LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದು 4ನೇ ಟಿ20 ಪಂದ್ಯ ಭಾರತಕ್ಕೆ ಬೌಲರ್‍ಗಳದ್ದೇ ಚಿಂತೆ

ರಾಯಪುರ್: ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ಕ್ರಿಕೆಟ್ ತಂಡ ಶುಕ್ರವಾರ ಆಸ್ಟ್ರೇಲಿಯಾ ಎದುರಿನ ಸರಣಿಯ ನಾಲ್ಕನೇ ಟಿ20 ಪಂದ್ಯದಲ್ಲಿ ಆಡಲಿದೆ.2-1ರಿಂದ ಮುಂದಿರುವ ಭಾರತ ತಂಡವು ಸರಣಿ ಕೈವಶ ಮಾಡಿಕೊಳ್ಳಲು ಇದು ಸುಸಂದರ್ಭ. ಇಲ್ಲದಿದ್ದರೆ ಬೆಂಗಳೂರಿನಲ್ಲಿ ನಡೆಯುವ ಕೊನೆಯ ಪಂದ್ಯದಲ್ಲಿ ಕಠಿಣ ಹಾದಿ ಸವೆಸಬೇಕಾಗಬಹುದು.

ಭಾರತ ತಂಡವು ಮೂರನೇ ಪಂದ್ಯದಲ್ಲಿ ಋತುರಾಜ್ ಗಾಯಕವಾಡ್ ಅವರ ಸಿಡಿಲಬ್ಬರದ ಶತಕದಿಂದಾಗಿ ಭಾರತ ತಂಡವು ಬೃಹತ್ ಗುರಿಯನ್ನು ಒಡ್ಡಿತ್ತು. ಆದರೆ, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‍ವೆಲ್ ಅವರ ಮಿಂಚಿನ ಶತಕವನ್ನು ತಡೆಯಲು ಭಾರತದ ಬೌಲರ್‍ಗಳಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಪಂದ್ಯದಲ್ಲಿ ಸೋತಿತು.

ವೇಗಿ ಪ್ರಸಿದ್ಧ ಕೃಷ್ಣ ಕೇವಲ ನಾಲ್ಕು ಓವರ್‍ಗಳಲ್ಲಿ 68 ರನ್‍ಗಳನ್ನು ಕೊಟ್ಟರು. ಅದರಲ್ಲೂ ನಿರ್ಣಾಯಕವಾಗಿದ್ದ ಕೊನೆಯ ಓವರ್‍ನಲ್ಲಿ 21 ರನ್‍ಗಳನ್ನು ಬಿಟ್ಟುಕೊಟ್ಟರು. ಆವೇಶ್ ಖಾನ್ ಕೂಡ ಲೈನ್ ಮತ್ತು ಲೆಂಗ್ತ್ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ. ಇದೀಗ ತಂಡಕ್ಕೆ ದೀಪಕ್ ಚಾಹರ್ ಮರಳಿದ್ದಾರೆ.

ಆದ್ದರಿಂದ ಅವರ ಮೇಲೆ ಹೊಸ ಚೆಂಡಿನ ಓವರ್‍ಗಳನ್ನು ನಿರ್ವಹಿಸುವ ಹೊಣೆ ಬೀಳುವ ಸಾಧ್ಯತೆ ಇದೆ. ನವವಿವಾಹಿತ ಮುಕೇಶ್ ಕುಮಾರ್ ಒಂದು ಪಂದ್ಯದ ಅನುಪಸ್ಥಿತಿಯ ನಂತರ ತಂಡಕ್ಕೆ ಮರಳಲಿದ್ದಾರೆ.ಆರ್ಷದೀಪ್ ಸಿಂಗ್ ಅವರು ತಮ್ಮ ಎಸೆತಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಪ್ರಯೋಗಿಸುವ ಅಗತ್ಯ ಇದೆ. ಸ್ಪಿನ್ನರ್ ಅಕ್ಷರ್ ಪಟೇಲ್ ಮತ್ತು ರವಿ ಬಿಷ್ಣೋಯಿ ಅವರು ಜೊತೆಯಾಟಗಳನ್ನು ಮುರಿಯುವಲ್ಲಿ ಸಫಲರಾದರೆ ಭಾರತದ ಹಾದಿ ಸುಲಭವಾಗಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು