LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟಿಟಿ: ತನಿಷ್ಕಾಗೆ ಮೂರನೇ ಪ್ರಶಸ್ತಿ

ಬೆಂಗಳೂರು: ತನಿಷ್ಕಾ ಕಪಿಲ್ ಕಾಲಭೈರವ ಅವರು ಮಲ್ಲೇಶ್ವರಂ ಅಸೋಸಿಯೇಷನ್‍ನಲ್ಲಿ ನಡೆಯುತ್ತಿರುವ 25ನೇ ವರ್ಷದ ಎಂ.ಎಸ್.ರಾಮಯ್ಯ ಸ್ಮಾರಕ ಟೇಬಲ್ ಟೆನಿಸ್ ಟೂರ್ನಿಯಲ್ಲಿ 17 ವರ್ಷದೊಳಗಿನ ಬಾಲಕಿಯರ ವಿಭಾಗದ ಸಿಂಗಲ್ಸ್‍ನಲ್ಲಿ ಪ್ರಶಸ್ತಿ ಗೆದ್ದರು. ಟೂರ್ನಿಯಲ್ಲಿ ಅವರಿಗೆ ಇದು ಮೂರನೇ ಪ್ರಶಸ್ತಿಯಾಗಿದೆ.

13 ಮತ್ತು 15 ವರ್ಷದೊಳಗಿನ ವಿಭಾಗದಲ್ಲೂ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.ಶುಕ್ರವಾರ ನಡೆದ ಫೈನಲ್‍ನಲ್ಲಿ ತನಿಷ್ಕಾ 11-9, 11-6, 11-7ರಿಂದ ಹಿಯಾ ಸಿಂಗ್ ಅವರನ್ನು ಮಣಿಸಿದರು. ಸೆಮಿಫೈನಲ್‍ನಲ್ಲಿ ತನಿಷ್ಕಾ 11-7, 11-5, 11-8ರಿಂದ ನೀತಿ ಅಗರ್‍ವಾಲ್ ವಿರುದ್ಧ; ಹಿಯಾ 3-11, 11-8, 11-6, 11-7ರಿಂದ ಆಯುಷಿ ಬಿ. ಗೋಡ್ಸೆ ವಿರುದ್ಧ ಗೆಲುವು ಸಾಧಿಸಿದ್ದರು.

17 ವರ್ಷದೊಳಗಿನ ಬಾಲಕರ ವಿಭಾಗದ ಸಿಂಗಲ್ಸ್‍ನಲ್ಲಿ ವರುಣ್ ಬಿ. ಕಶ್ಯಪ್ 13-11, 11-4, 11-13, 12-14, 11-8ರಿಂದ ಅಭಿನವ್ ಕೆ. ಮೂರ್ತಿ ಅವರನ್ನು ಮಣಿಸಿ ಪ್ರಶಸ್ತಿ ಗೆದ್ದರು. ಸೆಮಿಫೈನಲ್‍ನಲ್ಲಿ ವರುಣ್ 11-5, 12-10, 11-9ರಿಂದ ಬಿ.ಆರ್. ಗೌರವ್ ಅವರನ್ನು, ಅಭಿನವ್ 12-14, 11-4, 13-11, 11-9ರಿಂದ ತೆಶುಬ್ ದಿನೇಶ್ ಅವರನನ್ನು ಸೋಲಿಸಿದರು.

ಎನ್‍ಎಂಎಸ್ ವಿಭಾಗದ ಫೈನಲ್‍ನಲ್ಲಿ ಯು.ಎನ್. ರಾಮ್‍ಕುಮಾರ್ ಅವರು 13-11, 11-8, 11-6ರಿಂದ ಕೈರಾ ಬಾಳಿಗಾ ಅವರನ್ನು ಮಣಿಸಿ ಚಾಂಪಿಯನ್ ಆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು