LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮನೆಗೆ ನುಗ್ಗಿದ ಟಿಪ್ಪರ್ ಮೂರು ಬೈಕ್ ಜಖಂ

ಬೆಂಗಳೂರು: ಮಧ್ಯರಾತ್ರಿ ನಿದ್ದೆಗಣ್ಣಿನಲ್ಲಿದ್ದ ಚಾಲಕ ನಿಯಂತ್ರಣ ತಪ್ಪಿ ಟಿಪ್ಪರ್ ಅನ್ನು ರಸ್ತೆ ಬದಿಯಲ್ಲಿದ್ದ ಮನೆಗೆ ನುಗ್ಗಿಸಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ನಡೆದಿದೆ.ಮನೆಯ ಮುಂದೆ ನಿಲ್ಲಿಸಿದ 3 ಬೈಕ್‍ಗಳು ಜಖಂ ಗೊಡಿವೆ. ಅಲ್ಲದೇ ಮನೆಯ ಕಾಂಪೌಂಡ್ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾತ್ರಿ 1:30 ರ ಸಮಯದಲ್ಲಿ ಘಟನೆ ನಡೆದಿದ್ದು, ದೊಡ್ಡಬಳ್ಳಾಪುರ ಕಡೆಯಿಂದ ಮಳೆಕೋಟೆ ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ಬದಿಯಲ್ಲಿರುವ ಅಭಿ ಎಂಬುವರ ಮನೆಗೆ ನುಗ್ಗಿದೆ. ಟಿಪ್ಪರ್ ಮೊದಲಿಗೆ ಮನೆ ಮುಂಭಾಗದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಮನೆಗೆ ನುಗ್ಗಿದೆ. ವೇಗ ತಗ್ಗಿದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ. ಒಂದು ವೇಳೆ ಲಾರಿ ನೇರವಾಗಿ ಮನೆಗೆ ನುಗ್ಗಿದ್ದರೆ ಭಾರೀ ಅನಾಹುತವೇ ಸಂಭವಿಸುತ್ತಿತ್ತು.

ರಾಜಘಟ್ಟ ಗ್ರಾಮದಲ್ಲಿ ಕ್ರಷರ್ ಲಾರಿಗಳ ಹಾವಳಿ ಹೆಚ್ಚಾಗಿದೆ. ಚಿಕ್ಕಬಳ್ಳಾಪುರದಲ್ಲಿರುವ ಕ್ರಷರ್‍ಗಳಿಂದ ಜಲ್ಲಿ ಕಲ್ಲುಗಳನ್ನ ಸಾಗಿಸುವ ಟಿಪ್ಪರ್-ಲಾರಿಗಳು ಗ್ರಾಮದ ಮೂಲಕವೇ ಸಂಚರಿಸುತ್ತವೆ. ಆದರೆ, ಅವುಗಳ ವೇಗಕ್ಕೆ ನಿಯಂತ್ರಣವೇ ಇಲ್ಲ. ರಸ್ತೆಯಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಗ್ರಾಮ ವ್ಯಾಪ್ತಿಯಲ್ಲಿ ಅವುಗಳ ವೇಗಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರಾದ ಗಣೇಶ್ ರಾಜಘಟ್ಟ ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು