LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದು ಭಾರತ - ಆಸ್ಟ್ರೇಲಿಯಾ ನಡುವೆ ನಿರ್ಣಾಯಕ ಪಂದ್ಯ

ಟಿ20 ವಿಶ್ವಕಪ್‍ನ ಸೂಪರ್-8 ಪಂದ್ಯದಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಸೇಂಟ್ ಲೂಸಿಯಾದ ಡಾರೆನ್ ಸ್ಯಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್‍ನಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೆಮಿಫೈನಲ್‍ಗೇರಲಿದೆ.

ಅತ್ತ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್‍ನಲ್ಲಿ ರೇಸ್‍ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಜಯ ಸಾಧಿಸಬೇಕು.ಒಂದು ವೇಳೆ ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾ ವಿರುದ್ಧ 50 ಕ್ಕಿಂತ ಹೆಚ್ಚಿನ ರನ್‍ಗಳ ಅಂತರದಿಂದ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.
ಪ್ರಸ್ತುತ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ. +2.425 ನೆಟ್, ರನ್ ರೇಟ್‍ನೊಂದಿಗೆ 4 ಅಂಕಗಳನ್ನು ಕಲೆಹಾಕಿರುವ ಭಾರತ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಳ್ಳಲು ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಬೇಕು.

ಒಂದು ವೇಳೆ ಸೋಲುವ ಪರಿಸ್ಥಿತಿ ಎದುರಾದರೆ ಹೀನಾಯ ಸೋಲನ್ನು ತಪ್ಪಿಸಿಕೊಳ್ಳಬೇಕು. ಈ ಮೂಲಕ ನೆಟ್ ರನ್ ರೇಟ್ ಸಹಾಯದಿಂದ ಅಗ್ರಸ್ಥಾನವನ್ನು ಕಾಯ್ದುಕೊಳ್ಳಬಹುದು. ಈ ಮೂಲಕ ನೇರವಾಗಿ ಸೆಮಿಫೈನಲ್ ಗೇರಬಹುದು.ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್‍ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‍ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಯಡಂ ಝಂಪಾ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು