LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಖೇಲಾ" ಚಿತ್ರದ ಚಿತ್ರೀಕರಣ ಮುಕ್ತಾಯ

"ಶ್ರಾವಣಿ ಸುಬ್ರಹ್ಮಣ್ಯ" ಹಾಗೂ "ಮೈನಾ" ಧಾರಾವಾಹಿಗಳ ಖ್ಯಾತಿಯ ವಿಹಾನ್ ಪ್ರಭಂಜನ್ ನಾಯಕನಾಗಿ ನಟಿಸಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಸಂಗೀತಾ ಭಟ್. ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ "ಖೇಲಾ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು ಹಾಗೂ ಉತ್ತರಕಾಂಡದಲ್ಲಿ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.

ಹಿರಿಯ ನಿರ್ದೇಶಕ ವಿಷ್ಣುಕಾಂತ್ ಅವರ ಪುತ್ರ ಭರತ್ ವಿ.ಜೆ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರ ಪ್ರೇಮ ಕಥಾಹಂದರ ಹೊಂದಿದೆ. ಇದು ಮಾಮೂಲಿ ತರಹದ ಪ್ರೇಮಕಥೆಯಲ್ಲ. ವಿಭಿನ್ನ ಲವ್ ಸ್ಟೋರಿ. ಈ ಚಿತ್ರದ ಮೂಲಕ ಜನಪ್ರಿಯ ಧಾರಾವಾಹಿಗಳಾದ "ಶ್ರಾವಣಿ ಸುಬ್ರಹ್ಮಣ್ಯ" ಹಾಗೂ "ಮೈನಾ" ಧಾರಾವಾಹಿಗಳಲ್ಲಿ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಹಾನ್ ಪ್ರಭಂಜನ್ ನಾಯಕನಾಗಿ ಹಿರಿತೆರೆಗೆ ಪದಾರ್ಪಣೆ ಮಾಡಿದ್ದಾರೆ.

ಆಶಿಕಾ ರಾವ್ ನಾಯಕಿಯಾಗಿ ಈ ಚಿತ್ರದ ಪ್ರಮುಖಪಾತ್ರದಲ್ಲಿ ಯುವರಾಜ್ ಗೌಡ, ಸ್ವಾತಿ ಮುಂತಾದವರಿದ್ದಾರೆ. ವಿಶೇಷಪಾತ್ರದಲ್ಲಿ ನಟಿ ಸಂಗೀತಾ ಭಟ್ ಕಾಣಿಸಿಕೊಂಡಿದ್ದಾರೆ. ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿರುವ "ಖೇಲಾ" ಚಿತ್ರಕ್ಕೆ ಎಂ.ಎಸ್ ತ್ಯಾಗರಾಜ್ ಸಂಗೀತ ನಿರ್ದೇಶನ, ಸ್ವಾಮಿ ಮೈಸೂರು ಛಾಯಾಗ್ರಹಣ ಹಾಗೂ ಅಮಿತ್ ಜವಳ್ಕರ್ ಸಂಕಲನವಿದೆ. ಸಂಭಾಷಣೆಯನ್ನು ಆರ್ ಪ್ರಮೋದ್ ಜೋಯಿಸ್ ಬರೆದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು