LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮಸ್ತ್ ಆಗಿದೆ "ಮಾಫಿಯಾ" ಚಿತ್ರದ ಟೀಸರ್

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ "ಮಾಫಿಯಾ" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು.

ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು "ಮಾಫಿಯಾ" ಕುರಿತು ಮಾತನಾಡಿದರು.ಮೊದಲು ಮಾತನಾಡಿದ ನಿರ್ದೇಶಕ ಲೋಹಿತ್, ಈವರೆಗೂ ಯಾರು ತೋರಿಸಿರದ "ಮಾಫಿಯಾ" ಈ ಚಿತ್ರದಲ್ಲಿ ತೋರಿಸಿದ್ದೇವೆ. ಬೇರೆ ಬೇರೆ ಮಾರ್ಕೆಟ್ ಹೆಸರು ಕೇಳಿರುತ್ತೀರಾ. ಆದರೆ ಇದೆ ಮೊದಲ ಬಾರಿಗೆ ರೆಡ್ ಮಾರ್ಕೆಟ್ ಪರಿಚಯಿಸಲಾಗಿದೆ. ಅದು ಏನೆಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದರು.

ಪ್ರಜ್ವಲ್ ದೇವರಾಜ್ ಅಭಿನಯದ 35 ನೇ ಚಿತ್ರವನ್ನು ನಿರ್ಮಿಸುತ್ತಿರುವುದು ಖುಷಿಯಾಗಿದೆ. ನಿರ್ದೇಶಕ ಲೋಹಿತ್ ಸೇರಿದಂತೆ ಚಿತ್ರತಂಡದ ಸಹಕಾರದಿಂದ "ಮಾಫಿಯಾ" ಚಿತ್ರ ಚೆನ್ನಾಗಿ ಮೂಡಿಬಂದಿದೆ. ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ ಎಂದರು ನಿರ್ಮಾಪಕ ಕುಮಾರ್ ಬಿ."ಸಿಕ್ಸರ್" ಚಿತ್ರದಿಂದ ನನ್ನ ಸಿನಿ ಜರ್ನಿ ಸಾಗಿಬಂದಿದೆ. ಮೂವತ್ತೈದು ಚಿತ್ರಗಳನ್ನು ಪೂರೈಸಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ.

ಇನ್ನು "ಮಾಫಿಯಾ" ಚಿತ್ರದ ಬಗ್ಗೆ ಹೇಳಬೇಕಾದರೆ, ಕುಮಾರ್ ಅವರು ಒಳ್ಳೆಯ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಲೋಹಿತ್ ಅವರ ವಯಸ್ಸು ಚಿಕ್ಕದಾಗಿದ್ದರೂ ಕೆಲಸದಲ್ಲಿ ಅಸಾಧಾರಣ. ನಾನು, ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ಪ್ರಜ್ವಲ್ ದೇವರಾಜ್.

ಪಟಪಟ ಎಂದು ಮಾತನಾಡುವ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕಿ ಅದಿತಿ ಪ್ರಭುದೇವ ಹೇಳಿದರು. ನಟ ಶೈನ್ ಶೆಟ್ಟಿ, ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ , ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಹಾಗೂ ಛಾಯಾಗ್ರಾಹಕ ಪಾಂಡಿಕುಮಾರ್ ಸೇರಿದಂತೆ ಅನೇಕರು "ಮಾಫಿಯಾ" ಚಿತ್ರದ ಬಗ್ಗೆ ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು