LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chitradurga

ನಾಳೆ ಛಲವಾದಿ ಸಮಾಜದಿಂದ ಹಳೇ ಎಸ್‌ಸಿ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ

ಚಿತ್ರದುರ್ಗ: ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷ ಪಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ರವರ ಆಯೋಗದ ವರದಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಬೇಕು, ಒಳಮೀ ಸಲಾತಿ ರಹಿತ ಹಳೆ ಮೀಸಲಾತಿಯ ಜಾರಿಗಾಗಿ ಒತ್ತಾಯಿಸಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಮಾ. 25ರ ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿರುವುದಾಗಿ ಛಲವಾದಿ ಗುರುಪೀಠದ ಶ್ರೀಗಳಾದ ಬಸವನಾಗಿದೇವ ಶರಣರು ತಿಳಿಸಿದರು.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶ್ರೀಗಳು, ಭಾರತದ ಸರ್ವೋಚ್ಚ ನ್ಯಾಯಾಲಯವು ದಿನಾಂಕ: 01. 08.2024 ರಂದು ಒಳಮೀಸಲಾತಿಯನ್ನು ನೀಡಲು ಆಯಾರಾಜ್ಯಗಳಿಗೆ ಅಧಿಕಾರವಿದೆ ಎಂದು ತೀರ್ಪು ನೀಡಿದ್ದು.ಪರಿಶಿಷ್ಟ ಜಾತಿಯಲ್ಲಿ ಬರು ವ ಎಲ್ಲಾ ಉಪ ಜಾತಿಗಳಿಗೂ ಸೂಕ್ತ ಪ್ರಾತಿನಿಧ್ಯ ಸಿಗದ ಬಗ್ಗೆ ಖಚಿತವಾದ ಅಂಕಿಅAಶಗಳ ವರದಿ ಆಧಾರದ ಮೇಲೆ ಹಾಗೂ ಅಗತ್ಯವಾದ ಪೂರ್ಣ ಅಂಕಿ ಅಂಶಗಳನ್ನು ಪಡೆದು ಒಳಮೀಸಲಾತಿ ನೀಡಬಹುದೆಂದು ಆದರೆ, ಅನುಕೂಲ ಸಿಂಧು ರಾಜಕೀಯಕ್ಕಾಗಿ ಮನಸ್ಸಿಗೆ ಬಂದAತೆ ಒಳ ಮೀಸಲಾತಿ ನೀಡಲಾಗದು ಎಂದು ರಾಜ್ಯ ಸರ್ಕಾರಗಳು ಮಾಡುವ ಮೀಸಲಾತಿ ವರ್ಗೀಕರಣವು ನ್ಯಾಯಾಂಗದ ಪುನರ್ ಪರಿಶೀಲನೆಗೆ ಒಳಪಟ್ಟಿರುತ್ತದೆ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.
ಸದರಿ ತೀರ್ಪಿನನ್ವಯ ಕರ್ನಾಟಕ ಸರ್ಕಾರವು ನ್ಯಾಯಮೂರ್ತಿ ನಾಗ ಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಒಳಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ನೇಮಕ ಮಾಡಿ ಸಮೀಕ್ಷೆ ನಡೆಸಿ ವರದಿಯನ್ನು ಪಡೆದು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ನೇರ ನೇಮಕಾತಿಗೆ ಸಂಬAಧಿಸಿದAತೆ ಹೊರಡಿಸಿರುವ ಆದೇಶವು ಪರಿಶಿಷ್ಟ ಜಾ ತಿ ಬಲಗೈ ಸಮುದಾಯಕ್ಕೆ ಮರಣ ಶಾಸನವಾಗಿದೆ ಎಂದು ದೂರಿದರು.
ಚಿತ್ರದುರ್ಗ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಶೇಷಪ್ಪ ಹೆಚ್ ಮಾತನಾಡಿ, ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರು ಸಮೀಕ್ಷೆಯ ನ್ನು ಪೂರ್ಣ ಪ್ರಮಾಣದಲ್ಲಿ ನಡೆಸದೇ, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಗತ್ಯ ಅಂಕಿ ಅಂಶಗಳನ್ನು ಕ್ರೂಢೀಕರಿಸದೇ, ಒಂದು ಜಾತಿಯನ್ನು ಒಲೈಸಲು, ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನ ಸಂಖ್ಯೆಯನ್ನು 04 ಭಾಗಗಳಾಗಿ ವಿಂಗಡಿಸಿ 1.38ಲಕ್ಷ ಬಲಗೈ ಸಮುದಾ ಯದ ಜನಸಂಖ್ಯೆಯನ್ನು ಅಲೆಮಾರಿ ಗುಂಪಿಗೆ, 2,58,915 ಜನಸಂಖ್ಯೆ ಯನ್ನು ಮಾದಿಗರ ಗುಂಪಿಗೆ ಸರ್ಕಾರದ ನಿಬಂಧನೆಗಳಿಗೆ ವಿರುದ್ಧವಾಗಿ 4,74.954 ಜನರನ್ನು ಆದಿಕರ್ನಾಟಕ, ಆದಿ-ದ್ರಾವಿಡ ಹಾಗೂ ಆದಿ-ಆಂಧ್ರಗಳೆAದು ವಿಂಗಡಿಸಿ.
ಶೇಕಡ 1ರಷ್ಟು ಮೀಸಲಾತಿ ನಿಗದಿಪಡಿಸಲು ಶಿಫಾರಸ್ಸು ಮಾಡಿರುವುದ ಲ್ಲದೇ ಜನರಲ್ ಮೆರಿಟ್‌ನಲ್ಲಿ ನೇಮಕವಾಗಿರುವ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ನೌಕರರನ್ನು ಒಟ್ಟಾರೆ ಸಂಖ್ಯೆಯಲ್ಲಿ ಪರಿಗಣಿಸಿ ರುವುದಲ್ಲದೇ.ಸಾಮಾನ್ಯ ಸ್ಥಾನಗಳಲ್ಲಿ ಗೆದ್ದಿರುವ ಜನಪ್ರತಿನಿಧಿಗಳನ್ನು ಬಲಗೈ ಜನ ಪ್ರತಿನಿಧಿಗಳ ಒಟ್ಟಾರೆ ಸಂಖ್ಯೆಯಲ್ಲಿ ಪರಿಗಣಿಸಿ, ದುರುದ್ದೇಶ ಪೂರಿತವಾದ ಪಕ್ಷಪಾತದಿಂದ ಕೂಡಿದ ವರದಿಯನ್ನು ಸಿದ್ಧಪಡಿಸಿ. ಚೆನ್ನಾಗಿ ಉಂಡವರು, ತ್ಯಾಗ ಮಾಡಬೇಕು ಎಂದು ಉದ್ದೇಶ ಪೂರ್ವಕ ವಾಗಿಯೇ ಬಲಗೈ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೌಲಭ್ಯ ದೊರೆಯದಂತೆ ವರದಿ ನೀಡಿರುತ್ತಾರೆ ಎಂದು ಆರೋಪಿಸಿದರು.
ಛಲವಾದಿ ಮುಖಂಡ ತಿಪ್ಪೇಸ್ವಾಮಿ ಮಾತನಾಡಿ,ಸದರಿ ವರದಿಯನ್ವ ಯ ರಾಜ್ಯ ಸರ್ಕಾವು ಪರಿಶಿಷ್ಟ ಜಾತಿಯ ಬಲಗೈ ಸಮುದಾಯವನ್ನು ಗ್ರೂಪ್ ಬಗ್ಗೆ ಸೇರಿಸುವುದರ ಮೂಲಕ ಯಾವುದೇ ಉನ್ನತ ಹುದ್ದೆಗಳು ಹೊಲಯ/ಛಲವಾದಿ ಬಲಗೈ ಸಮುದಾಯಕ್ಕೆ ಸಿಗದಂತೆ ರೋಸ್ಟರ್ ಬಿಂದುಗಳನ್ನು ನಿಗದಿಪಡಿಸಿರುತ್ತದೆ. ರಾಜ್ಯ ಸರ್ಕಾರವು ಶೇಕಡ 17+7ರ ಮೀಸಲಾತಿ ಪ್ರಮಾಣಕ್ಕೆ ರಾಜ್ಯ ಉಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು, ಸಾಮಾನ್ಯ ವರ್ಗದವರು ನೇಮಕಾತಿ ಪ್ರಕ್ರಿಯೆಯನ್ನು ಕೈಗೊ ಳ್ಳಬೇಕೆಂದು ಹೋರಾಟ ರೂಪಿಸಿದ ಹಿನ್ನೆಲೆಯಲ್ಲಿ.
ಶೇಕಡ 15+3ರ ಪ್ರಮಾಣದಲ್ಲಿ ಒಳಮೀಸಲಾತಿ ರಹಿತ ನೇಮಕ ಮಾ ಡಲು ಆದೇಶ ಹೊರಡಿಸಿ ಗೆಜೆಟ್ ನಲ್ಲಿ ಪಕಟಿಸಿರುತ್ತದೆ. ಆದರೆ, 101 ಜಾತಿಗಳಲ್ಲಿ ಒಂದು ಸಮುದಾಯವು ಶೇಕಡ 15+30 ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಅಳವಡಿಸಬೇಕೆಂದು ಹೋರಾಟ ಮಾಡುತ್ತಿ ರುವ ಹಿನ್ನೆಲೆಯಲ್ಲಿ,ದಿನಾಂಕ: 27.03.2026ರಂದು ರಾಜ್ಯ ಸಚಿವ ಸಂ ಪುಟದ ವಿಶೇಷ ಸಭೆಯನ್ನು ಏರ್ಪಡಿಸಲಾಗಿದ್ದು, ಸದರಿ ಸಭೆಯಲ್ಲಿ ಶೇ ಕಡ 15+3ರ ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಅಳವಡಿಸ ಬಾರದೆಂದು ತಪ್ಪಿದ್ದಲ್ಲಿ,ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ.ಎಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟವು ಸರ್ಕಾರಕ್ಕೆ ಈ ಮೂಲಕ ಸ್ಪಷ್ಟವಾಗಿ ಎಚ್ಚರಿಸುತ್ತದೆ ಎಂದಿದ್ದಾರೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬ ಗಳ ಸಮೀಕ್ಷೆಯ ಅಂಕಿ ಅಂಶಗಳೊAದಿಗೆ ನ್ಯಾಯಮೂರ್ತಿ ನಾಗಮೋ ಹನ್ ದಾಸ್ ರವರ ಆಯೋಗದ ಅಂಕಿ ಅಂಶಗಳನ್ನು ಹೊಲಿಕೆ ಮಾಡು ವುದು, ವ್ಯತ್ಯಾಸಗಳು ಕಂಡುಬAದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕು ಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳುವುದು.ನ್ಯಾಯಮೂ ರ್ತಿ ನಾಗಮೋಹನ್ ದಾಸ್ ವರದಿಯು ಪ್ರಸ್ತುತ ಸರ್ಕಾರಕ್ಕೆ ಸಲ್ಲಿಕೆಯಾದ ವರದಿಯ ಸಂಪೂರ್ಣ ಅಧ್ಯಯನಕ್ಕೆ ಕಲ್ಪಿಸುವುದು ಪುರಸ್ಕೃತವಾದ ಭಾಗ,ತಿರಸ್ಕೃತವಾದ ಭಾಗವನ್ನು, ಪರೀಷ್ಕೃತವಾದ ಭಾಗಗಳನ್ನು ತಿಳಿದುಕೊಳ್ಳುವುದು. ಈವರೆಗೂ ಜಾರಿಯಲ್ಲಿರುವ ಸುಪ್ರೀಂಕೋರ್ಟ್ ಆದೇಶಗಳ ಮಿತಿಯಲ್ಲಿ ಮತ್ತು ಮಾಹಿತಿಯಲ್ಲಿ ಒಳಪಡುತ್ತದೆ ಎಂದು ತಿಳಿಯುವುದು.
ಎಲ್ಲಾ ಸಮುದಾಯಗಳ ಪರಮಪೂಜ್ಯರನ ಸಭೆ ಕರೆದು ನಿರ್ಧಾರವ ನ್ನು ತೆಗೆದುಕೊಳ್ಳುವುದು. ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇ ರಿರುವ 63 ಜಾತಿಗಳ ಗುಂಪನ್ನು ಪಟ್ಟಿಮಾಡುವುದು. ಚಿತ್ರದುರ್ಗ ಜಿಲ್ಲೆಯಲ್ಲಿ ಛಲವಾದಿ, ಬಲಗೈ, ಹೊಲಯ ಸಮುದಾಯ ಕೇವಲ 223 ಎಂದು ನ್ಯಾಯಮೂರ್ತಿ ನಾಗಮೋಹನ್ದಾಸ್ ವರದಿಯಲ್ಲಿ ದಾಖಲಿಸಿ ರುವುದನ್ನು ಮರು ಪರಿಶೀಲಿಸಿ ಉದ್ದೇಶ ಪೂರ್ವಕವಾಗಿ ಬಲಗೈ ಸಮು ದಾಯದ ಜನಸಂಖ್ಯೆಯನ್ನು ಕಡಿಮೆ ಮಾಡಿರುವ ಆಯೋಗದ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡುವಂತೆ ಆಗ್ರಹಿಸಲಾಯಿತು.
ಈ ಸುದ್ದಿ ಗೋಷ್ಟಿಯಲ್ಲಿ ಛಲವಾದಿ ಮಹಾಸಭಾದ ಉಪಾಧ್ಯಕ್ಷರಾದ ಓಂಕಾರಮೂರ್ತಿ, ಕಾರ್ಯದರ್ಶಿ ರವೀಂದ್ರ, ಅಣ್ಣಪ್ಪ, ತಿಪ್ಪೇಸ್ವಾಮಿ ಸೇರಿ ದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು