LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿದ್ದರಾಮಯ್ಯನವರೇ, ಸುಳ್ಳು ಹೇಳಲು ಒಂದು ಮಿತಿ ಬೇಡವೇ?: ಆರ್.ಅಶೋಕ್

ಬೆಂಗಳೂರು: ಸುಳ್ಳು ಹೇಳಲು ಒಂದು ಮಿತಿ ಬೇಡವೇ?, ನುಡಿದಂತೆ ನಡೆದ ಸರ್ಕಾರ ಎಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳಿನ ಮೇಲೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ ಎಂದು ವಿಧಾನ ಸಭೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

2013-18ರಲ್ಲಿ ತಾವು ಕೊಟ್ಟ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ ಎಂದು ಹೇಳಿದ್ದೀರಿ. ಅಸಲಿಗೆ ನಿಮ್ಮ ಪ್ರಣಾಳಿಕೆಯಲ್ಲಿದ್ದ ಘೋಷಣೆಗಳು 165 ಅಲ್ಲ 173. ಅದರಲ್ಲಿ ಐದು ವರ್ಷಗಳಲ್ಲಿ ತಾವು ಈಡೆರಿಸಿದ್ದು ಕೇವಲ 38%, ಅಂದರೆ 67 ಮಾತ್ರ.ಇನ್ನು ಕಳೆದ 10 ತಿಂಗಳುಗಳಲ್ಲಿ ತಮ್ಮ ಸಾಧನೆ ದೊಡ್ಡ ಶೂನ್ಯ. ಗ್ಯಾರೆಂಟಿಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ ರಾಜ್ಯವನ್ನ 1 ಲಕ್ಷ ಕೋಟಿ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದೇ ನಿಮ್ಮ ಸಾಧನೆ.

ಕೊರೋನಾದಂತಹ ಪರಿಸ್ಥಿತಿಯಲ್ಲೂ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ನಂಬರ್ 1 ಸ್ಥಾನದಲ್ಲಿದ್ದ ಕರ್ನಾಟಕವನ್ನ 4ನೇ ಸ್ಥಾನಕ್ಕೆ ಇಳಿಸಿದ್ದೇ ನಿಮ್ಮ ಸಾಧನೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಮೀಸಲಿರಬೇಕಾಗಿದ್ದ 11,000 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳ ಹೆಸರಿನಲ್ಲಿ ಗುಳುಂ ಮಾಡಿದ್ದೇ ನಿಮ್ಮ ಸಾಧನೆ.

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲು, ಬೆಂಗಳೂರಲ್ಲಿ ಬಾಂಬ್ ಸ್ಫೋಟ ಆಗಲು ಬಿಟ್ಟಿದ್ದೇ ನಿಮ್ಮ ಸಾಧನೆ.ರೈತರಿಗೆ ಬರ ಪರಿಹಾರ ಕೊಡದೆ 900ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ತಂದಿದ್ದು, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಗುಳೆ ಹೋಗುವಂತೆ ಮಾಡಿದ್ದೇ ನಿಮ್ಮ ಸಾಧನೆ. ಬೆಂಗಳೂರಿನ ಜನರು ಕುಡಿಯುವ ನೀರಿಗೂ ಪರದಾಡುವ ದುಸ್ಥಿತಿ ತಂದು ಇತಿಹಾಸದಲ್ಲೇ ಇದೆ ಮೊದಲ ಬಾರಿಗೆ ಜನ ಬೆಂಗಳೂರು ಬಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ನಿಮ್ಮ ಸಾಧನೆ.

ಪರೀಕ್ಷೆಗಳ ಸಮಯದಲ್ಲಿ ವಿದ್ಯಾರ್ಥಿಗಳು ಓದಲು ಕರೆಂಟ್ ಇಲ್ಲದೆ, ಪರೀಕ್ಷಾ ಕೇಂದ್ರಕ್ಕೆ ಹೋಗಲು ಬಸ್ಸಿಲ್ಲದೆ ಪರದಾಡುವ ಪರಿಸ್ಥಿತಿ ತಂದಿದ್ದೇ ನಿಮ್ಮ ಸಾಧನೆ.
ನೀರು, ಹಾಲು, ಕರೆಂಟು, ಆಸ್ತಿ ತೆರಿಗೆ, ಆಸ್ತಿ ನೋಂದಣಿ ಶುಲ್ಕ, ಸ್ಟಾಂಪ್ ದರ, ಕಡೆಗೆ ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕವನ್ನೂ ಹೆಚ್ಚಿಸಿ ಜನರನ್ನು ಸುಲಿಗೆ ಮಾಡಿದ್ದೇ ನಿಮ್ಮ ಸಾಧನೆ.

ತಾವು ಎಷ್ಟು ದುರ್ಬಲ ಮುಖ್ಯಮಂತ್ರಿ ಎಂದರೆ ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾಗದೆ, 90ಕ್ಕೂ ಹೆಚ್ಚು ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ, ಗೂಟದ ಕಾರು ನೀಡಿ ಅವರನ್ನು ಸಮಾಧಾನಪಡಿಸಬೇಕಾದ ದಯನೀಯ ಸ್ಥಿತಿ ನಿಮ್ಮದು.ಇಷ್ಟೆಲ್ಲಾ ಸಾಲು ಸಾಲು ವೈಫಲ್ಯಗಳ ನಡುವೆಯೂ ಅದ್ಯಾವ ಮುಖ ಇಟ್ಟುಕೊಂಡು ಜನರ ಬಳಿ ಮತ ಕೇಳುತ್ತಿದ್ದೀರೋ ನಾ ಕಾಣೆ. ಕೇವಲ ಹತ್ತು ತಿಂಗಳಲ್ಲಿ ಜನಮನ್ನಣೆ ಕಳೆದುಕೊಂಡಿರುವ ನಿಮ್ಮ ಸರ್ಕಾರಕ್ಕೆ ಜನ ದಿನನಿತ್ಯ ಶಾಪ ಹಾಕುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಕನ್ನಡಿಗರು ಕಾತುರದಿಂದ ಕಾಯುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು