LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ನೆನಪುಗಳ ಮಾತು ಮಧುರ ತೆರೆಗೆ ಸಿದ್ಧ "

ಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನೃತ್ಯ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿರುವ ಹಾಗೂ RED & WHITE ಸೆವೆನ್ ರಾಜ್ ನಟಿಸಿ, ನಿರ್ಮಿಸಿರುವ "ನೆನಪುಗಳ ಮಾತು ಮಧುರ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕ ಉಮೇಶ್ ಬಣಕಾರ್ ಟ್ರೇಲರ್ಅನಾವರಣ ಮಾಡಿದರು. ನವಶಕ್ತಿ ನಾಗರಾಜ್, ಮಹೇಂದರ್, ಲೋಕೇಂದ್ರ, ಮುನಿಕೃಷ್ಣ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಬಿಡುಗಡೆ
ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನನ್ನ ಹುಟ್ಟುಹಬ್ಬದ ದಿನ ಟ್ರೇಲರ್ ಬಿಡುಗಡೆಯಾಗಿದ್ದು ಖುಷಿಯಾಗಿದೆ. ನೋಡುಗನಿಗೆಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ.  ಸದ್ಯದಲ್ಲೇಚಿತ್ರ ತೆರೆಗೆ ಬರಲಿದೆ.ರೆಡ್ & ವೈಟ್ ಸೆವೆನ್ ರಾಜ್.

"ನೆನಪುಗಳ ಮಾತು ಮಧುರ" ನಾಲ್ಕು ಕಥೆಗಳ ಸಂಗಮ. ಒಂದು ಕಥೆ ಇಪ್ಪತ್ತೈದು ನಿಮಿಷಗಳ ಅವಧಿ ಇರುತ್ತದೆ. ನಾಲ್ಕು ಕಥೆಗಳು ಬೇರೆಯದೆ ಆಯಾಮದಲ್ಲಿ ಸಾಗುತ್ತದೆ. ಸದ್ಯದಲ್ಲೇ ನಾವು ಎದುರಿ ಸುತ್ತಿರುವ ಹಾಗೂ ಕಣ್ಣಮುಂದೆ ನೋಡುತ್ತಿರುವ ಕೆಲವು ವಿಷಯಗಳೇ ಈ ಚಿತ್ರದ ಕಥೆಗೆ ಸ್ಪೂರ್ತಿ. ಇದು ನನ್ನ ನಿರ್ದೇಶನದ ಮೂರನೇ ಚಿತ್ರ. ನನ್ನ ಚಿತ್ರದಲ್ಲಿ ನಟಿಸಲು ಬಂದಿದ್ದನಿರ್ಮಾಪಕ ಸೆವೆನ್ ರಾಜ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಲು ಹೇಳಿದರು. ಕಥೆ, ಚಿತ್ರಕಥೆ, ಸಂಭಾಷಣೆ, ನೃತ್ಯ ನಿರ್ದೇಶನದ ಜವಾಬ್ದಾರಿಯನ್ನೂ ನಿರ್ವಹಿಸಿರುವ ನಾನು ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ. ಕಳೆದವರ್ಷ ನಿರ್ಮಾಪಕರ ಹುಟ್ಟುಹಬ್ಬದ ದಿನ ಈ ಚಿತ್ರ ಆರಂಭವಾಗಿತ್ತು.

ಈ ವರ್ಷ ಅವರ ಹುಟ್ಟುಹಬ್ಬದ ದಿನ ಟ್ರೇಲರ್ ಬಿಡುಗಡೆಯಾಗಿದೆ.ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಚಿತ್ರದ ತಮಿಳು ರೈಟ್ಸ್ ಕೂಡ ಮಾರಾಟವಾಗಿದೆ ಎಂದು ನಿರ್ದೇಶಕ ತಿಳಿಸಿದರು. ಹಾಡುಗಳ ಕುರಿತು ರಾಜು ಎಮ್ಮಿಗನೂರು ಮಾಹಿತಿನೀಡಿದರು. ಚಿತ್ರದಲ್ಲಿ ನಟಿಸಿರುವ ವಸಿಷ್ಠ ಬಂಟನೂರು, ರಣವೀರ್, ರಾಜ್ ಪ್ರಭು, ಅಂಜಲಿ, ರೇಖಾ ರಮೇಶ್
ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು