LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬುಡಕಟ್ಟು ಸಮುದಾಯಕ್ಕೆ ಪರಿಷತ್‍ನಲ್ಲಿ ಪ್ರಾತಿನಿಧ್ಯಕ್ಕೆ ಆಗ್ರಹ

ಬೆಂಗಳೂರು: ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆಯಲ್ಲಿ ಬುಡಕಟ್ಟು ಸಮುದಾಯಕ್ಕೆ ಪ್ರಾತಿನಿಧ್ಯೆ ನೀಡದೇ ಅನ್ಯಾಯ ಮಾಡಲಾಗಿದ್ದು, ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಸಮುದಾಯದವರನ್ನು ಗುರುತಿಸಿ ನಾಮನಿರ್ದೇಶನ ಮಾಡಬೇಕು. ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಎಸ್.ಸಿ/ಎಸ್.ಟಿ, ಅಲೆಮಾರಿ ಘಟಕ ರಚಿಸುವಂತೆ ಎಸ್.ಸಿ/ಎಸ್.ಟಿ, ಅಲೆಮಾರಿ, ವಿಮುಕ್ತ ಬುಡಕಟ್ಟು ಒಕ್ಕೂಟ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆದರ್ಶ್ ಎಲ್ಲಪ್ಪ, ಅವಕಾಶ ವಂಚಿತ ಅಲೆಮಾರಿ ಜಾತಿಗಳಿಗೆ ರಾಜಕೀಯ ಪಕ್ಷಗಳು ಆದ್ಯತೆ ನೀಡಬೇಕು. ರಾಜ್ಯದಲ್ಲಿ ಅವಕಾಶ ವಂಚಿತ 51-ಎಸ್ಸಿ, 23-ಎಸ್ಟಿ ಅಲೆಮಾರಿ ಜಾತಿಗಳಿದ್ದು, 25ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯಿದೆ. ಈ ಸಮುದಾಯವು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದಿದೆ ಎಂದರು.

ಪಾರಂಪರಿಕ ವೃತ್ತಿ ಅನುಸರಿಸುತ್ತಾ ಅಸಂಘಟಿತ ಸಮುದಾಯವಾಗಿರುವ ನಮಗೆ ರಾಜಕೀಯ ಪ್ರಾತಿನಿಧ್ಯ ನೀಡಿಲ್ಲ. ರಾಜ್ಯದಲ್ಲಿ ಯಾವುದೇ ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ/ತಾಲ್ಲೂಕು ಪಂಚಾಯತ್ ಅಧ್ಯಕ್ಷರು ಮತ್ತು ಕನಿಷ್ಠ ಪಕ್ಷ ಸದಸ್ಯರಾಗಿಲ್ಲ. ಕೆ.ಪಿ.ಎಸ್ಸಿ ಸದಸ್ಯತ್ವ ಗಗನ ಕುಸುಮವಾಗಿದೆ. ನಮ್ಮಲ್ಲಿ ಸಂಘಟಕರು, ವಿದ್ವಾಂಸರು, ತಜ್ಞರು, ಅನುಭವಿಗಳು ಇದ್ದರೂ ಸಹ, ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆ ಆಗಲು ಸಾಧ್ಯವಾಗುತ್ತಿಲ್ಲ ಎಂದರು.

ಇತ್ತೀಚೆಗೆ ಎಸ್ಸಿ/ಎಸ್ಟಿ ಅಲೆಮಾರಿ ಅಭಿವೃದ್ದಿ ನಿಗಮ ಸ್ಥಾಪಿಸಲಾಗಿದ್ದರೂ ಸಹ ಸಮರ್ಪಕ ಅನುದಾನ ನೀಡದೇ ವಂಚಿಸಲಾಗುತ್ತಿದೆ. ವಿಧಾನ ಪರಿಷತ್ ಮೂಲಕ ರಾಜಕೀಯ - ಅವಕಾಶ ನೀಡಲು ಇರುವ ಅವಕಾಶವನ್ನು ಮತ್ತೆ ಅಲೆಮಾರಿಗಳ ಹೆಸರಿನಲ್ಲಿ ಅಲೆಮಾರಿಗಳಲ್ಲದ ವ್ಯಕ್ತಿಗಳು ಕಬಳಿಸಲುಹೊಂಚುಹಾಕುತ್ತಿರುವುದು ಖಂಡನೀಯ ಎಂದು ಆದರ್ಶ್ ಯಲ್ಲಪ್ಪ ದೂರಿದರು.ಸುದ್ದಿಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ವೆಂಕಟೇಶ್ ದೊರ ಮತ್ತಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು