LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Shimoga

ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ವರ್ಗಾವಣೆ

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿಅವರನ್ನು ವರ್ಗಾವಣೆ ಮಾಡಲಾಗಿದೆ. ಷಡಕ್ಷರಿ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಲೆಕ್ಕಾಧೀಕ್ಷಕರ ಹುದ್ದೆಯಿಂದ ಕೋಲಾರ ಸಮಾಜ ಕಲ್ಯಾಣ ಇಲಾಖೆ ಲೆಕ್ಕಾಧೀಕ್ಷಕರ ಹುದ್ದೆಗೆ ಎತ್ತಂಗಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ.

ರಾಯಲ್ಟಿ ಪಾವತಿಸದೆ ಶಿವಮೊಗ್ಗದ ಅಬ್ಬಲಗೆರೆ ಕೆರೆಯಿಂದ ಅಕ್ರಮವಾಗಿ ಮಣ್ಣು ಸಾಗಿಸಿ ಸರ್ಕಾರದ ಖಜಾನೆಗೆ 71,45,920 ರೂ. ನಷ್ಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಇಂಜಿನಿಯರ್ ವರದಿ ನೀಡಿದ್ದರು.

ಅದರಂತೆ ಶಿವಮೊಗ್ಗ ಜಿಲ್ಲಾಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಿ.ಎಸ್.ಷಡಕ್ಷರಿಯವರನ್ನು ಕುಡಲೇ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು. ಅದರಂತೆ ಇದೀಗ ಷಡಕ್ಷರಿಯವರನ್ನಿ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ.

ಅಲ್ಲದೇ ಷಡಕ್ಷರಿ ಶಿವಮೊಗ್ಗದಲ್ಲಿ ಕರ್ತವ್ಯ ಸ್ಥಾನದಲ್ಲಿರದೇ ಬೆಂಗಳೂರಿನಲ್ಲಿಯೇ ಹೆಚ್ಚು ಸಮಯ ಇರುತ್ತಾರೆ ಎನ್ನುವ ಆರೋಪ ಕೇಳಿಬಂದಿತ್ತು. ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಹೆಚ್ಚು ಕೆಲಸ ಇಲ್ಲದೇ ಇರುವುದರಿಂದ ಶಿವಮೊಗ್ಗದ ಬದಲು ಬೆಂಗಳೂರಿನಲ್ಲಿಯೇ ಸಮಯ ಕಳೆಯುತ್ತಿದ್ದರು ಎಂದು ಹೇಳಲಾಗಿತ್ತು.

ಇದನ್ನೂ ಸಹ ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಇದೀಗ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಿದೆ. ಅಷ್ಟೇ ಅಲ್ಲ, ಹೆಚ್ಚಿನ ಕೆಲಸದ ಒತ್ತಡವಿರುವ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರನ್ನಾಗಿ ನೇಮಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು