LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದು ಕೊನೆಯ ಹಂತದ ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ ಏಳನೇ ಹಾಗೂ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದೆ.ಕೊನೆಯ ಹಂತದಲ್ಲಿ ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ (ಚಂಡೀಗಢ) ಒಟ್ಟು 57 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ಲೋಕಸಭಾ ಚುನಾವಣೆಯ 7 ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈವರೆಗೂ ಶೇ.11.31ರಷ್ಟು ಮತದಾನವಾಗಿದೆ.ಬಿಹಾರ, ಚಂಡೀಗಢ, ಹಿಮಾಚಲ ಪ್ರದೇಶ, ಜಾರ್ಖಂಡ್, ಒಡಿಶಾ, ಪಂಜಾಬ್, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 7 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶಗಳ 57 ಲೋಕಸಭೆ ಕ್ಷೇತ್ರಗಳಲ್ಲಿ 2024ರ ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದ್ದು, ಬೆಳಿಗ್ಗೆ 9 ಗಂಟೆಯ ವೇಳೆಗೆ ಶೇ.11.31ರಷ್ಟು ಮತದಾನವಾಗಿದೆ.

ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ಶೇ.12.94ರಷ್ಟು ಮತದಾನವಾಗಿದ್ದಾರೆ, ಪಂಜಾಬ್ ನಲ್ಲಿ ಕಡಿಮೆ ಶೇ.9.64ರಷ್ಟು ಮತದಾನವಾಗಿದೆ.57 ಕ್ಷೇತ್ರಗಳಲ್ಲಿ 907 ಅಭ್ಯರ್ಥಿಗಳ ಭವಿಷ್ಯಕ್ಕೆ ಇಂದು ತೆರೆ ಬೀಳಲಿದೆ.ಬಿಹಾರ ಶೇ,10.58, ಚಂಡೀಗಢ ಶೇ.11.64, ಹಿಮಾಚಲ ಪ್ರದೇಶ ಶೇ.14.35, ಜಾರ್ಖಂಡ್ ಶೇ.12.15, ಒಡಿಶಾ ಶೇ.7.69, ಪಂಜಾಬ್ ಶೇ.9.64, ಉತ್ತರ ಪ್ರದೇಶ ಶೇ.12.94, ಪಶ್ಚಿಮ ಬಂಗಾಳ ಶೇ.12.63ಪಶ್ಚಿಮ ಬಂಗಾದಲ್ಲಿ 19-ಜಯನಗರ ಸಂಸದೀಯ ಕ್ಷೇತ್ರದ ವ್ಯಾಪ್ತಿಗೆ ಬರುವ 129-ಕುಲ್ತಾಲಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಗುಂಪೊಂದು ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಲೂಟಿ ಮಾಡಿದೆ ಎಂದು ವರದಿಗಳು ತಿಳಿಸಿವೆ.

ಒಂದು ಕಂಟ್ರೋಲ್ ಯೂನಿಟ್ (CU), ಒಂದು ಬ್ಯಾಲೆಟ್ ಯೂನಿಟ್ (BU), ಮತ್ತು ಎರಡು VVPAT ಯಂತ್ರಗಳನ್ನು ಲೂಟಿ ಮಾಡಿರುವ ಕಿಡಿಗೇಡಿಗಳು. ಅವುಗಳನ್ನು ಚರಂಡಿಗೆ ಎಸೆದಿರುವುದು ಕಂಡು ಬಂದಿದೆ.ಈ ಘಟನೆಯ ಹೊರತಾಗಿಯೂ ಸೆಕ್ಟರ್‍ನ ಎಲ್ಲಾ ಆರು ಬೂತ್‍ಗಳಲ್ಲಿ ಅಡೆತಡೆ ಗಳಿಲ್ಲದೆ ಮತದಾನ ಮುಂದುವರೆದಿದೆ. ಹೊಸ ಇವಿಎಂಗಳು ಮತ್ತು ಪೇಪರ್‍ಗಳನ್ನು ಸೆಕ್ಟರ್ ಅಧಿಕಾರಿಗೆ ನೀಡಲಾಗಿದೆ ಎಂದು ಪಶ್ಚಿಮ ಬಂಗಾಳ ಸಿಇಒ ಹೇಳಿದರು.
ಸೆಕ್ಟರ್ ಅಧಿಕಾರಿಯಿಂದ ಎಫ್‍ಐಆರ್ ದಾಖಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಆರು ಬೂತ್‍ಗಳಲ್ಲಿ ಮತದಾನ ಪ್ರಕ್ರಿಯೆಯು ಅಡೆತಡೆಯಿಲ್ಲದೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು