LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಿಷಿ ಅಭಿನಯದ "ರುದ್ರ ಗರುಡ ಪುರಾಣ" ಚಿತ್ರದ ಚಿತ್ರೀಕರಣ ಪೂರ್ಣ

ಅಶ್ವಿನಿ ಆರ್ಟ್ಸ್  ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ, ಕನ್ನಡದ ನ್ಯಾಚುರಲ್ ಸ್ಟಾರ್ ಎಂದೇ ಖ್ಯಾತಿಯಾಗಿರುವ ರಿಷಿ ನಾಯಕರಾಗಿ ಅಭಿನಯಿಸಿರುವ "ರುದ್ರ ಗರುಡ ಪುರಾಣ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.ಕ್ಲೈಮ್ಯಾಕ್ಸ್ ಫೈಟ್ ಅನ್ನು ಹೆಚ್ ಎಂ ಟಿ ಫ್ಯಾಕ್ಟರಿಯಲ್ಲಿ ಆರು ದಿನಗಳ ಕಾಲ ಚಿತ್ರಿಸಿಕೊಳ್ಳುವುದರೊಂದಿಗೆ ಈ ಚಿತ್ರದ ಚಿತ್ರೀಕರಣವನ್ನು ಇತ್ತೀಚಿಗೆ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಚಿತ್ರಕ್ಕೆ ಒಟ್ಟು 70 ದಿನಗಳ ಚಿತ್ರೀಕರಣ ನಡೆದಿದೆ.

"ಕವಲು ದಾರಿ" ಚಿತ್ರದಲ್ಲಿ ಟ್ರಾಫಿಕ್ ಪೊಲೀಸ್ ಕೆಲಸದಿಂದ ಕ್ರೈಂ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಲು ಆಸೆ ಪಡುವ ಪಾತ್ರದಲ್ಲಿ ನಟಿಸಿದ್ದ ರಿಷಿ "ರುದ್ರ ಗರುಡ ಪುರಾಣ" ಚಿತ್ರದಲ್ಲಿ ಕ್ರೈಂ ಇನ್ಸ್ ಪೆಕ್ಟರ್ ಆಗಿ ಕಾಣಿಸಿಕೊಂಡಿದ್ದಾರೆ. "ರುದ್ರ ಗರುಡ ಪುರಾಣ" ಆಕ್ಷನ್ ಡ್ರಾಮಾ ಜಾನರ್ ನ ಚಿತ್ರವಾಗಿರುತ್ತದೆ . ಟೆಕ್ನಿಕಲ್ ವಿಚಾರದಲ್ಲಿ ಹಲವಾರು ಹೊಸತನಗಳನ್ನು ಅಳವಡಿಸಿಕೊಂಡು ಫೈಟ್ ಮತ್ತು ಸಾಂಗ್ ಗಳನ್ನು ಚಿತ್ರೀಕರಣ ಮಾಡಿರುವುದು ಈ ಚಿತ್ರದ ವಿಶೇಷ.

"ಡಿಯರ್ ವಿಕ್ರಂ" ಚಿತ್ರದ ನಿರ್ದೇಶಕ ಕೆ ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. "ಕಾಟೇರ" ಚಿತ್ರದಲ್ಲಿ ವಿಲನ್ ಆಗಿ ಅಭಿನಯಿಸಿ ಖ್ಯಾತರಾದ ವಿನೋದ್ ಆಳ್ವ. ಅವಿನಾಶ್. ಕೆ ಎಸ್ ಶ್ರೀಧರ್. ಗಿರಿ. ಕೆ ಆರ್ ಪೇಟೆ ಶಿವು. ಮಜಾ ಭಾರತ ಜಗಪ್ಪ . ಅಶ್ವಿನಿ ಗೌಡ. ಗೌತಮ್ ಮೈಸೂರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಹಾಟ್ ಸ್ಟಾರ್ ನಲ್ಲಿ ಬಿಡುಗಡೆಗೊಂಡು ಯಶಸ್ವಿಗೊಂಡ ತೆಲುಗಿನ "ಸೈತಾನ್" ವೆಬ್ ಸೀರೀಸ್ ರಿಷಿ ಅವರು ನಟಿಸಿದ್ದರು. ಅದಕ್ಕೆ ಅವರಿಗೆ ಅತ್ಯುತ್ತಮ ಖಳನಟ ಪ್ರಶಸ್ತಿ ದೊರಕಿತ್ತು. ತೆಲುಗಿನ ಬಾಲಯ್ಯ ಅವರ ಚಿತ್ರದಲ್ಲಿ ನಟಿಸುವುದರೊಂದಿಗೆ ಹಲವಾರು ತೆಲುಗು ಚಿತ್ರಗಳಲ್ಲಿ ರಿಷಿ ಬಿಜಿಯಾಗಿದ್ದಾರೆ. "ರುದ್ರ ಗರುಡ ಪುರಾಣ" ಚಿತ್ರವನ್ನು ಮೊದಲಿಗೆ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಮಾಡಿ ನಂತರ ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವ ಯೋಜನೆಯನ್ನುರೂಪಿಸಿಕೊಳ್ಳಲಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ. ಇದೇ ತಿಂಗಳಲ್ಲಿ "ರುದ್ರ ಗರುಡ ಪುರಾಣ" ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು