LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಭಾರತ-ದಕ್ಷಿಣ ಆಫ್ರಿಕಾಗೆ ಇಂದು ನಿರ್ಣಾಯಕ ಏಕದಿನ ಪಂದ್ಯ

ಪರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಉಭಯ ತಂಡಗಳಿಗೂ ಇದು ನಿರ್ಣಾಯಕ ಪಂದ್ಯವಾಗಲಿದೆ. ಮೊದಲ ಪಂದ್ಯವನ್ನು ಟೀಂ ಇಂಡಿಯಾ 8 ವಿಕೆಟ್ ಗಳಿಂದ ಗೆದ್ದುಕೊಂಡರೆ ಎರಡನೇ ಪಂದ್ಯದಲ್ಲಿ 8 ವಿಕೆಟ್ ಗಳ ಸೋಲು ಅನುಭವಿಸಿತ್ತು. ಹೀಗಾಗಿ ಇದೀಗ ಮೂರನೇ ಪಂದ್ಯ ನಿರ್ಣಾಯಕವಾಗಲಿದೆ.

ಕಳೆದ ಎರಡು ಪಂದ್ಯಗಳನ್ನು ಗಮನಿಸಿದರೆ ಇಲ್ಲಿ ಟಾಸ್ ನಿರ್ಣಾಯಕವಾಗುತ್ತಿದೆ. ಎರಡೂ ಪಂದ್ಯಗಳಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಿದ ತಂಡ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಟಾಸ್ ನಿರ್ಣಾಯಕವಾಗುವ ನಿರೀಕ್ಷೆಯಿದೆ.ಟೀಂ ಇಂಡಿಯಾ ಪರ ಆರಂಭಿಕ ಋತುರಾಜ್ ಗಾಯಕ್ ವಾಡ್ ಕಳೆದ ಎರಡೂ ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಹಾಗಿದ್ದರೂ ಅವರಿಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.

ಯುವ ಬ್ಯಾಟಿಗ ಸಾಯಿ ಸುದರ್ಶನ್ ಕಳೆದ ಎರಡೂ ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿ ಉತ್ತಮ ಫಾರ್ಮ್ ನಲ್ಲಿದ್ದಾರೆ. ತಿಲಕ್ ವರ್ಮ, ಸಂಜು ಸ್ಯಾಮ್ಸನ್ ಸಿಕ್ಕ ಅವಕಾಶವನ್ನು ಬಳಸಿಕೊಂಡಿಲ್ಲ. ಬೌಲಿಂಗ್ ನಲ್ಲಿ ಬದಲಾವಣೆ ಸಾಧ್ಯತೆಯಿಲ್ಲ. ನಾಯಕರಾಗಿ ಕೆಎಲ್ ರಾಹುಲ್ ಗೆ ಈ ಸರಣಿ ಗೆಲ್ಲುವುದು ಅವರ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 4.30 ಕ್ಕೆ ಆರಂಭವಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು