LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸೆಕ್ಯುರಿಟಿ ಗಾರ್ಡ್ ಮಗನಿಗೆ ಸಿಕ್ತು 3.6 ಕೋಟಿ ರೂ..!

ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ಹಲವು ಆಟಗಾರರು ತಮ್ಮ ಅದೃಷ್ಟ ಬದಲಿಸಿಕೊಂಡಿದ್ದಾರೆ. ಕೆಲ ಆಟಗಾರರು ಐಪಿಎಲ್ ಮೂಲಕವೇ ರಾಷ್ಟ್ರೀಯ ತಂಡಕ್ಕೆ ಎಂಟ್ರಿ ಕೊಟ್ಟರೆ, ಮತ್ತೆ ಕೆಲ ಆಟಗಾರರು ಕೋಟಿ ಮೊತ್ತ ಪಡೆಯುವ ಮೂಲಕ ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಂಡಿದ್ದಾರೆ. ಹೀಗೆ ಒಂದೇ ದಿನದಲ್ಲಿ ಕೋಟ್ಯಧಿಪತಿಯಾದ ಆಟಗಾರರ ಪಟ್ಟಿಗೆ ಹೊಸ ಸೇರ್ಪಡೆ ರಾಬಿನ್ ಮಿನ್ಝ್.

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಜಾರ್ಖಂಡ್‍ಗೆ ರಾಬಿನ್ ಮಿನ್ಝಿ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹೆಸರು ನೀಡಿದ್ದರು. ಅಲ್ಲದೇ, ಈ ಬಾರಿಯಾದರೂ ಹರಾಜಾದರೆ ಸಾಕು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಯುವ ಆಟಗಾರ ಈ ನಿರೀಕ್ಷೆ ಸುಳ್ಳಾಗಲಿಲ್ಲ.
ರಾಬಿನ್ ಮಿನ್ಝಿ ಹೆಸರು ಕೂಗುತ್ತಿದ್ದಂತೆ ಗುಜರಾತ್ ಟೈಟಾನ್ಸ್ ತಂಡವು ಖರೀದಿಗೆ ಆಸಕ್ತಿವಹಿಸಿತು.

ಇದರ ಬೆನ್ನಲ್ಲೇ ಸಿಎಸ್‍ಕೆ, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಬಿಡ್ಡಿಂಗ್ ನಡೆಸಿದ್ದವು. ಪರಿಣಾಮ 20 ಲಕ್ಷದಲ್ಲಿದ್ದ ರಾಬಿನ್ ಮಿನ್ಝ್ ಮೌಲ್ಯವು 3 ಕೋಟಿಯನ್ನು ದಾಟಿತು.ಅಂತಿಮವಾಗಿ ಗುಜರಾತ್ ಟೈಟಾನ್ಸ್ ತಂಡವು 3.6 ಕೋಟಿ ರೂ. ನೀಡುವ ಮೂಲಕ ಜಾರ್ಖಂಡ್‍ನ ಯುವ ವಿಕೆಟ್ ಕೀಪರ್ ಬ್ಯಾಟ್ಸ್‍ಮನ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಂತೆ ಈ ಬಾರಿ ರಾಬಿನ್ ಮಿನ್ಝಿ ಗುಜರಾತ್ ಟೈಟಾನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ತಂದೆ ಸೆಕ್ಯುರಿಟಿ ಗಾರ್ಡ್: ರಾಬಿನ್ ಮಿನ್ಝ್ ಅವರ ತಂದೆ ನಿವೃತ್ತ ಸೇನಾಧಿಕಾರಿ. ಪ್ರಸ್ತುತ ರಾಂಚಿಯ ಮುಂಡಾ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಮಗ ಐಪಿಎಲ್‍ನಂತಹ ದೊಡ್ಡ ಲೀಗ್‍ಗೆ ಆಯ್ಕೆಯಾಗಿರುವುದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು