LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಒಪ್ಪಂದ ಮೀರದಂತೆ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್‌ನಡುವಿನ ಕದನ ವಿರಾಮದ ಘೋಷಣೆಯ ಬೆನ್ನಲ್ಲೇ ಜಾಗತಿಕ ರಾಜಕೀಯದಲ್ಲಿ ಮತ್ತೆ ಯುದ್ಧದ ಕಾರ್ಮೋಡಗಳು ಕವಿಯತೊಡಗಿವೆ. ತಮ್ಮ `ಟ್ರುತ್ ಸೋಶಿಯಲ್' ವೇದಿಕೆಯಲ್ಲಿ ಅಬ್ಬರಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಸರ್ಕಾರಕ್ಕೆ ಅತ್ಯಂತ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಇರಾನ್ ಸುತ್ತಮುತ್ತ ಅಮೆರಿಕದ ನೌಕಾಪಡೆ, ಯುದ್ಧ ವಿಮಾನಗಳು ಮತ್ತು ಮಿಲಿಟರಿ ಸಿಬ್ಬಂದಿ ಸರ್ವ ಸನ್ನದ್ಧ ಸ್ಥಿತಿಯಲ್ಲಿ ಇರಲಿದ್ದಾರೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.
ಹೆಚ್ಚುವರಿ ಮದ್ದುಗುಂಡು ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ನಮ್ಮ ಸೇನೆ ಇರಾನ್‌ನ ಸುತ್ತಲೂ ಮೊಕ್ಕಾಂ ಹೂಡಲಿದೆ. ಒಂದು ಶಾಶ್ವತ ಮತ್ತು ನೈಜ ಒಪ್ಪಂದ ಏರ್ಪಡುವವರೆಗೆ ನಮ್ಮ ಮಿಲಿಟರಿ ಅಲ್ಲಿಂದ ಕದಲುವುದಿಲ್ಲ ಎಂದು ಟ್ರಂಪ್ ಘೋಷಿಸಿದ್ದಾರೆ. ಒಪ್ಪಂದದ ಪಾಲನೆಯಲ್ಲಿ ಇರಾನ್ ಒಂದು ವೇಳೆ ವಿಫಲವಾದರೆ ಅಥವಾ ವಾಷಿಂಗ್ಟನ್‌ನ ಶರತ್ತುಗಳನ್ನು ಗಾಳಿಗೆ ತೂರಿದರೆ, ಅಮೆರಿಕ ಹಿಂದೆAದೂ ನೋಡಿರದ ರೀತಿಯಲ್ಲಿ ಭೀಕರ ಮಿಲಿಟರಿ ದಾಳಿ ನಡೆಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಯಾವುದೇ ಕಾರಣಕ್ಕೂ ಒಪ್ಪಂದ ಮುರಿದರೆ ಆಗ ಗುಂಡಿನ ದಾಳಿ ಆರಂಭವಾಗಲಿದೆ. ಅದು ಹಿಂದೆAದಿಗಿAತಲೂ ದೊಡ್ಡದಾಗಿ ಮತ್ತು ಬಲವಾಗಿರಲಿದೆ ಎಂಬುದು ಟ್ರಂಪ್ ಹೇಳಿದ್ದಾರೆ.
ಇರಾನ್‌ನ ಅಸಮಾಧಾನ ಮತ್ತು ಇಸ್ರೇಲ್ ದಾಳಿ ಬುಧವಾರ ಇಸ್ರೇಲ್ ಪಡೆಗಳು ಲೆಬನಾನ್ ಮೇಲೆ ನಡೆಸಿದ ಭೀಕರ ದಾಳಿಯಲ್ಲಿ ನೂರಾರು ಜನರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇರಾನ್ ಸರ್ಕಾರ, ಅಮೆರಿಕದೊಂದಿಗೆ ಶಾಶ್ವತ ಶಾಂತಿ ಮಾತುಕತೆ ನಡೆಸುವುದು ಈಗಿನ ಸಂದರ್ಭದಲ್ಲಿ ಅಸಮಂಜಸ ಎಂದು ಕಿಡಿಕಾರಿದೆ. ಈ ಬೆಳವಣಿಗೆಯು ಎರಡೂ ದೇಶಗಳ ನಡುವಿನ ಮಾತುಕತೆಗೆ ಹಿನ್ನಡೆಯುಂಟು ಮಾಡಿದೆ.
ಹಾರ್ಮುಜ್ ಜಲಸಂಧಿಯ ಭದ್ರತೆ ಟ್ರಂಪ್ ತಮ್ಮ ಪೋಸ್ಟ್ನಲ್ಲಿ ಮತ್ತೊಂದು ಪ್ರಮುಖ ಅಂಶವನ್ನು ಪ್ರಸ್ತಾಪಿಸಿದ್ದಾರೆ. ಇರಾನ್ ಯಾವುದೇ ಪರಮಾಣು ಶಸ್ತ್ರಾಸ್ತ್ರಗಗಳನ್ನು ಹೊಂದಿರಬಾರದು ಮತ್ತು ಜಾಗತಿಕ ತೈಲ ವ್ಯಾಪಾರಕ್ಕೆ ಪ್ರಮುಖವಾದ ಹಾರ್ಮುಜ್ ಜಲಸಂಧಿಯು ಸುರಕ್ಷಿತವಾಗಿ ಮತ್ತು ಮುಕ್ತವಾಗಿರಬೇಕು. ಇದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು