LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದು ರಾಯಲ್ಸ್ಗೆ `ರಾಯಲ್' ಚಾಲೆಂಜ್

ಗುವಾಹಟಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಶುಕ್ರವಾರ ಐಪಿಎಲ್ 16ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಹ್ಯಾಟ್ರಿಕ್ ಜಯ ಗಳಿಸಿರುವ ರಾಜಸ್ಥಾನ, ತನ್ನಷ್ಟೇ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಬಲಿಷ್ಠವಾಗಿರುವ ಕಳೆದ ಬಾರಿಯ ಚಾಂಪಿಯನ್ ಬೆಂಗಳೂರು ತಂಡದ ದೊಡ್ಡ ಸವಾಲು ಎದುರಿಸಲು ಸಜ್ಜಾಗಿದೆ.
ಉಭಯ ತಂಡಗಳು ಬಲಿಷ್ಠ ಬ್ಯಾಟಿಂಗ್ ಕ್ರಮಾಂಕ ಹೊಂದಿರುವ ಕಾರಣ ಬರ್ಸಪರ ಕ್ರೀಡಾಂಗಣದಲ್ಲಿ ರನ್ ಮಳೆ ಸುರಿಯುವ ನಿರೀಕ್ಷೆಯಿದೆ. ರನ್ ಮಷಿನ್ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್ ಸೇರಿದಂತೆ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಉತ್ತಮ ಫಾಮ್ರ‍್ನಲ್ಲಿರುವ ಕಾರಣ ಆರ್‌ಸಿಬಿಯ ಬ್ಯಾಟಿಂಗ್ ಕ್ರಮಾಂಕ ಸದ್ಯ ಎಂಥ ಬೌಲಿಂಗ್ ಶಕ್ತಿಯನ್ನು ಪುಡಿಗಟ್ಟುವ ಸಾಮರ್ಥ್ಯ ಹೊಂದಿದೆ.
ಹಿಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಿಂಚಿನ ಸಂಚಲನ ಮೂಡಿಸಿದ ಟಿಮ್ ಡೇವಿಡ್, ನಾಯಕ ರಜತ್ ಪಾಟೀದಾರ್ ಆರ್‌ಸಿಬಿಯ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಆದರೆ ಆರ್‌ಸಿಬಿ ಬೌಲಿಂಗ್ ಘಟಕ ತನ್ನ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಜೋಶ್ ಹೇಜಲ್‌ವುಡ್ ಅನುಪಸ್ಥಿತಿಯಲ್ಲಿ ಜಾಕೋಬ್ ಡಫಿ ತಂಡದ ಬೌಲಿಂಗ್ ಶಕ್ತಿಗೆ ಬಲ ತುಂಬಿದ್ದಾರೆ. ಮಧ್ಯಮ ಓವರ್‌ಗಳಲ್ಲಿರನ್ ನಿಯಂತ್ರಿಸಲು ಎಡವುತ್ತಿರುವ ಕೃಣಾಲ್ ಪಾಂಡ್ಯ ಮತ್ತು ಸುಯಾಶ್ ಶರ್ಮ ರಾಯಲ್ಸ್ ವಿರುದ್ಧ ತಮ್ಮ ಕೈಚಳಕವನ್ನು ಇನ್ನಷ್ಟು ಸುಧಾರಿಸಿಕೊಳ್ಳಬೇಕಿದೆ. ಅತ್ತ ಜೈಸ್ವಾಲ್, ವೈವಭ್‌ನಂತಹ ಬ್ಯಾಟಿಂಗ್ ದೈತ್ಯರನ್ನು ಹೊಂದಿರುವ ರಾಯಲ್ಸ್ ಸತತ ಮೂರು ಜಯದೊಂದಿಗೆ ಅಂಕಪಟ್ಟಿಯಲ್ಲಿಮೊದಲ ಸ್ಥಾನ ಗಳಿಸಿದೆ. ಇವರಿಬ್ಬರ ಸ್ಥಿರ ಆಟವು ಆತಿಥೇಯ ತಂಡದ ಉತ್ತಮ ಆರಂಭಕ್ಕೆ ಕಾರಣವಾಗಿದೆ.
ಹಿಂದಿನ ಪಂದ್ಯದಲ್ಲಿ ಬುಮ್ರಾ ಅವರ ಓವರ್‌ನ ಮೊದಲ ಎಸೆತವನ್ನೇ ಸಿಕ್ಸರ್‌ಗಟ್ಟಿದ ವೈಭವ್ ಅವರನ್ನು ಆರ್‌ಸಿಬಿ ಬೌಲರ್‌ಗಳು ಹೇಗೆ ನಿಯಂತ್ರಿಸಲಿದ್ದಾರೆ ಎಂಬುದು ಕುತೂಹಲವಾಗಿದೆ. ಬರ್ಸಪರ ಕ್ರಿಕೆಟ್ ಗ್ರೌಂಡ್‌ನಲ್ಲಿ ಆಡಿದ ಹಿಂದಿನ ಎರಡು ಪಂದ್ಯಗಳಲ್ಲಿ ಜಯ ಗಳಿಸಿರುವ ರಾಯಲ್ಸ್ ಅತ್ಮಸ್ಥೈರ್ಯದೊಂದಿಗೆ ಕಣಕ್ಕಿಳಿಯುತ್ತಿದೆ. ಅತ್ತ ತವರಿನಲ್ಲಿ ಆಡಿದ ಹಿಂದಿನ 2 ಪಂದ್ಯಗಳಲ್ಲಿ ಜಯ ಗಳಿಸಿರುವ ಆರ್‌ಸಿಬಿ ಹಾಲಿ ಋತುವಿನಲ್ಲಿ ಇದೇ ಮೊದಲ ಸಲ ತವರಿನಾಚೆಯ ಪಂದ್ಯಕ್ಕೆ ಸಜ್ಜಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು