LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸುರಂಗದಲ್ಲಿರುವವರು ಶೀಘ್ರ ಹೊರಕ್ಕೆ

ಡೆಹ್ರಾಡೂನ್: ಉತ್ತರಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಸತತ 11ನೇ ದಿನವು ಮುಂದುವರಿದಿದೆ. ಸಿಲುಕಿರುವ ಕಾರ್ಮಿಕರನ್ನು ಹೊರಗೆ ಕರೆತಂದ ತಕ್ಷಣ ಚಿಕಿತ್ಸೆ ನೀಡಲು ಚಿನ್ಯಾಲಿಸೌರ್‍ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 41 ಹಾಸಿಗೆಗಳ ಆಸ್ಪತ್ರೆಯನ್ನು ಸಿದ್ಧಪಡಿಸಲಾಗಿದೆ.

ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ವೇಗವನ್ನು ಪಡೆದುಕೊಂಡಿದೆ. ಅಮೆರಿಕದ ಆಗರ್ ಯಂತ್ರವು ಕುಸಿತಗೊಂಡ ಸುರಂಗದ ಅವಶೇಷಗಳ ಒಳಗೆ 45 ಮೀಟರ್‍ಗಳಷ್ಟು ದೂರ ಕ್ರಮಿಸಿದೆ. ಸಿಲುಕಿರುವ ಕಾರ್ಮಿಕರನ್ನು ತಲುಪಲು 6 ಮೀಟರ್ ಉದ್ದದ 800 ಎಂಎಂ ವ್ಯಾಸದ ಎರಡು ಉಕ್ಕಿನ ಪೈಪ್‍ಗಳನ್ನು ಹಾಕಲು ಸುಮಾರು 12 ಮೀಟರ್‍ಗಳಷ್ಟು ಅಗೆಯಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಲುಕಿರುವವರು ಅದೃಷ್ಟವಶಾತ್ ಜೀವಂತವಾಗಿದ್ದಾರೆ. ಅವರಿಗೆ ಸೂಕ್ತ ಆಹಾರ ಒದಗಿಸಲಾಗಿದೆ. ರಕ್ಷಣೆಯ ಬಳಿಕ ಅವರ ಆರೈಕೆಗಾಗಿ 15 ವೈದ್ಯರ ತಂಡವನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತಕ್ಷಣದ ವೈದ್ಯಕೀಯ ಆರೈಕೆಗಾಗಿ ಎಂಟು ಹಾಸಿಗೆಗಳನ್ನು ಒಳಗೊಂಡಿರುವ ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಳದಲ್ಲಿ ಸ್ಥಾಪಿಸಲಾಗಿದೆ.

ಹಲವಾರು ಅಂಬುಲೆನ್ಸ್‍ಗಳು ಮತ್ತು ಹೆಲಿಕಾಪ್ಟರ್‍ನ್ನು ಸ್ಥಳದಲ್ಲಿ ಇರಿಸಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳು ಹಾಗೂ ಏಮ್ಸ್, ಋಷಿಕೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಕ್ಷಣಾ ಕಾರ್ಯಾಚರಣೆಯ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು