LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಹಿಳೆ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕನಕಪುರ: ಸಾಲ ಪಡೆದಿದ್ದ ಹಣ ವಾಪಸ್ ಕೊಡುವು ದಾಗಿ ಕರೆದು ಮಹಿಳೆಯನ್ನು ಕೊಲೆ ಮಾಡಿದ್ದ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.ತಾಲೂಕಿನ ಶ್ರೀನಿವಾಸನಹಳ್ಳಿ ರವಿಕುಮಾರ್(40) ಈತನ ಪತ್ನಿ ಆಶಾ (30) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಕಳೆದ ಜೂನ್ 4 ರಂದು ಮಂಗಳವಾರ ಕಾಣೆಯಾಗಿದ್ದ ಕೋಡಿಹಳ್ಳಿ ಹೋಬಳಿಯ ಟಿ ಗೊಲ್ಲಹಳ್ಳಿ ಮಹಿಳೆ ಸುನಂದಮ್ಮ (55) ಶವ ಮರುದಿನ ಬೆಳ್ಳಗ್ಗೆ ಚೌಕಸಂದ್ರ ಗ್ರಾಮದರೇಷ್ಮೆ ತೋಟದಲ್ಲಿ ಗುಂಡಿ ತೋಡಿ ಹೂತಿಟ್ಟಿದ್ದ ಸ್ಥಿತಿಯಲ್ಲಿಪತ್ತೆಯಾಗಿತ್ತು. ಮೃತರ ಮಗ ವಿದ್ಯಾನಂದ ನೀಡಿದದೂರಿನ ಮೇರೆಗೆ ಎ1 ಶ್ರೀನಿವಾಸನ ಹಳ್ಳಿ ರವಿಕುಮಾರ್, ಎ 2 ಈತನ ಪತ್ನಿ ಆಶಾ,ಎ 3 ಆಶಾ ಅವರ ತಂದೆನಾಗರಾಜು,ಇವರ ತಾಯಿ ರತ್ನಮ್ಮ ಸೇರಿ ನಾಲ್ವರು ಆರೋಪಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣದ ಎ 2 ಆರೋಪಿ ಆಶಾ ಅವರ ತಂದೆ ಎ 3 ಆರೋಪಿ ತುಂಗಣಿ ಗ್ರಾಮದ ನಾಗರಾಜು ಅವರನ್ನು ಬಂಧಿಸಿ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದರು.

ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಗಳಿಗೆ ಬಲೆ ಬೀಸಿದ್ದ ಗ್ರಾಮಾಂತರ ಠಾಣೆ ಪೊಲೀಸರು ಎ 1ಆರೋಪಿ ರವಿಕುಮಾರ್ ಈತನ ಪತ್ನಿ ಎ 2 ಆರೋಪಿ ಆಶಾ, ಇಬ್ಬರನ್ನು ಭಾನುವಾರ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ವಿಪರೀತ ಸಾಲ ಮಾಡಿಕೊಂಡು ಸಾಲ ತೀರಿಸಲು ಸಾಧ್ಯವಾಗಲಿಲ್ಲ ಸುನಂದಮ್ಮ ಅವರ ಬಳಿ ಹಣ ಸಾಲ ಪಡೆದಿದ್ದೆ ಅದನ್ನು ವಾಪಸ್ ಕೊಡುತ್ತೇವೆ,

ಕಳೆದ ಜೂನ್ 4 ರಂದು ಮಂಗಳವಾರ ಬೆಳಗ್ಗೆ ಸುನಂದಮ್ಮ ಅವರನ್ನು ಚೌಕಸಂದ್ರ ಗ್ರಾಮದ ಬಳಿ ಗುತ್ತಿಗೆಗೆ ಮಾಡಿಕೊಂಡಿದ್ದ ರೇಷ್ಮೆ ತೋಟಕ್ಕೆ ಕರೆಸಿಕೊಂಡು ರೇಷ್ಮೆ ಹುಳು ಸಾಕಾಣಿಕೆ ಮನೆಯಲ್ಲಿ ಸುನಂದಮ್ಮ ಅವರ ಕುತ್ತಿಗೆಗೆ ಟವಲ್ ಬಿಗಿದು ಕೊಲೆ ಮಾಡಿ ಶವವನ್ನು ಒಂದು ದಿನ ಅಲ್ಲೇ ಇರಿಸಿ ಮಂಗಳವಾರ ಮುಂಜಾನೆ ಮೂರು ಗಂಟೆ ಸಮಯದಲ್ಲಿ ರೇಷ್ಮೆ ತೋಟದಲ್ಲಿ ಗುಂಡಿ ತೆಗೆದು ಹೂತಿಟ್ಟು ಆಕೆ ಮೈ ಮೇಲಿದ್ದ ಚಿನ್ನಾಭರಣವನ್ನು ಅಡಮಾನ ವಿಟ್ಟು 1.44 ಸಾಲ ಪಡೆದಿದ್ದೆ ಎಂದು ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಸೋಮವಾರ ಘಟನಾ ಸ್ಥಳಕ್ಕೆ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು