿಗೆ ಯಾವ ಭೇದ ಭಾವವಿರುವುದಿಲ್ಲ. ಪ್ರಾಮಣಿಕತೆ, ಶ್ರದ್ಧೆಯಿಂದ ಕೆಲಸ ಮಾಡಿದರೆ ಯಶಸ್ಸನ್ನು ತಡೆಯಲು ಯಾರಿಂದಲು ಸಾಧ್ಯವಿಲ್ಲ. ವಿಜ್ಞಾನ ಮತ್ತು ಕಲೆ ಸೇರಿದರೆ ಹೊಸ ಹಿನ್ನೆಲೆ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಆಸಕ್ತಿ ವಿಷಯಗಳ ಬಗ್ಗೆ ವಿಸ್ತಾರವಾಗಿ ತಿಳಿದುಕೊಂಡು ಸಂಬAಧಿಸಿದ ಉನ್ನತ ಕ್ಷೇತ್ರಗಳಲ್ಲಿ ಅಪಾರವಾದ ಸಾಧನೆ ಮಾಡಿ ಕೀರ್ತಿ ತರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ತಿಳಿಸಿದರು.
ಜಿಲ್ಲಾ ಪಂಚಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಹೆಚ್.ಎನ್. ಪುಟ್ಟಗೌರಮ್ಮ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್. ಚಂದ್ರಪಾಟೀಲ್, ಗ್ರಾವಿಟಿ ಸೈನ್ಸ್ ಫೌಂಡೇಷನ್‌ನ ಕಾರ್ಯದರ್ಶಿಗಳಾದ ಎ.ಎಸ್. ಅಭಿಷೇಕ್, ಹಿರಿಯ ವಿಜ್ಞಾನಿಗಳಾದ ಸಂಜೀವ್ ಕುಮಾರ್, ಇಸ್ರೋ ವಿಜ್ಞಾನಿಗಳಾದ ಪ್ರಿಯಾಂಕ, ರಾಜೇಶ್ವರಿ, ವಿಷ್ಣು ಕಿಶೋರ್ ಪೈ, ಪ್ರಸಾದ್ ಮಂಜುನಾಥ್, ವೈಜ್ಞಾನಿಕ ಅಧಿಕಾರಿಗಳಾದ ರಚನಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು