LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

`ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ’

ದೊಡ್ಡಬಳ್ಳಾಪುರ: ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ ಈರಣ್ಣ ಸಬರದ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ಕವಿಗಳ ಕವಿ ಮತ್ತು ಭುವನದ ಭಾಗ್ಯ ಎಂದು ಕನ್ನಡದ ಕವಿಗಳು ಪ್ರಶಂಸೆ ಮಾಡಿದ್ದಾರೆ.

ರಾಮಯಾಣದ ಕಥೆ ಜಾನಪದ ಮತ್ತು ಶಿಷ್ಟಸಾಹಿತ್ಯ ಎರಡರಲ್ಲೂ ಇದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಲವಕುಶರಿಗೆ ಶಿಕ್ಷಣ ನೀಡುವ ಶಿಕ್ಷಣ ತಜ್ಞರು ವಾಲ್ಮೀಕಿ. ಲವಕುಶರು ಶ್ರೇಷ್ಠ ಗಾಯನದ ಮೂಲಕ ರಾಮಾಯಣವನ್ನು ಹಾಡುತ್ತಾರೆ. ರಾಮಾಯಣ ಕಾವ್ಯದ ಮೂಲಕ ಸುಖ ದುಃಖಗಳನ್ನು ಬದುಕಿನ ಭಾಗ ಎಂಬವೆಂಬ ಸಂದೇಶ ನೀಡಲಾಗಿದೆ ಎಂದರು
ರಾಮಾಯಣ ಕಾವ್ಯ ಮೊದಲ ಎರಡು ಸಾಲುಗಳು ಶೋಕದಿಂದ ಶ್ಲೋಕವಾದ ಸಾಲುಗಳು.

ಇಂದು ರಾಮಾಯಣ ಕಾವ್ಯ ಭಾರತದ ಎಲ್ಲಾ ಭಾಷೆಗಳ ಜೊತೆಗೆ ವಿದೇಶ ಭಾಷೆಗಳಲ್ಲಿ ಇವೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ಮುಖ್ಯ ಶಿಕ್ಷಕರಾದ ಆರ್.ನಾರಾಯಣಸ್ವಾಮಿ ಮಾತನಾಡಿ, ರಾಮಾಯಣ ಮಹಾಕಾವ್ಯ ಜೀವನಮೌಲ್ಯಗಳನ್ನು ಪ್ರತಿಬಿಂಬಿಸುವ ಕಾವ್ಯವಾಗಿದೆ. ಸಾಹಿತ್ಯ ಕೃತಿಗಳು ವಿದ್ಯಾರ್ಥಿಗಳಿಗೆ ಎಂದಿಗೂ ಮಾರ್ಗದರ್ಶನ ನೀಡುತ್ತವೆ. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಧ್ಯಯನವನ್ನು ನಿರಂತರವಾಗಿ ಮಾಡಬೇಕು. ವಿದ್ಯಾರ್ಥಿಗಳು ವಿನಯದೊಂದಿಗೆ ವಿದ್ಯೆಯನ್ನು ಕಲಿಯಬೇಕು. ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನ ನೀಡಬೇಕು. ಸಾಧನೆ ಮಾಡುವ ವ್ಯಕ್ತಿಗಳನ್ನು ಸಮಾಜ ಗೌರವಿಸುತ್ತದೆ. ಮಹತ್ವವನ್ನು ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗೆ ನೀಡುವ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರೇರಣಾ ಸಂಸ್ಥೆ ಅಧ್ಯಕ್ಷೆ ನೇತ್ರಾವತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಉಪಾಧ್ಯಕ್ಷೆ ಶ್ಯಾಮಲಾ, ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಸದಸ್ಯ ನಾರಾಯಣಸ್ವಾಮಿ, ಯೋಗನರಸಿಂಹಮೂರ್ತಿ, ಭಾಸ್ಕರ್, ಯಲ್ಲಪ್ಪಭರಣ್ಣನವರ್, ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪವನ್, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು