LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಗೃಹಲಕ್ಷ್ಮೀ ಯೋಜನೆ ಅನುಷ್ಠಾನದಲ್ಲಿ ಯಾವುದೇ ಲೋಪವಿಲ್ಲ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ ಅನರ್ಹ ಹಾಗೂ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಧನಸಹಾಯ ಪಾವತಿಯಾಗುತ್ತಿದೆ ಎಂಬ ಮಾಧ್ಯಮಗಳ ವರದಿಗಳು ಹಾಗೂ ಮಹಾಲೇಖಪಾಲರ ಲೆಕ್ಕ ತಪಾಸಣೆ ವರದಿಯ ಆಕ್ಷೇಪಣೆಗಳಿಗೆ ಸಂಬAಧಿಸಿದAತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಕೃತ ಸ್ಪಷ್ಟೀಕರಣ ನೀಡಿದೆ. ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯು ಸಂಪೂರ್ಣವಾಗಿ ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳ್ಳುತ್ತಿದ್ದು, ಅರ್ಹ ಫಲಾನುಭವಿಗಳಿಗೆ ತೊಂದರೆಯಿಲ್ಲದೆ ಧನಸಹಾಯ ತಲುಪುತ್ತಿದೆ. ಅನರ್ಹ ಹಾಗೂ ಮೃತ ಫಲಾನುಭವಿಗಳ ನಿಯಂತ್ರಣ ಪ್ರಕ್ರಿಯೆ: ಆದಾಯ ತೆರಿಗೆ ಪಾವತಿದಾರರು ಮತ್ತು ಜಿ.ಎಸ್.ಟಿ ರಿಟರ್ನ್್ಸ ಸಲ್ಲಿಸುವ ಒಟ್ಟು 1,94,560 ಮಹಿಳೆಯರನ್ನು ‘ಕುಟುಂಬ’ (Kutumba) ತಂತ್ರಾಂಶದಲ್ಲಿ ಲಭ್ಯವಾಗುವ ಮಾಹಿತಿಯ ಆಧಾರದ ಮೇಲೆ ಗುರುತಿಸಿ, ಪ್ರತಿ ಮಾಹೆ ಧನಸಹಾಯ ಪಾವತಿಯಿಂದ ಹೊರತುಪಡಿಸಲಾಗುತ್ತಿದೆ. ಮೃತ ಫಲಾನುಭವಿಗಳ ನಿರ್ವಹಣೆ: ಈ ಯೋಜನೆಯಡಿ ನೋಂದಾಯಿತರಾಗಿದ್ದ ಒಟ್ಟು 2,88,376 ಮಹಿಳೆಯರು ಮರಣ ಹೊಂದಿದ್ದಾರೆ. ಇ-ಜನ್ಮ (e-janma) / ಕುಟುಂಬ ತಂತ್ರಾಂಶದ ಮಾಹಿತಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (Pಆಔ) ಮೂಲಕ ಮೃತ ಫಲಾನುಭವಿಗಳ ಮಾಹಿತಿಯನ್ನು ಸಕಾಲದಲ್ಲಿ ಪಡೆದು ಅವರನ್ನು ಯೋಜನೆಯಿಂದ ಕೈಬಿಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.ಮರಣ ಹೊಂದಿದ ಫಲಾನುಭವಿಗಳ ಪೈಕಿ 1,03,922 ಕುಟುಂಬಗಳು ನಿಯಮಾನುಸಾರ ಪಡಿತರ ಚೀಟಿಯಲ್ಲಿ ಯಜಮಾನಿಯ ಹೆಸರನ್ನು ಬದಲಾಯಿಸಿಕೊಂಡು, ಮರು ನೋಂದಣಿ ಮಾಡಿಕೊಂಡು ಧನಸಹಾಯ ಪಡೆಯುತ್ತಿದ್ದಾರೆ.ಮರಣದ ಮಾಹಿತಿ ಸಕಾಲದಲ್ಲಿ ಲಭ್ಯವಾಗದ ಕಾರಣ 1,08,755 ಮೃತ ಫಲಾನುಭವಿಗಳ ಖಾತೆಗೆ ಪಾವತಿಯಾಗಿದ್ದ ರೂ. 115 ಕೋಟಿ ಧನಸಹಾಯ ಮೊತ್ತದಲ್ಲಿ, ಈಗಾಗಲೇ ವಿವಿಧ ಬ್ಯಾಂಕುಗಳೊAದಿಗೆ (PDO) ಸಭೆ ನಡೆಸಿ ರೂ. 15.24 ಕೋಟಿಗಳನ್ನು ಸರ್ಕಾರದ ಖಾತೆಗೆ ಮರು ಭರಣ ಮಾಡಿಕೊಳ್ಳಲಾಗಿದ್ದು, ಬಾಕಿ ಮೊತ್ತದ ವಸೂಲಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಹಾಲೇಖಪಾಲರ ಆಕ್ಷೇಪಣೆಗಳಿಗೆ ತಾಂತ್ರಿಕ ವಿವರಣೆ :ಒಂದೇ ಬ್ಯಾಂಕ್ ಖಾತೆಗೆ ಬಹು ಪಾವತಿ :ಗೃಹಲಕ್ಷ್ಮೀ ಯೋಜನೆಯು ಆಧಾರ್ ಆಧಾರಿತ ಪಾವತಿ ವ್ಯವಸ್ಥೆ ಮೂಲಕ ಅನುಷ್ಠಾನಗೊಳ್ಳುತ್ತಿದೆ. ಇಲಾಖೆಯು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಭೌತಿಕವಾಗಿ ಕ್ಷೇತ್ರ ಭೇಟಿ ನಡೆಸಿ ಪರಿಶೀಲಿಸಿದಾಗ, ಜಂಟಿ (ಎoiಟಿಣ) ಖಾತೆಗಳನ್ನು ಹೊಂದಿರುವ ಫಲಾನುಭವಿಗಳ (ಉದಾ: ಅತ್ತೆ-ಸೊಸೆ, ತಾಯಿ-ಮಗಳು) ಪ್ರಕರಣಗಳಲ್ಲಿ ಮಾತ್ರ ಒಂದೇ ಖಾತೆಗೆ ಹಣ ಜಮೆಯಾಗಿರುವುದು ಕಂಡುಬಂದಿದೆ. ಇವರು ಬೇರೆ ಬೇರೆ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳಾಗಿದ್ದಾರೆ. ಇದಲ್ಲದೆ ಬ್ಯಾಂಕುಗಳ ತಾಂತ್ರಿಕ ದೋಷದಿಂದಲೂ ತಪ್ಪಾದ ಖಾತೆ ವಿವರಗಳು ಹಂಚಿಕೆಯಾಗಿರಬಹುದು. ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವ ಫಲಾನುಭವಿಗಳು: ಫಲಾನುಭವಿಗಳು ತಮ್ಮ ಇಚ್ಛೆಯಂತೆ ಆಧಾರ್ ಜೋಡಣೆಯನ್ನು ಮತ್ತೊಂದು ಬ್ಯಾಂಕ್ ಖಾತೆಗೆ ಬದಲಾಯಿಸಿಕೊಳ್ಳಲು ಸಂಪೂರ್ಣ ಅವಕಾಶವಿರುವುದರಿಂದ, ಬೇರೆ ಬೇರೆ ತಿಂಗಳುಗಳಲ್ಲಿ ಬೇರೆ ಬೇರೆ ಖಾತೆಗಳಿಗೆ ಹಣ ಜಮೆಯಾಗಿರುವ ಸಾಧ್ಯತೆಯಿರುತ್ತದೆ. ಆದರೆ, ಯಾವುದೇ ಒಬ್ಬ ಫಲಾನುಭವಿಗೆ ಒಂದೇ ತಿಂಗಳಲ್ಲಿ ಒಂದಕ್ಕಿAತ ಹೆಚ್ಚು ಖಾತೆಗಳಿಗೆ ಹಣ ಜಮೆಯಾಗಲು ಸಾಧ್ಯವಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು