LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಶಿವಯೋಗಿ ಮಂದಿರದಲ್ಲಿ ತರಬೇತಿ

ದಾವಣಗೆರೆ: ಜೂನ್ 18 ರಂದು ನಗರದ ಶಿವಯೋಗಿ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆಯುಷ ಇಲಾಖೆ, ಜಿಲ್ಲಾ ಯೋಗ ಒಕ್ಕೂಟ ಇವರ ಸಹಯೋಗದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಯೋಗ ತರಬೇತಿ ಶಿಬಿರವನ್ನು ಸಾರ್ವಜನಿಕರಿಗೆ ಉಚಿತವಾಗಿ ಹಮ್ಮಿಕೊಳ್ಳಲಾಗಿತ್ತು.
ಶ್ರೀ ಬಸವ ಪ್ರಭು ಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಯೋಗದ ಮಹತ್ವವನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಆಯುಷ ಅಧಿಕಾರಿಗಳಾದ ಡಾ. ಯೋಗೇಂದ್ರಕುಮಾರ್.ಬಿ ಯು. ಪ್ರಾಸ್ತಾವಿಕವಾಗಿ ಮಾತನಾಡಿ ಆಯುಷ ಪದ್ದತಿಯ ಪ್ರಯೋಜನಗಳು ಹಾಗೂ ಯೋಗದಿಂದಾಗುವ ಪ್ರಯೋಜನಗಳನ್ನು ಸಾರ್ವಜನಿಕರಿಗೆ ತಿಳಿಸಿದರು.ಯೋಗ ಒಕ್ಕೂಟದ ಅಧ್ಯಕ್ಷರಾದ ವಾಸುದೇವ ರಾಯ್ಕರ್ ಆಯುಷ್ಇ‌ಲಾಖೆಯ ಜೊತೆಗೂಡಿ ಕಳೆದ 10 ವರ್ಷಗಳಿಂದಲೂ ಅಂತರಾಷ್ಟ್ರೀಯ ಯೋಗದಿನ ಆಚರಿಸುತ್ತಾ ಬಂದಿದ್ದು ಈ ವರ್ಷವೂ ಜೊತೆಗೂಡಿ 10ನೇ ಅಂತರಾಷ್ಟ್ರೀಯ ಯೋಗದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಯೋಗ ಪ್ರಾತ್ಯಕ್ಷಿತೆಯನ್ನು ಯೋಗಪಟು ಚನ್ನಬಸವಣ್ಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸುಮಾರು 600ಕ್ಕೂ ಹೆಚ್ಚು ಸಾರ್ವಜನಿಕರು ಭಾಗವಹಿಸಿದ್ದರು. ಯೋಗ ಒಕ್ಕೂಟದ ಪದಾಧಿಕಾರಿಗಳಾದ ಪರಶುರಾಮ್, ಕೀರ್ತಿರಾಜು, ಪ್ರಕಾಶ್ ವತ್ತಂಗಿ, ಮಾದೇಗೌಡ್ರು, ಅನಿಲ್ ರಾಯ್ಕರ್ ಹಾಗೂ ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು