LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಭೀಕರ ಅಪಘಾತ ಮೂವರು ದುರ್ಮರಣ

ಚಿಕ್ಕಬಳ್ಳಾಪುರ: ಜಿಲ್ಲೆಯ ನಗರಗೆರೆ ಬಳಿಯ ತಿರುವಿನಲ್ಲಿ ಜೂ.7 ಶುಕ್ರವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು 3 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, . ಓರ್ವನ ಸ್ಥಿತಿ ಗಂಭೀರವಾಗಿದೆ. ನಗರಗೆರೆ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಈ ಅಪಘಾತದಲ್ಲಿ ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್ (28), ವೇಣು ಗೋಪಾಲ್ (38), ಮಂಜುನಾಥ್ (37) ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಿವಕುಮಾರ್ ಎಂಬವರಿಗೆ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ರಾತ್ರಿ ಗೌರಿಬಿದನೂರು ತಾಲೂಕಿನ ನಗರಗೆರೆ-ವಾಟದಹೊಸಹಳ್ಳಿ ರಸ್ತೆಯಲ್ಲಿ ವೇಣುಗೋಪಾಲ್ ಅವರು ಕಾರಿನಲ್ಲಿ ಬರುವಾಗ ಕಾರು ಆಯತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು