LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕುಸ್ತಿ ಫೆಡರೇಷನ್ ಮೇಲಿನ ಅಮಾನತು ಹಿಂದಕ್ಕೆ

ನವದೆಹಲಿ: ಭಾರತದ ಕುಸ್ತಿ ಫೆಡರೇಷನ್ ಮೇಲೆ ಹೇರಿದ್ದ ತಾತ್ಕಾಲಿಕ ನಿಷೇಧವನ್ನು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ಹಿಂಪಡೆದಿದೆ. ಕುಸ್ತಿ ಸಂಸ್ಥೆ ವಿರುದ್ಧ ಪ್ರತಿಭಟನೆ ನಡೆಸಿರುವ ಬಜರಂಗ್ ಪೂನಿಯಾ, ವಿನೇಶಾ ಫೋಗಾಟ್ ಮತ್ತು ಸಾಕ್ಷಿ ಮಲಿಕ್ ಅವರ ವಿರುದ್ಧ ತಾರತಮ್ಯ ಮಾಡಬಾರದು ಎಂಬ ಬಗ್ಗೆ ಲಿಖಿತ ಖಾತರಿ ನೀಡಬೇಕು ಎಂದು ಫೆಡರೇಷನ್‍ಗೆ ನಿರ್ದೇಶನ ನೀಡಿದೆ.

ಭಾರತ ಕುಸ್ತಿ ಫೆಡರೇಷನ್ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸದ ಕಾರಣ ಕಳೆದ ವರ್ಷದ ಆಗಸ್ಟ್ 23ರಂದು ತಾತ್ಕಾಲಿಕ ನಿಷೇಧ ಹೇರಿತ್ತು.'ಫೆಬ್ರುವರಿ 9ರಂದು ಸಭೆ ಸೇರಿದ ಯುಡಬ್ಲ್ಯುಡಬ್ಲ್ಯು ಬ್ಯೂರೊ, ಅಮಾನತಿನ ಬಗ್ಗೆ ಮರುಪರಿಶೀಲನೆ ನಡೆಸಿ ಎಲ್ಲ ಮಾಹಿತಿಗಳ ಆಧಾರದ ಮೇಲೆ ಅಮಾನತನ್ನು ಹಿಂಪಡೆಯಲು ನಿರ್ಧರಿಸಿತು' ಎಂದು (ಯುಡಬ್ಲ್ಯುಡಬ್ಲ್ಯು) ಪ್ರಕಟಣೆಯಲ್ಲಿ ತಿಳಿಸಿದೆ.

ಹೀಗಾಗಿ ಇನ್ನು ಮುಂದೆ ಅಂತರರಾಷ್ಟ್ರೀಯ ಕುಸ್ತಿ ಸ್ಪರ್ಧೆಗಳಲ್ಲಿ ದೇಶದ ಹೆಸರಿನಲ್ಲಿ ಪೈಲ್ವಾನರು ಭಾಗವಹಿಸಲು ಅವಕಾಶವಾಗಲಿದೆ.
ಕಳೆದ ವರ್ಷದ ಡಿಸೆಂಬರ್‍ನಲ್ಲಿ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಆದರೆ ಕೆಲದಿನಗಳಲ್ಲೇ ರಾಷ್ಟ್ರೀಯ ಕ್ರೀಡಾ ಸಂಹಿತೆ ಉಲ್ಲಂಘನೆ ಆಧಾರದಲ್ಲಿ ಫೆಡರೇಷನ್‍ಅನ್ನು ಅಮಾನತುಗೊಳಿಸಿದ ಭಾರತ ಒಲಿಂಪಿಕ್ ಸಂಸ್ಥೆ ಮೂವರು ಸದಸ್ಯರ ಅಡ್‍ಹಾಕ್ ಸಮಿತಿಯನ್ನು ಕುಸ್ತಿ ವ್ಯವಹಾರಗಳ ಮೇಲ್ವಿಚಾರಣೆಗೆ ನೇಮಕ ಮಾಡಿತ್ತು. 'ಯುಡಬ್ಲ್ಯುಡಬ್ಲ್ಯು ಮಾನ್ಯತೆ ದೊರೆತ ಕಾರಣ ಅಡ್‍ಹಾಕ್ ಸಮಿತಿಗೆ ಈಗ ಏನೂ ಮಾಹತ್ವ ಇಲ್ಲ. ಒಲಿಂಪಿಕ್ ವರ್ಷವಾಗಿರುವ ಕಾರಣ ನಾವು ಶೀಘ್ರ ಟ್ರಯುಲ್ಸ್‍ಗಳನ್ನು ನಡೆಸಲಿದ್ದೇವೆ. ಯಾವುದೇ ಕುಸ್ತಿಪಟುಗಳ ಭವಿಷ್ಯ ಅತಂತ್ರವಾಗದಂತೆ ನೋಡಿಕೊಳ್ಳುತ್ತೇವೆ' ಎಂದು ಸಂಜಯ್ ಸಿಂಗ್ ಹೊಸ ಬೆಳವಣಿಗೆಯ ನಂತರ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು