LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹೀಗಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಇಲೆವೆನ್

ಬೆಂಗಳೂರು: ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಖಅಃ) ತಂಡವು ಇದೀಗ ಹೊಸ ಉತ್ಸಾಹದೊಂದಿಗೆ ನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಐಪಿಎಲ್ 2026ರ ಅಭಿಯಾನವನ್ನು ಪ್ರಾರಂಭಿಸಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಪೈಪೋಟಿ ನಿರೀಕ್ಷಿಸಲಾಗಿದೆ.ಆರ್ ಸಿಬಿ ತಂಡವು ಮಿನಿ ಹರಾಜಿನಲ್ಲಿ ಕೆಲ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದ್ದರೂ ಕೆಲ ಸಣ್ಣ ಪುಟ್ಟ ಬದಲಾವಣೆಗಳೊಂದಿಗೆ ಕಳೆದ ವರ್ಷ ಕಣಕ್ಕಿಳಿದ ತಂಡವನ್ನೇ ಹೆಚ್ಚು ನೆಚ್ಚಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ತಂಡದ ಪ್ರಧಾನ ವೇಗಿ ಜೋಶ್ ಹೇಜಲ್ವುಡ್ ಅವರು ಗಾಯದ ಕಾರಣಗಳಿಗಾಗಿ ಮೊದಲ ಕೆಲ ಪಂದ್ಯಗಳಿಗೆ ಲಭಿಸುವುದು ಅನುಮಾನ. ಇನ್ನು ಮತ್ತೊಬ್ಬ ಮಧ್ಯಮ ವೇಗಿ ಯಶ್ ದಯಾಳ್ ಅವರು ಪೋಕ್ಸೋ ಪ್ರಕರಣವನ್ನು ಎದುರಿಸುತ್ತಿರುವ ಕಾರಣಕ್ಕಾಗಿ ತಂಡದಿAದ ಹೊರಗಿದ್ದಾರೆ. ಇವರಿಬ್ಬರ ಬದಲಿಗೆ ತಂಡ ಸಮರ್ಥ ವೇಗಿಗಳನ್ನು ಕಂಡುಕೊAಡರೆ ಉಳಿದಂತೆ ದೊಡ್ಡ ಬದಲಾವಣೆಗಳು ತಂಡದಲ್ಲಿ ಆಗುವುದು ಅನುಮಾನ.ಈ ಸಲದ ಮಿನಿ ಹರಾಜಿನಲ್ಲಿ ಆರ್ ಸಿಬಿಗೆ ಆಲ್ರೌಂಡರ್ ವೆಂಕಟೇಶ್ ಅಯ್ಯರ್, ಮಧ್ಯಮ ವೇಗಿ ಜಾಕೋಬ್ ಡಫಿ ಮತ್ತು ವಿಕೆಟ್ ಕೀಪರ್ ಬ್ಯಾಟರ್ ಜೋರ್ಡಾನ್ ಕಾಕ್ಸ್ರಂತಹ ಸ್ಟಾರ್ ಆಟಗಾರರು ಸೇರ್ಪಡೆಯಾಗಿದ್ದಾರೆ. ಅದೇ ರೀತಿ ಯುವ ಆಟಗಾರರಾದ ವಿಹಾನ್ ಮಲ್ಹೋತ್ರಾ, ಕನಿಷ್ಕ್ ಚೌಹಾಣ್ ಮತ್ತು ಮಂಗೇಶ್ ಯಾದವ್ ಅವರನ್ನು ಫ್ರಾಂಚೈಸಿಯು ಸಹಿ ಮಾಡಿದ್ದಾರೆ. ಇಷ್ಟು ಮಂದಿಯಲ್ಲಿ ಹೇಜಲ್ವುಡ್ ಬದಲಿಗೆ ಡಫಿ ಮತ್ತು ಯಶ್ ದಯಾಳ್ ಬದಲಿಗೆ ಮ್ಯಾಂಗೆಸ್ಟ್ ಆಡುವ ಘಿI ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಆರಂಭಿಕರಾಗಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮತ್ತು ಇಂಗ್ಲೆAಡ್ ನ ಸ್ಫೋಟರ ಬ್ಯಾಟರ್ ಫಿಲ್ ಸಾಲ್ಟ್ ಅವರು ಕಣದಲ್ಲಿ ಕಾಣಿಸಿಕೊಳ್ಳಬಹುದು. ದೇಶೀಯ ಋತುವಿನಲ್ಲಿ ಪ್ರಭಾವಶಾಲಿ ಪ್ರದರ್ಶನ ನೀಡಿದ್ದ ಕನ್ನಡಿಗ ದೇವದತ್ ಪಡಿಕ್ಕಲ್ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬಹುದು. ರಜತ್ ಪಾಟಿದಾರ್ ಮತ್ತು ಜಿತೇಶ್ ಶರ್ಮಾ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ. ನಂತರದ ಕ್ರಮಾಂಕಗಳಲ್ಲಿ ಟಿಮ್ ಡೇವಿಡ್ ಮತ್ತು ಕೃನಾಲ್ ಪಾಂಡ್ಯ ಕಾಣಿಸಿಕೊಳ್ಳಬಹುದು. ಇನ್ನು ಇಂಪ್ಯಾಕ್ಟ್ ಪ್ಲೇಯರ್ ಗಳಾಗಿ ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್ ಮತ್ತು ಮಂಗೇಶ್ ಯಾದವ್ ಗೆ ಅವಕಾಶ ಗಿಟ್ಟಿಸಿಕೊಳ್ಳಬಹುದು.ಖಅಃ ಆಟಗಾರರ ಪಟ್ಟಿ ಬ್ಯಾಟರ್ ಗಳು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದೇವದತ್ ಪಡಿಕ್ಕಲ್ವಿಕೆಟ್ ಕೀಪರ್ ಗಳು: ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್
ಸವ್ಯಸಾಚಿಗಳು: ವೆಂಕಟೇಶ್ ಅಯ್ಯರ್, ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜಾಕೋಬ್ ಬೆಥೆಲ್, ಸ್ವಪ್ನಿಲ್ ಸಿಂಗ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತಾ÷್ವಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್.ಬೌಲರ್‌ಗಳು: ಜೋಶ್ ಹೇಜಲ್‌ವುಡ್, ಭುವನೇಶ್ವರ್ ಕುಮಾರ್, ಯಶ್ ದಯಾಳ್, ರಸಿಖ್ ಸಲಾಂ, ನುವಾನ್ ತುಷಾರ, ಸುಯಾಶ್ ಶರ್ಮಾ, ಅಭಿನಂದನ್ ಸಿಂಗ್, ಜಾಕೋಬ್ ಡಫಿ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು