LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಈ ಬಾರಿ `ಚುನಾವಣಾ ಪರ್ವ ದೇಶದ ಗರ್ವ'

ತಿ.ನರಸೀಪುರ: ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದ್ದು, ಮತದಾರರು ತಪ್ಪದೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮತ ಚಲಾಯಿಸಲು ಮುಂದಾಗಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರ ರವರು ತಿಳಿಸಿದರು.

ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಪುರಸಭೆ ಇಲಾಖೆ ತಿ. ನರಸೀಪುರ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಚೇತನರ ತಾಲ್ಲೂಕು ಮಟ್ಟದ ಸ್ವೀಪ್ ಜಾಗೃತಿ ಬೈಕ್ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ಬಾರಿ `ಚುನಾವಣಾ ಪರ್ವ ದೇಶದ ಗರ್ವ' ಎಂಬ ಧ್ಯೇಯವಾಕ್ಯದೊಂದಿಗೆ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದ್ದೇವೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳೇ ಜೀವಾಳವಾಗಿದೆ. ಆದ್ದರಿಂದ ಎಲ್ಲರೂ ಸಹ ಕಡ್ಡಾಯವಾಗಿ ಮತದಾನ ಮಾಡಿ, ಮತದಾನ ಮಾಡಲು ಯಾವುದೇ ನಿರ್ಲಕ್ಷ್ಯತೆ ಮಾಡಬೇಡಿ, ಇದರಿಂದ ದೇಶ ಹಿಂದುಳಿಯುತ್ತದೆ ಎಂದು ಮತದಾರರಲ್ಲಿ ಮತದಾನದ ಕುರಿತು ಅರಿವು ಮೂಡಿಸಿದರು.ಇದೇ ಏಪ್ರಿಲ್ 26 ರಂದು ನಡೆಯಲಿರುವ ಮತದಾನ ಪ್ರಕ್ರಿಯೆಯು ಬೆಳಿಗ್ಗೆ 7 ರಿಂದ ಸಂಜೆ 6ರವರೆಗೂ ನಡೆಯಲಿದ್ದು, ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.

ನಂತರ ಸಮಾಜ ಕಲ್ಯಾಣಾಧಿಕಾರಿ ರಾಮೇಗೌಡರವರು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಜಾಗೃತಿ ಮೂಡಿಸಿದರು.ಬೈಕ್ ಜಾಥಾವು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸುತ್ತಾ ಮತದಾನದ ಕುರಿತು ಅರಿವು ಮೂಡಿಸಲಾಯಿತು.

ಈ ವೇಳೆ ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಜಯಂತಿ, ತಿ.ನರಸೀಪುರ ಪುರಸಭೆ ಮುಖ್ಯಾಧಿಕಾರಿ ವಸಂತ ಕುಮಾರಿ, ಸಮುದಾಯ ಸಂಘಟನಾ ಅಧಿಕಾರಿ ಶಿವಲಿಂಗಪ್ಪ, ಕೆ. ಮಹದೇವ, ವ್ಯವಸ್ಥಾಪಕ ಮಹೇಂದ್ರ, ತಾಲ್ಲೂಕು ಪಂಚಾಯಿತಿ ಹರ್ಷಿತ್, ರೂಪಶ್ರೀ, ಹರ್ಷ, ಸುರೇಶ್, ಮೋಹನ ಕುಮಾರಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು