LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಎಲೆಕ್ಟ್ರಾನಿಕ್ ಸಿಟಿ"ಯಲ್ಲಿದೆ ಐಟಿ ಉದ್ಯೋಗಿಯ ವರ್ಕ್ ಲೈಫ್

ಬೆಂಗಳೂರಿನ ಪ್ರಸಿದ್ದ ಬಡಾವಣೆಯ ಹೆಸರೆ ಈಗ ಚಿತ್ರದ ಶೀರ್ಷಿಕೆಬಹುಶಃ "ಎಲೆಕ್ಟ್ರಾನಿಕ್ ಸಿಟಿ" ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ.

ಬೆಂಗಳೂರಿನ ಈ ಸುಪ್ರಸಿದ್ಧ ಬಡಾವಣೆಯಲ್ಲಿ ಸಾಕಷ್ಟು ಐಟಿ ಕಂಪನಿಗಳಿದೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ನಿರ್ಮಾಣವಾಗಿದ್ದು, ನವೆಂಬರ್ 24 ರಂದು ತೆರೆಗೆ ಬರುತ್ತಿದೆ.ಮೂಲತಃ ಐಟಿ ಉದ್ಯೋಗಿಯಾಗಿರುವ ಆರ್ ಚಿಕ್ಕಣ್ಣ ಈ ಚಿತ್ರವನ್ನು ನಿರ್ಮಾಣ ಮಾಡಿ ನಿರ್ದೇಶಿಸಿದ್ದಾರೆ. ಈವರೆಗೂ ಕೆಲವು ಕಿರುಚಿತ್ರಗಳನ್ನು ಚಿಕ್ಕಣ್ಣ ನಿರ್ದೇಶಿಸಿದ್ದಾರೆ.

ಈಗಿನ ಬಹುಪಾಲು ಯುವಕರು ಐಟಿ ಉದ್ಯೋಗಿಗಳಾಗಿದ್ದು, ಸದಾ ಕೆಲಸದ ಒತ್ತಡದಲ್ಲಿರುತ್ತಾರೆ. ಅಂತಹ ಐಟಿ ಕಂಪನಿಯ ಉದ್ಯೋಗಿಯ ವರ್ಕ್ ಲೈಫ್ ಹೇಗಿರುತ್ತದೆ ಎಂಬ ಪ್ರಮುಖ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ತ್ರಿಕೋನ ಪ್ರೇಮ ಕಥೆ ಸಹ ಇದೆ. "ಎಲೆಕ್ಟ್ರಾನಿಕ್ ಸಿಟಿ" ಈಗಾಗಲೇ ಅನೇಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿದೆ. ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ನವೆಂಬರ್ 24 ಚಿತ್ರ ಬಿಡುಗಡೆಯಾಗುತ್ತಿದೆ.

ಆರ್ಯನ್ ಹರ್ಷ "ಎಲೆಕ್ಟ್ರಾನಿಕ್ ಸಿಟಿ ಚಿತ್ರದ ನಾಯಕನಾಗಿದ್ದು, ದಿಯಾ ಆಶ್ಲೇಶ, ರಕ್ಷಿತ ಕೆರೆಮನೆ ನಾಯಕಿಯರಾಗಿ ನಟಿಸಿದ್ದಾರೆ. ರಶ್ಮಿ ಶೆಟ್ಟಿ, ಭವ್ಯ ರುತ್ವಿಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಂದ್ರಶೇಖರ್ ಶ್ರೀವಾಸ್ತವ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ. ರಾಜ ಶಿವಶಂಕರ್ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ ಹಾಗೂ ಹಂಪಿ ಸುಂದರ್ ಅವರ ಕಲಾ ನಿರ್ದೇಶನ "ಎಲೆಕ್ಟ್ರಾನಿಕ್ ಸಿಟಿ" ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು