LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಟೈಮ್ ಪಾಸ್' ಟ್ರೈಲರ್‌ ಬಿಡುಗಡೆ!

ಜನಪ್ರಿಯ ಸಿನಿಮಾಗಳ ಅಲೆಯ ನಡುವೆಯೇ ಒಂದಷ್ಟು ಹೊಸತನ ಹೊಂದಿರುವ ಚಿತ್ರಗಳು ತಣ್ಣಗೆ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿವೆ. ಸದ್ಯದ ಮಟ್ಟಿಗೆ ಆ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಚಿತ್ರ ಟೈಮ್ ಪಾಸ್. ಕೆ. ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ, ಇದೇ ಅಕ್ಟೋಬರ್ ೧೭ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೆöÊಲರ್ ಇದೀಗ ಬಿಡುಗಡೆಗೊಂಡಿದೆ. ಈ ಹಿನ್ನೆಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಂದಷ್ಟು ಮಾಹಿತಿಯನ್ನು ಹಂಚಿಕೊAಡಿದೆ.

ನಿರ್ದೇಶಕ ಚೇತನ್ ಜೋಡಿದಾರ್, ನಿರ್ಮಾಪಕರು, ಕಲಾವಿದರು ಮತ್ತು ತಂತ್ರಜ್ಞಸರ ಸಮ್ಮುಖದಲ್ಲಿ ಈ ಟ್ರೈಲರ್‌ ಬಿಡುಗಡೆಗೊಂಡಿದೆ. ಇದೇ ಹೊತ್ತಿನಲ್ಲಿ ನಿರ್ದೇಶಕರು ಈ ಚಿತ್ರದ ಕಥಾ ಹಂದರದ ಬಗೆಗಿನ ಒಂದಷ್ಟುಸೂಕ್ಷ್ಮಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಸಿನಿಮಾ ಮಾಡೋ ಕನಸಿಟ್ಟುಕೊಂಡವರ ಏಳುಬೀಳಿನ ಕಥನ ಹೊಂದಿರುವ ಈ ಸಿನಿಮಾದೊಳಗೆ ಮತ್ತೊಂದು ಸಿನಿಮಾ ಕಥೆ ಪ್ರೇಕ್ಷಕರನ್ನು ತಲುಪಿಕೊಳ್ಳಲಿದೆಯಂತೆ. ಕಾAತಾರ ಚಿತ್ರ ಯಶಸ್ವೀ ಪ್ರದರ್ಶನ ಕಾಣುತ್ತಿರುವ ಈ ಸಂದರ್ಭದಲ್ಲಿ ತಮ್ಮ ಚಿತ್ರಕ್ಕೂ ಕೂಡಾ ಅಂಥಾದ್ದೇ ಉತ್ತೇಜನ ಕೊಡಬೇಕೆಂದು ನಿರ್ದೇಶಕರು ಪ್ರೇಕ್ಷಕರಲ್ಲಿಮನವಿ ಮಾಡಿಕೊಂಡಿದ್ದಾರೆ.

ತಮ್ಮದೇ ಬದುಕಿನಲ್ಲಿ ನಡೆದ ಘಟನೆಗಳಿಗೂ, ಈ ಸಿನಿಮಾ ಕಥೆಗೂ ಇರುವ ನಂಟಿನ ಸುಳಿವನ್ನೂ ಕೂಡಾ ನಿರ್ದೇಶಕರು ತೆರೆದಿಟ್ಟಿದ್ದಾರೆ. ಇದು ಚೇತನ್ ಜೋಡಿದಾರ್ ನಿರ್ದೇಶನದ ಚೊಚ್ಚಲ ಸಿನಿಮಾ. ಸಾಮಾನ್ಯವಾಗಿ ಹೀಗೆ ನಿರ್ದೇಶನಕ್ಕಿಳಿಯುವವರ ಹಿಂದೆ ಒAದಷ್ಟು ಅನುಭವಗಳ ಹಿನ್ನೆಲೆ ಇರುತ್ತದೆ. ಆದರೆ ಚೇತನ್ ಜೋಡಿದಾರ್ ಈವರೆಗೆ ಯಾವ ನಿರ್ದೇಶಕರ ಬಳಿಯಲ್ಲಿಯೂ ಕಸುಬು ಕಲಿತಿಲ್ಲ. ಯೂಟ್ಯೂಬ್ ಮೂಲಕವೇ ನಿರ್ದೇಶನದ ಪಟ್ಟುಗಳನ್ನು ಕರಗತ ಮಾಡಿಕೊಂಡು, ತಮ್ಮ ಜೀವಮಾನದ ಕನಸನ್ನು ಟೈಮ್ ಪಾಸ್ ಮೂಲಕ ನನಸು ಮಾಡಿಕೊಂಡಿದ್ದಾರೆ. ಅದು ಪ್ರೇಕ್ಷಕರಿಗೂ ರುಚಿಸುತ್ತದೆಂಬ ವಿಶ್ವಾಸ ಅವರ
ಮಾತುಗಳಲ್ಲಿ ಧ್ವನಿಸುತ್ತಿತ್ತು.

ಎಂ.ಹೆಚ್ ಕೃಷ್ಣಮೂರ್ತಿ, ಕಿರಣ್ ಕುಮಾರ್ ಶೆಟ್ಟಿ ಮತ್ತು ಗುಂಡೂರ್ ಶೇಖರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಕ್ ಹ್ಯೂಮರ್ ಜಾನರಿಗೆ ಸೇರಿಕೊಳ್ಳುವ ಈ ಚಿತ್ರವನ್ನು ಶ್ರೀ ಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ ಎಂ.ಹೆಚ್ ಕೃಷ್ಣಮೂರ್ತಿ ನಿರ್ಮಾಣ ಮಾಡಿದ್ದಾರೆ. ಇಮ್ರಾನ್ ಪಾಷಾ, ವೈಸಿರಿ ಕೆ ಗೌಡ, ರತ್ಷಾರಾಮ್, ಕೆ. ಚೇತನ್ ಜೋಡಿದಾರ್, ಓಂ ಶ್ರೀ ಯಕ್ಷಶಿಫ್, ಪ್ರಭಾಕರ್ ರಾವ್, ನವೀನ್ ಕುಮಾರ್, ಸಂಪತ್ ಕುಮಾರ್, ಅಶ್ವಿನಿ ಶ್ರೀನಿವಾಸ್ ಮುಖ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಗಿರೀಶ್ ಗೌಡ ಸಾಹಸ ನಿರ್ದೇಶನ, ವೈಷ್ಣವಿ ಸತ್ಯನಾರಾಯಣ್ ನೃತ್ಯ
ನಿರ್ದೇಶನ, ರಾಜೀವ್ ಗಣೇಶ್ ಛಾಯಾಗ್ರಹಣ, ಮಣಿ ಪ್ರಚಾರ ಕಲೆ, ಡಿ. ಶಾಮಸುಂದರ್, ಬಿ.ಕೆ ದಯಾನಂದ ನಿರ್ಮಾಣ ನಿರ್ವಹಣೆ, ಹರಿ ಪರಮ್
ಸಂಕಲನ, ಡಿ.ಎಂ ಉದಯ ಕುಮಾರ್ (ಡಿಕೆ) ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು