LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಸಾಲುಮರದ ತಿಮ್ಮಕ್ಕ ಇನ್ನಿಲ್ಲ"

ಬೆಂಗಳೂರು: ಪದ್ಮಶ್ರೀಪುರಸ್ಕೃತೆ ಸಾಲುಮರದ ತಿಮ್ಮಕ್ಕ (೧೧೪) ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಯಿಂದ ಚಿಕಿತ್ಸೆಗಾಗಿ ತಿಮ್ಮಕ್ಕ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗಿದೆ ಇಂದು ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ೧೯೧೧ರ ಜೂನ್ ೩೦ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ ೨೦೧೯ರಲ್ಲಿ ಪದ್ಮಶ್ರೀ ಲಭಿಸಿತ್ತು.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, ೨೦೧೦ನೇ ಸಾಲಿನ ಪ್ರತಿಷ್ಠಿತ `ನಾಡೋಜ' ಪ್ರಶಸ್ತಿ ಸೇರಿ ೨೦೧೯ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ೨೦೨೦ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು