LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಅಡುಗೆ ಅನಿಲ ಸೋರಿಕೆ: ಗಾಯಗೊಂಡಿದ್ದ ಮೂವರ ಸಾವು!

ಕನಕಪುರ: ಅಡುಗೆ ಸಿಲಿಂಡರ್ ಪೈಪ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ದುರಂತದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಕನಕಪುರದ ಅಮರನಾರಾಯಣ ಬ್ಲಾಕ್ ನ ಪ್ರಶಾಂತ್ (22), ಅವರ ತಾಯಿ ಸವಿತಾ (45) ಮತ್ತು ತಂದೆ ಸಿದ್ದರಾಜು (50) ಸಾವನ್ನಪ್ಪಿದ್ದಾರೆ.

ಗ್ಯಾರೇಜ್ ಮುಂಭಾಗದಲ್ಲಿ ತಳ್ಳುಗಾಡಿ ಇಟ್ಟುಕೊಂಡು ಬಜ್ಜಿ-ಬೋಂಡ ಮತ್ತು ಕಾರ ಮಿಕ್ಸರ್ ಮಾರುವ ಹೋಟೆಲ್ ನಡೆಸುತ್ತಿದ್ದ ಪ್ರಶಾಂತ್, ಸೋಮವಾರ ಮನೆಯಲ್ಲೇ ಕಾರ ಮಿಕ್ಸರ್ ತಯಾರಿಸುತ್ತಿದ್ದಾಗ ಸಿಲಿಂಡರ್‌ ಪೈಪ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು.

ಬೆಂಕಿ ಹೆಚ್ಚಾಗುತ್ತಿರುವುದನ್ನು ಕಂಡ ಪ್ರಶಾಂತ್, ಸಿಲಿಂಡರ್ ಹೊತ್ತಿಕೊಂಡು ಮನೆಗೆ ಬೆಂಕಿ ಹತ್ತಬಹುದೆಂದು ಭಯಪಟ್ಟು ಅದನ್ನು ನಂದಿಸಲು ನೀರಿನ ತೊಟ್ಟಿಯಲ್ಲಿ ಹಾಕಲು ಪ್ರಯತ್ನಿಸಿದರು. ಆ ಸಮಯದಲ್ಲಿ ಅವರಿಗೆ ತೀವ್ರವಾಗಿ ಬೆಂಕಿ ತಗಲಿ ಗಂಭೀರ ಸುಟ್ಟ ಗಾಯಗಳಾಗಿದ್ದವು.

ಬೆಂಕಿ ತಗುಲಿ ಸುಟ್ಟ ಗಾಯಗಳಾದಾಗ ಭಯಗೊಂಡ ಪ್ರಶಾಂತ್ ಮತ್ತು ಅವರ ತಂದೆ, ತಾಯಿ ಗ್ಯಾಸ್ ಸ್ಟವ್ ಸಿಲಿಂಡರ್ ಅಲ್ಲೇ ಬಿಟ್ಟು ಮನೆಯ ಒಳಗೆ ಓಡಿದ್ದಾರೆ. ಮನೆಯ ಅಕ್ಕಪಕ್ಕದವರು ಬೆಂಕಿ ಹತ್ತಿಕೊಂಡಿರುವುದನ್ನು ನೋಡಿ ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿಯನ್ನು ತಿಳಿಸಿದ್ದಾರೆ, ಅಗ್ನಿಶಾಮಕ ದಳದವರು ಬಂದು ಬೆಂಕಿಯನ್ನು ನಂದಿಸಿದ್ದರು.

ಘಟನೆಯ ಮಾಹಿತಿ ತಿಳಿದ ಗ್ಯಾಸ್ ಏಜೆನ್ಸಿ ಅವರು ಕಠಿಣ ಸ್ಥಳಕ್ಕೆ ಭೇಟಿ ನೀಡಿ ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದನ್ನು ಪರಿಶೀಲಿಸಿ ಮನೆಯ ಒಳಗಡೆ ಇದ್ದಂತಹ ಗ್ಯಾಸ್ ತುಂಬಿದ್ದ ಮತ್ತೊಂದು ಸಿಲಿಂಡರನ್ನು ಹೊರಗಡೆ ತೆಗೆದಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು