LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಸಿಎಂ ಆಗುವ ಆತುರವಿಲ್ಲ ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ"

ಬೆಂಗಳೂರು: "ಸಿಎಂ ಆಗುವ ಕಾಲ ಹತ್ತಿರ ಬಂದಿದೆಎAದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಲಾಲ್ ಬಾಗ್‌ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

"ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿತೋರಿಸಬೇಡಿ". "ನಾನು ಸಿಎಂ ಹುದ್ದೆಅಲಂಕರಿಸಲುಆತುರದಲ್ಲಿಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲುಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿತಿರುಗುತ್ತಿದ್ದೇನೆ. ನೀವು ಇದೇರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂಇಲ್ಲ" ಎಂದು ತಿಳಿಸಿದರು.

"ನಾನು ಆ ಹೇಳಿಕೆ ಎಲ್ಲಿ ಹೇಳಿದ್ದೇನೆ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ. ನಾನು ಆ ರೀತಿ ಹೇಳಿಲ್ಲ, ಅದರಅಗತ್ಯವೂ ನನಗೆ ಇಲ್ಲ. ನನಗೆ ನನ್ನಗುರಿಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋಕೊಡಲಿ. ರಾಜ್ಯದಜನರ ಸೇವೆ ಹಾಗೂ ಬೆಂಗಳೂರಿನ ನಾಗರೀಕರಿಗೆಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ. ಆದರೆ ಒಳ್ಳೆಯ ಕೆಲಸ ಬಿಟ್ಟು ವಿವಾದ ಸೃಷ್ಟಿಸಲು ಕೆಲವು ಮಾಧ್ಯಮಗಳು ಪ್ರಯತ್ನಿಸುತ್ತಿವೆ" ಎಂದು ಹೇಳಿದರು.
"ಇದೇರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿತಪ್ಪಿಸುವ ಪ್ರಯತ್ನ ಮಾಡಿದರೆ ನಾನು ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ" ಎಂದೂ ತಿಳಿಸಿದರು.

`ಮಳೆ ವೇಳೆ ರಸ್ತೆಗೆಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ'

"ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದುತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಶನಿವಾರ ಮುಂಜಾನೆ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಅವರು ಪ್ರತಿಕ್ರಿಯಿಸಿದರು. ಮಾರತ್ ಹಳ್ಳಿ ಬಳಿ ಮಳೆಯಲ್ಲೇ ಡಾಂಬರು ಹಾಕುತ್ತಿದ್ದ ಬಗ್ಗೆ ಕೇಳಿದಾಗ, "ನಗರದಾದ್ಯಂತರಾತ್ರಿಯೆಲ್ಲಾಜೋರಾಗಿ ಮಳೆ ಸುರಿದಿದೆ.

ನಮ್ಮ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಎಲ್ಲಿಯೂ ಅವಘಡಗಳು ನಡೆದ ಸುದ್ದಿಗಳು ವರದಿಯಾಗಿಲ್ಲ. ಒಂದಷ್ಟುಕಡೆ ಮಾತ್ರ ನೀರಿನ ಹರಿವಿಗೆಅಡಚಣೆಉಂಟಾಗಿದೆ" ಎಂದರು. ಒಂದು ವಾರಗಳ ಹಿಂದೆ ಮುಚ್ಚಿದ್ದ ರಸ್ತೆಗುಂಡಿಗಳು ಮಳೆಗೆ ಮತ್ತೆ ಹಾಳಾಗಿರುವ ಬಗ್ಗೆ ಕೇಳಿದಾಗ, "ಮಳೆ ಬಂದಾಗ ಈ ರೀತಿತೊಂದರೆಯಾಗುತ್ತದೆ, ಸಮಸ್ಯೆ ಬಗೆ ಹರಿಸಲಾಗುವುದು" ಎಂದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು