LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರೋಹಿತ್ ಮೇಲೆ ಟೈಟಾನ್ಸ್ ಕಣ್ಣು..!

ಈ ಬಾರಿಯ ಐಪಿಎಲ್‍ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಐಪಿಎಲ್ ಟ್ರೇಡ್ ವಿಂಡೋ ಮೂಲಕ ಖರೀದಿಸಿ ನಾಯಕನ ಪಟ್ಟ ನೀಡಿದೆ.

ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾ ಮಾಜಿ ಕ್ಯಾಪ್ಟನ್‍ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅಷ್ಟೇ ಅಲ್ಲದೆ ಹಿಟ್‍ಮ್ಯಾನ್ ಈ ಬಾರಿ ಕೇವಲ ಬ್ಯಾಟರ್ ಆಗಿ ಮುಂಬೈ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಅತ್ತ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಪದಚ್ಯುತಿಗೊಳ್ಳುತ್ತಿದ್ದಂತೆ, ಇತ್ತ ಕೆಲ ಫ್ರಾಂಚೈಸಿಗಳು ಹಿಟ್‍ಮ್ಯಾನ್ ಖರೀದಿಗೆ ಆಸಕ್ತಿ ತೋರಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಿಟ್ಟ ಟ್ರೇಡಿಂಗ್ ಆಫರ್ ಅನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿದೆ.

ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಕೂಡ ರೋಹಿತ್‍ರ ಖರೀದಿಗೆ ಮುಂದಾಗಿರುವುದು ಬಹಿರಂಗವಾಗಿದೆ. ಹಿಟ್‍ಮ್ಯಾನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಗುಜರಾತ್ ಫ್ರಾಂಚೈಸಿ ಬಯಸಿತ್ತು. ಅದರಂತೆ ಮುಂಬೈ ಇಂಡಿಯನ್ಸ್ ಜೊತೆ ಮಾತುಕತೆಯನ್ನೂ ಕೂಡ ನಡೆಸಿದೆ.

ಆದರೆ, ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾಗಾಗಿ ಮುಂದಿಟ್ಟ ಆಫರ್ ಅನ್ನೂ ಕೂಡ ಮುಂಬೈ ಇಂಡಿಯನ್ಸ್‍ಗೆ ಒಪ್ಪಿಗೆಯಾಗಿರಲಿಲ್ಲ. ಎರಡೂ ಫ್ರಾಂಚೈಸಿಗಳು ಸಹಮತಕ್ಕೆ ಬಾರದ ಕಾರಣ ಇದೀಗ ಈ ಡೀಲ್ ಕೂಡ ಕ್ಯಾನ್ಸಲ್ ಆಗಿದೆ ಎಂದು ವರದಿಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು