LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದು ಸರಣಿ ನಿರ್ಣಾಯಕ ಪಂದ್ಯ

ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಣ ಮೂರನೇ ಟಿ20 ಪಂದ್ಯವು ಇಂದು (ಜ.9) ನಡೆಯಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಮ್ಯಾಚ್ ಸರಣಿ ನಿರ್ಣಾಯಕ ಪಂದ್ಯ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 9 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತ್ತು.

ಇನ್ನು ದ್ವಿತೀಯ ಟಿ20 ಪಂದ್ಯವನ್ನು ಆಸ್ಟ್ರೇಲಿಯಾ ತಂಡ 6 ವಿಕೆಟ್‍ಗಳಿಂದ ಗೆದ್ದುಕೊಂಡಿದೆ. ಇದೀಗ ಕೊನೆಯ ಟಿ20 ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.

ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು 6 ವಿಕೆಟ್‍ಗಳಿಂದ ಸೋಲಿಸಿದ್ದ ಆಸ್ಟ್ರೇಲಿಯಾ, 2ನೇ ಪಂದ್ಯದಲ್ಲಿ 3 ರನ್‍ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ 190 ರನ್‍ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯನ್ನು ಗೆದ್ದುಕೊಂಡಿತು.

ಇದೀಗ ಏಕದಿನ ಸರಣಿ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಂತೆ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ಆಸೀಸ್ ಪಡೆಯನ್ನು ಬಗ್ಗು ಬಡಿದು ಭಾರತ ತಂಡ ಸರಣಿ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು