ಬೆಂಗಳೂರು: ಮಳೆ ಹಿನ್ನೆಲೆ ಇಂದು ನಡೆಯಬೇಕಾಗಿದ್ದ ಯುವ ದಸರಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಇಂದು ಸಂಜೆ ಯುವ ದಸರಾ ಕಾರ್ಯಕ್ರಮದಲ್ಲಿ ಸ್ಯಾಂಡಲ್ವುಡ್ ನಟರ ಆರ್ಕ್ಯಾಸ್ಟಾç ಕಾರ್ಯಕ್ರಮ ಏರ್ಪಾಡು ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಟರಾದ ಶಿವರಾಜಕುಮಾರ್, ಡಾಲಿ ಧನಂಜಯ್, ರಚಿತಾ ರಾಮ್, ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಮತ್ತಿತರರು ಪಾಲ್ಗೊಳ್ಳಬೇಕಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ಪಾಲ್ಗೊಳ್ಳುವ ಸಾಧ್ಯತೆಯಿತ್ತು. ನಿನ್ನೆ ನಡೆದ ಕಾರ್ಯಕ್ರಮವು ಸಹ ಅರ್ಧಕ್ಕೆ ರದ್ದಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಾಗಿರುವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.