LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಮೈಸೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಖದೀಮರಿಬ್ಬರ ಬಂಧನ

ಮೈಸೂರು: ಮೈಸೂರಿನಲ್ಲಿ ಎರಡು ಪ್ರತ್ಯೇಕ ಕಳ್ಳತನ ಪ್ರಕರಣ ಭೇದಿಸಿರುವಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 35 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.ಒಂದು ಪ್ರಕರಣದಲ್ಲಿ ಆರೋಪಿಯನ್ನು ಮೈಸೂರಿನ ಹನುಮಂತ ಸರ್ಕಲ್ ಬಳಿ ಬಂಧಿಸಿ ವಿಚಾರಣೆ ಮಾಡಲಾಯಿತು.

ಆತನ ಅಪರಾಧ ಹಿನ್ನೆಲೆಯನ್ನು ಪರಿಶೀಲಿಸಿದಾಗ ಕೆಲವು ಕಡೆ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿತು. ಆರೋಪಿಯು ನಜರ್‍ಬಾದ್, ಆಲನಹಳ್ಳಿ ಹಾಗೂ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿರುವುದು ಪತ್ತೆಯಾಯಿತು ಎಂದು ತಿಳಿಸಿದರು. ಮೂರು ಕಡೆ ಕಳ್ಳತನ ಮಾಡಿದ್ದ ಆರೋಪಿಯಿಂದ 23 ಲಕ್ಷ ರೂಪಾಯಿ ಮೌಲ್ಯದ 402 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಮತ್ತೊಂದು ಪ್ರಕರಣದಲ್ಲಿ ಮೈಸೂರಿನ ರಾಜೀವ್‍ನಗರದ ಸೂರ್ಯ ನಾರಾಯಣಸ್ವಾಮಿ ದೇವಸ್ಥಾನದ ಬಳಿ ಒಬ್ಬ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿದಾಗ ಮೈಸೂರಿನ ವಿದ್ಯಾರಣ್ಯಪುರಂ, ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಕಳ್ಳತನ ಮಾಡಿರುವ ಮಾಹಿತಿ ದೊರಕಿತು.

ಆರೋಪಿಯಿಂದ 12 ಲಕ್ಷ ರೂಪಾಯಿ ಮೌಲ್ಯದ 20 ಗ್ರಾಂ ಚಿನ್ನಾಭರಣ, 29 ಗ್ರಾಂ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಬಿ.ರಮೇಶ್ ಹೇಳಿದರು. ಕಳೆದ ವರ್ಷಕ್ಕೆ ಹೋಲಿಸಿದರೆ ಮೈಸೂರು ನಗರದಲ್ಲಿ ಸರಗಳ್ಳತನ ಪ್ರಕರಣಗಳ ಸಂಖ್ಯೆ ಬಹಳ ಕಡಿಮೆಯಾಗಿದೆ. 2022 ರಲ್ಲಿ 72 ಸರಗಳ್ಳತನ ಪ್ರಕರಣ ನಡೆದಿತ್ತು. ಈ ವರ್ಷ ಜನವರಿಯಿಂದ ಇಲ್ಲಿ ತನಕ 12 ಸರಗಳ್ಳತನ ಪ್ರಕರಣಗಳು ನಡೆದಿದೆ ಎಂದು ಅಂಕಿ ಅಂಶಗಳ ವಿವರ ಇದೇ ಸಂದರ್ಭದಲ್ಲಿ ಆಯುಕ್ತರು ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು