LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಖ್ಯಾತ ಹೃದ್ರೋಗ ತಜ್ಞ ಡಾ.ಹೆಚ್.ಎಸ್.ನಟರಾಜ್ ಶೆಟ್ಟಿ ಅವರಿಗೆ ಗೌರವ

ಬೆಂಗಳೂರು: ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನದ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ, ಇತ್ತಿಚಿನ ದಿನಗಳಲ್ಲಿ ಎಚ್‍ಐವಿ ಸೋಂಕು ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮಾರಂಭದಲ್ಲಿ ಭಾಗವಹಿಸಿದ ಏಡ್ಸ್ ಬಾಧಿತ 64 ವರ್ಷದ ವಯೋವೃದ್ಧ ತ್ಯಾಗರಾಜ್‍ಗೆ ಏಡ್ಸ್ ಮತ್ತು ಹೃದ್ರೋಗ ಸಮಸ್ಯೆ ಇದ್ದು ಈತನಿಗೆ ಸ್ಟಂಟ್ ಅಳವಡಿಸಿ ಉತ್ತಮ ಚಿಕಿತ್ಸೆ ನೀಡಿದ ಜಯದೇವ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ. ಹೆಚ್.ಎಸ್.ನಟರಾಜ್ ಶೆಟ್ಟಿ ರವರ ವೈದ್ಯಕೀಯ ಸೇವೆಯನ್ನು ಗುರುತಿಸಿ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಬೆನ್ನು ತಟ್ಟಿ ಅಭಿನಂದಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಮಾತನಾಡಿ `ಕರ್ನಾಟಕ ಪ್ರಿವೆನ್ಷನ್ ಸೊಸೈಟಿ ಏಡ್ಸ್ ನಿಯಂತ್ರಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. `ಸಮುದಾಯಗಳು ಮುನ್ನಡೆಸಲಿ' ಎನ್ನುವ ಘೋಷವಾಕ್ಯದೊಂದಿಗೆ ಈ ವರ್ಷ ಏಡ್ಸ್ ದಿನಾಚರಣೆ ಆಚರಿಸಲಾಯಿತು ಹಾಗೂ ಸಮಾರಂಭದಲ್ಲಿ ಡಾ.ಹೆಚ್. ಎಸ್. ನಟರಾಜ್ ಶೆಟ್ಟಿ, ಬ್ಯಾಪ್ಟಿಸ್ಟ್ ಆಸ್ಪತ್ರೆಯ ಡಾ.ರವಿ ಕುಮಾರ್ ಸೇರಿದಂತೆ ಇನ್ನು ಅನೇಕ ವೈದ್ಯರುಗಳಿಗೆ ಸನ್ಮಾನಿಸಿದರು, ಕಾರ್ಯಕ್ರಮದಲ್ಲಿ ರಾಜ್ಯ ಏಡ್ಸ ನಿಯಂತ್ರಣ ರಾಯಭಾರಿಗಳಾದ ನಟ ನೆನಪಿರಲಿ ಪ್ರೇಮ್, ನಟಿ ಸಂಜನ ಗುರ್ಲಾನಿ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ಎ. ಪಿ. ಎಸ್. ಅಧ್ಯಕ್ಷ ಅಭಯ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು